ಮಿಕ

1 2 3 4 5 6 7


ಅಧ್ಯಾಯ 4

ಅಂತ್ಯದಿವಸಗಳಲ್ಲಿ ಆಗುವದೇನಂದರೆ, ಕರ್ತನ ಆಲಯದ ಪರ್ವತವು ಬೆಟ್ಟಗಳ ತುದಿಯಲ್ಲಿ ನೆಲೆಯಾಗಿ ಗುಡ್ಡಗಳಿಗಿಂತ ಎತ್ತರ ವಾಗಿರುವದು; ಜನಗಳು ಅದರ ಬಳಿಗೆ ಪ್ರವಾಹದಂತೆ ಬರುವರು.
2 ಅನೇಕ ಜನಾಂಗಗಳು ಬಂದು ಹೇಳುವ ದೇನಂದರೆ--ಬನ್ನಿರಿ; ಕರ್ತನ ಬೆಟ್ಟಕ್ಕೆ ಯಾಕೋಬಿನ ದೇವರ ಆಲಯಕ್ಕೆ ಹೋಗೋಣ; ಆತನು ತನ್ನ ಮಾರ್ಗಗಳನ್ನು ನಮಗೆ ಬೋಧಿಸುವನು; ನಾವು ಆತನ ಹಾದಿಗಳಲ್ಲಿ ನಡೆಯುವೆವು; ಯಾಕಂದರೆ ಚೀಯೋನಿನೊಳಗಿಂದ ನ್ಯಾಯಪ್ರಮಾಣವೂ ಯೆರೂ ಸಲೇಮಿನೊಳಗಿಂದ ದೇವರ ವಾಕ್ಯವೂ ಹೊರಡು ವದು.
3 ಆಗ ಆತನು ಅನೇಕ ಜನಗಳ ಮಧ್ಯದಲ್ಲಿ ನ್ಯಾಯತೀರಿಸಿ ದೂರದಲ್ಲಿರುವ ಬಲವಾದ ಜನಾಂಗ ಗಳಿಗೆ ತೀರ್ಪುಕೊಡುವನು; ಅವರು ತಮ್ಮ ಕತ್ತಿಗಳನ್ನು ನೇಗಲಿನ ಗುಳಗಳಾಗಿಯೂ ತಮ್ಮ ಈಟಿಗಳನ್ನು ಕುಡು ಗೋಲುಗಳಾಗಿಯೂ ಮಾಡುವರು; ಜನಾಂಗವು ಜನಾಂಗದ ಮೇಲೆ ಕತ್ತಿಯನ್ನು ಎತ್ತದು; ಯುದ್ಧಾಭ್ಯಾಸ ಇನ್ನು ಮೇಲೆ ಇರದು.
4 ಆದರೆ ಒಬ್ಬೊಬ್ಬನು ತನ್ನ ತನ್ನ ದ್ರಾಕ್ಷೇ ಬಳ್ಳಿಯ ಕೆಳಗೂ ತನ್ನ ತನ್ನ ಅಂಜೂರದ ಗಿಡದ ಕೆಳಗೂ ಕೂತುಕೊಳ್ಳುವನು. ಭಯಪಡಿಸುವವನು ಯಾರೂ ಇರುವದಿಲ್ಲ. ಯಾಕಂದರೆ ಸೈನ್ಯಗಳ ಕರ್ತನ ಬಾಯಿ ಅದನ್ನು ನುಡಿದಿದೆ.
5 ಎಲ್ಲಾ ಜನಗಳಲ್ಲಿ ಪ್ರತಿಯೊಬ್ಬನು ತನ್ನ ತನ್ನ ದೇವರ ಹೆಸರಿನಲ್ಲಿ ನಡೆ ಯುವನು; ಆದರೆ ನಾವು ನಮ್ಮ ದೇವರಾದ ಕರ್ತನ ಹೆಸರಿನಲ್ಲಿ ಎಂದೆಂದಿಗೂ ನಡೆಯುವೆವು.
6 ಕರ್ತನು ಹೀಗೆ ಅನ್ನುತ್ತಾನೆ--ಆ ದಿನದಲ್ಲಿ ಕುಂಟಾದದ್ದನ್ನು ಕೂಡಿಸಿ ತಳ್ಳಿಬಿಟ್ಟದ್ದನ್ನೂ ನಾನು ಕಷ್ಟಪಡಿಸಿದವರನ್ನೂ ಒಟ್ಟುಗೂಡಿಸುವೆನು.
