ಯಾಕೋಬನು

1 2 3 4 5


ಅಧ್ಯಾಯ 1

ದೇವರಿಗೂ ಕರ್ತನಾದ ಯೇಸು ಕ್ರಿಸ್ತನಿಗೂ ದಾಸನಾಗಿರುವ ಯಾಕೋಬ ನು ಅನ್ಯದೇಶಗಳಲ್ಲಿ ಚದರಿರುವ (ಇಸ್ರಾಯೇಲ್‌) ಹನ್ನೆರಡು ಗೋತ್ರದವರಿಗೆ ವಂದನೆ.
2 ನನ್ನ ಸಹೋದರರೇ, ನೀವು ನಾನಾವಿಧವಾದ ಸಂಕಟಗಳಲ್ಲಿ ಬಿದ್ದಿರುವಾಗ ಅದನ್ನು ಕೇವಲ ಆನಂದ ಕರವಾದದ್ದೆಂದು ಎಣಿಸಿರಿ.
3 ನಿಮ್ಮ ನಂಬಿಕೆಗೆ ಆಗುವ ಪರಿಶೋಧನೆಯು ತಾಳ್ಮೆಯನ್ನುಂಟು ಮಾಡುತ್ತದೆಂದು ನೀವು ತಿಳಿಯಿರಿ.
4 ಆ ತಾಳ್ಮೆಯು ಸಿದ್ದಿಗೆ ಬಂದಾಗ ನೀವು ಸಂಪೂರ್ಣರೂ ಸಿದ್ಧವಾದವರೂ ಯಾವದರ ಲ್ಲಿಯೂ ಕಡಿಮೆಯಿಲ್ಲದವರೂ ಆಗಿರುವಿರಿ.
5 ನಿಮ್ಮಲ್ಲಿ ಯಾವನಿಗಾದರೂ ಜ್ಞಾನ ಕಡಿಮೆ ಯಾಗಿದ್ದರೆ ಅವನು ದೇವರನ್ನು ಕೇಳಿಕೊಳ್ಳಲಿ, ಅದು ಅವನಿಗೆ ದೊರಕುವದು; ದೇವರು ಹಂಗಿಸದೆ ಎಲ್ಲ ರಿಗೂ ಉದಾರ ಮನಸ್ಸಿನಿಂದ ಕೊಡುವಾತನಾಗಿದ್ದಾನೆ.
6 ಆದರೆ ಅವನು ಸ್ವಲ್ಪವೂ ಸಂದೇಹ ಪಡದೆ ನಂಬಿಕೆ ಯಲ್ಲಿ ಕೇಳಿಕೊಳ್ಳಲಿ. ಯಾಕಂದರೆ ಸಂದೇಹಪಡುವ ವನು ಗಾಳಿಯಿಂದ ಬಡಿಯಲ್ಪಟ್ಟ ಸಮುದ್ರದ ತೆರೆ ಯಂತೆ ಅಲೆದಾಡುತ್ತಿರುವನು.
7 ಆ ಮನುಷ್ಯನು ತಾನು ಕರ್ತನಿಂದ ಏನಾದರೂ ಹೊಂದುವೆನೆಂದು ಭಾವಿಸದೆ ಇರಲಿ.
8 ಎರಡು ಮನಸ್ಸುಳ್ಳವನು ತನ್ನ ಮಾರ್ಗಗಳ ಲ್ಲೆಲ್ಲಾ ಚಂಚಲನಾಗಿದ್ದಾನೆ.
9 ಹೀನಸ್ಥಿತಿಯಲ್ಲಿರುವ ಸಹೋದರನು ತಾನು ಉನ್ನತ ಸ್ಥಿತಿಗೆ ಬಂದೆನೆಂದು ಉಲ್ಲಾಸಪಡಲಿ;
10 ಐಶ್ವರ್ಯ ವಂತನಾದ ಸಹೋದರನು ತಾನು ದೀನಸ್ಥಿತಿಗೆ ಬಂದೆ ನೆಂದು ಉಲ್ಲಾಸಪಡಲಿ. ಆದರೆ ಐಶ್ವರ್ಯವಂತನು ಹುಲ್ಲಿನ ಹೂವಿನಂತೆ ಗತಿಸಿ ಹೋಗುವನು.
11 ಸೂರ್ಯನು ಉದಯಿಸಿದ ತಕ್ಷಣವೇ ಉಷ್ಣತೆ ಯಿಂದ ಹುಲ್ಲನ್ನು ಬಾಡಿಸಲು ಆ ಹುಲ್ಲಿನ ಹೂವು ಉದುರಿ ಅದರ ರೂಪದ ಸೊಗಸು ನಾಶವಾಗು ವದಷ್ಟೇ. ಹೀಗೆಯೇ ಐಶ್ವರ್ಯವಂತನು ತನ್ನ ದಾರಿ ಗಳಲ್ಲಿ ಬಾಡಿ ಹೋಗುವನು.
12 ಕಷ್ಟಗಳನ್ನು ಸಹಿಸಿಕೊಳ್ಳುವವನು ಧನ್ಯನು; ಅವನು ಪರಿಶೋಧಿತನಾದ ಮೇಲೆ ಕರ್ತನು ತನ್ನನ್ನು ಪ್ರೀತಿಸುವವರಿಗೆ ವಾಗ್ದಾನ ಮಾಡಿದ ಜೀವದ ಕಿರೀಟ ವನ್ನು ಹೊಂದುವನು;
13 ಯಾವನಾದರೂ ಶೋಧನೆಗೆ ಪ್ರೇರೇಪಿಸಲ್ಪಡುವಾಗ--ಈ ಪ್ರೇರಣೆಯು ನನಗೆ ದೇವರಿಂದ ಉಂಟಾಯಿತೆಂದು ಹೇಳಬಾರದು. ಯಾಕಂದರೆ ದೇವರು ಕೆಟ್ಟದ್ದರಿಂದ ಶೋಧಿಸಲಾರನು; ಆತನು ಯಾರನ್ನೂ ಶೋಧಿಸುವದೂ ಇಲ್ಲ.
14 ಆದರೆ ಪ್ರತಿಯೊಬ್ಬನು ತನ್ನ ಸ್ವಂತ ದುರಾಶೆಯಿಂದ ಎಳೆಯಲ್ಪಟ್ಟು ಮರುಳುಗೊಂಡವನಾಗಿ ಶೋಧಿಸಲ್ಪಡುತ್ತಾನೆ.
15 ಆಮೇಲೆ ದುರಾಶೆಯು ಗರ್ಭಧರಿಸಿ ಪಾಪವನ್ನು ಹೆರುತ್ತದೆ; ಪಾಪವು ಸಂಪೂರ್ಣವಾದ ಮೇಲೆ ಮರಣ ವನ್ನು ಹಡೆಯುತ್ತದೆ.
16 ನನ್ನ ಪ್ರಿಯ ಸಹೋದರರೇ, ತಪ್ಪು ಮಾಡಬೇಡಿರಿ.
17 ಪ್ರತಿಯೊಂದು ಒಳ್ಳೇ ದಾನವೂ ಸಂಪೂರ್ಣವಾದ ಪ್ರತಿವರವೂ ಮೇಲಣ ವುಗಳೇ; ಅವು ಬೆಳಕುಗಳ ತಂದೆಯಿಂದ ಇಳಿದು ಬರುತ್ತವೆ. ಆತನಲ್ಲಿ ಚಂಚಲತ್ವವೇನೂ ಇಲ್ಲ, ವ್ಯತ್ಯಾಸದ ನೆರಳೂ ಇಲ್ಲ.
18 ಆತನು ತನ್ನ ಚಿತ್ತದ ಪ್ರಕಾರ ಸತ್ಯವಾಕ್ಯದಿಂದ ನಮ್ಮನ್ನು ಹುಟ್ಟಿಸಿರಲಾಗಿ ನಾವು ಆತನ ಸೃಷ್ಟಿಗಳಲ್ಲಿ ಒಂದು ತರಹದ ಪ್ರಥಮ ಫಲ ಗಳಂತಾದೆವು.
19 ಆದದರಿಂದ ನನ್ನ ಪ್ರಿಯ ಸಹೋದರರೇ, ಪ್ರತಿ ಯೊಬ್ಬನು ಕಿವಿಗೊಡುವದರಲ್ಲಿ ತೀವ್ರವಾಗಿಯೂ ಮಾತನಾಡುವದರಲ್ಲಿ ಮತ್ತು ಕೋಪಿಸುವದರಲ್ಲಿ ನಿಧಾನವಾಗಿಯೂ ಇರಲಿ.