7 ಕುಂಟಾದದ್ದನ್ನು ಉಳಿದದ್ದ ನ್ನಾಗಿಯೂ ತಳ್ಳಿಬಿಟ್ಟಿದ್ದನ್ನು ಬಲವಾದ ಜನಾಂಗವಾ ಗಿಯೂ ಮಾಡುವೆನು; ಕರ್ತನು ಇಂದಿನಿಂದ ಸದಾ ಕಾಲವೂ ಚೀಯೋನ್‌ ಪರ್ವತದಲ್ಲಿ ಅವರ ಮೇಲೆ ಆಳುವನು,
8 ಇದಲ್ಲದೆ ನೀನು ಮಂದೆಯ ಬುರುಜೇ ಚೀಯೋನಿನ ಕುಮಾರ್ತೆಯ ದುರ್ಗವೇ, ನಿನಗೆ ಬರು ವದು, ಹೌದು, ಮೊದಲನೇ ದೊರೆತನವೂ ಯೆರೂ ಸಲೇಮಿನ ಕುಮಾರ್ತೆಗೆ ರಾಜ್ಯವೂ ಬರುವದು.
9 ಈಗ ಯಾಕೆ ಗಟ್ಟಿಯಾಗಿ ಕೂಗುತ್ತೀ? ನಿನ್ನಲ್ಲಿ ಅರಸನಿಲ್ಲವೋ? ನಿನ್ನ ಆಲೋಚನಾಕರ್ತನು ನಾಶ ವಾದನೋ? ಹೆರುವವಳಂತೆ ನಿನಗೆ ವೇದನೆ ಬಂತು.
10 ಚೀಯೋನಿನ ಕುಮಾರ್ತೆಯೇ, ಹೆರುವವಳಂತೆ ವೇದನೆಪಡು. ಈಗ ಪಟ್ಟಣದೊಳಗಿಂದ ಹೊರಟು ಹೊಲದಲ್ಲಿ ವಾಸಮಾಡಿ ಬಾಬೆಲಿಗೆ ಹೋಗುವಿ; ಅಲ್ಲಿ ನಿನಗೆ ಬಿಡುಗಡೆಯಾಗುವದು; ಅಲ್ಲಿ ಕರ್ತನು ನಿನ್ನನ್ನು ನಿನ್ನ ಶತ್ರುಗಳ ಕೈಯೊಳಗಿಂದ ವಿಮೋಚಿ ಸುವನು.
11 ಆದರೆ ಈಗ ಅನೇಕ ಜನಾಂಗಗಳು ನಿನಗೆ ವಿರೋಧವಾಗಿ ಕೂಡಿಬಂದಿವೆ; ಅವರು--ಅವಳು ಕೆಡಿಸಲ್ಪಡಲಿ, ಚೀಯೋನಿನ ಮೇಲೆ ನಮ್ಮ ಕಣ್ಣುಗಳು ದೃಷ್ಟಿಸಲಿ ಎಂದು ಹೇಳುತ್ತಾರೆ.
12 ಆದರೆ ಕರ್ತನ ಯೋಚನೆಗಳು ಅವರಿಗೆ ತಿಳಿಯವು, ಆತನ ಆಲೋಚನೆಯನ್ನು ಅವರು ಗ್ರಹಿಸಲಿಲ್ಲ; ಕಣದಲ್ಲಿ ಸಿವುಡುಗಳ ಹಾಗೆ ಅವರನ್ನು ಕೂಡಿಸುವನು.
13 ಚೀಯೋನಿನ ಕುಮಾರ್ತೆಯೇ; ಎದ್ದು ತುಳಿ. ನಿನ್ನ ಕೊಂಬನ್ನು ಕಬ್ಬಿಣವಾಗಿಯೂ ನಿನ್ನ ಗೊರಸೆಗಳನ್ನು ತಾಮ್ರವಾಗಿಯೂ ಮಾಡುವೆನು. ನೀನು ಅನೇಕ ಜನಗಳನ್ನು ಪುಡಿಪುಡಿಮಾಡುವಿ; ಮತ್ತು ಅವರ ಲಾಭವನ್ನು ಕರ್ತನಿಗೂ ಅವರ ಸಂಪತ್ತನ್ನು ಸಮಸ್ತ ಭೂಮಿಯ ಕರ್ತನಿಗೂ ಪ್ರತಿಷ್ಠೆ ಮಾಡುವೆನು.