20 ಮನುಷ್ಯನ ಕೋಪವು ದೇವರ ನೀತಿಯನ್ನು ನಡಿಸುವದಿಲ್ಲ.
21 ಆದಕಾರಣ ಎಲ್ಲಾ ಮಲಿನತೆಯನ್ನೂ ಎಲ್ಲಾ ದುಷ್ಟತನವನ್ನೂ ತೆಗೆದುಹಾಕಿ ಒಳಗೆ ಬೇರೂರಿರುವ ವಾಕ್ಯಕ್ಕೆ ನಮ್ರತೆ ಯಿಂದ ಎಡೆಕೊಡಿರಿ; ಅದು ನಿಮ್ಮ ಆತ್ಮಗಳನ್ನು ರಕ್ಷಿಸು ವದಕ್ಕೆ ಸಾಮರ್ಥ್ಯವುಳ್ಳದ್ದಾಗಿದೆ.
22 ನೀವು ವಾಕ್ಯದ ಪ್ರಕಾರ ನಡೆಯುವವರಾಗಿರ್ರಿ; ಅದನ್ನು ಕೇಳುವವರು ಮಾತ್ರವೇ ಆಗಿದ್ದು ನಿಮ್ಮನ್ನು ನೀವೇ ಮೋಸಗೊಳಿಸ ಬೇಡಿರಿ.
23 ಯಾವನಾದರೂ ವಾಕ್ಯವನ್ನು ಕೇಳುವವ ನಾಗಿದ್ದು ಅದರ ಪ್ರಕಾರ ನಡೆಯದಿದ್ದರೆ ಅವನು ಕನ್ನಡಿಯಲ್ಲಿ ತನ್ನ ಹುಟ್ಟು ಮುಖವನ್ನು ನೋಡಿದ ಮನುಷ್ಯನಂತಿರುವನು.
24 ಇವನು ತನ್ನನ್ನು ನೋಡಿ ಕೊಂಡು ಹೋಗಿ ತಾನು ಹೀಗಿದ್ದೇನೆಂಬದನ್ನು ಆ ಕ್ಷಣವೇ ಮರೆತುಬಿಡುವನು.
25 ಆದರೆ ಬಿಡುಗಡೆ ಯನ್ನುಂಟುಮಾಡುವ ಪರಿಪೂರ್ಣವಾದ ನಿಯಮ ವನ್ನು ಲಕ್ಷ್ಯಕೊಟ್ಟು ನೋಡಿ ಇನ್ನೂ ನೋಡುತ್ತಲೇ ಇರುವವನು (ವಾಕ್ಯವನ್ನು) ಕೇಳಿ ಮರೆತುಹೋಗುವವ ನಾಗಿರದೆ ಅದರ ಪ್ರಕಾರ ನಡೆಯುವವನಾಗಿದ್ದು ತನ್ನ ಕ್ರಿಯೆಯಿಂದ ಧನ್ಯನಾಗುವನು.
26 ನಿಮ್ಮಲ್ಲಿ ಭಕ್ತನೆಂದೆ ಣಿಸಿಕೊಳ್ಳುವ ಯಾವನಾದರೂ ತನ್ನ ನಾಲಿಗೆಗೆ ಕಡಿವಾಣವನ್ನು ಹಾಕದೆ ತನ್ನ ಹೃದಯವನ್ನು ಮೋಸ ಗೊಳಿಸುವವನಾದರೆ ಅವನ ಭಕ್ತಿ ನಿಷ್ಪ್ರಯೋಜನ ವಾಗಿದೆ.
27 ಸಂಕಟದಲ್ಲಿ ಬಿದ್ದ ದಿಕ್ಕಿಲ್ಲದವರನ್ನೂ ವಿಧವೆ ಯರನ್ನೂ ಪರಾಮರಿಸಿ ತನಗೆ ಪ್ರಪಂಚದ ದೋಷವು ಹತ್ತದಂತೆ ನೋಡಿಕೊಂಡಿರುವದೇ ತಂದೆಯಾದ ದೇವರ ಸನ್ನಿಧಾನದಲ್ಲಿ ಶುದ್ಧವೂ ನಿರ್ಮಲವೂ ಆಗಿರುವ ಭಕ್ತಿ.