ಮೋಕ್ಷ


 • ದೇವರು ಲೋಕವನ್ನು ಎಷ್ಟೋ ಪ್ರೀತಿಮಾಡಿ ತನ್ನ ಒಬ್ಬನೇ ಮಗನನ್ನು ಕೊಟ್ಟನು; ಆತನನ್ನು ನಂಬುವ ಯಾವನಾದರೂ ನಾಶವಾಗದೆ ನಿತ್ಯಜೀವ ವನ್ನು ಪಡೆದವನಾಗಿರುವನು.
  ಯೋಹಾನನು 3:16
 • ಎಲ್ಲರೂ ಪಾಪಮಾಡಿ ದೇವರ ಮಹಿಮೆಯನ್ನು ಕಳೆದುಕೊಂಡಿ ದ್ದಾರೆ.  
  ರೋಮಾಪುರದವರಿಗೆ 3:23
 • ಯಾಕಂದರೆ ಪಾಪದ ಸಂಬಳ ಮರಣ. ಆದರೆ ದೇವರ ದಾನವು ನಮ್ಮ ಕರ್ತನಾದ ಯೇಸು ಕ್ರಿಸ್ತನ ಮುಖಾಂತರ ನಿತ್ಯಜೀವವು. - 
  ರೋಮಾಪುರದವರಿಗೆ 6:23
 • ಯೇಸು ಅವನಿಗೆ--ನಾನೇ ಮಾರ್ಗವೂ ಸತ್ಯವೂ ಜೀವವೂ ಆಗಿದ್ದೇನೆ; ನನ್ನ ಮೂಲಕವಾಗಿ ಹೊರತು ಯಾರೂ ತಂದೆಯ ಬಳಿಗೆ ಬರುವದಿಲ್ಲ. - 
  ಯೋಹಾನನು 14:6
 • ಆದರೆ ಯಾರಾರು ಆತನನ್ನು ಅಂಗೀಕರಿಸಿದರೋ ಅವರಿಗೆ ಅಂದರೆ ಆತನ ಹೆಸರಿನ ಮೇಲೆ ನಂಬಿಕೆಯಿಡುವವರಿಗೆ ದೇವರ ಪುತ್ರರಾಗುವ ಅಧಿಕಾರವನ್ನು ಆತನು ಕೊಟ್ಟನು. - 
  ಯೋಹಾನನು 1:12
 • ಆಗ ಅವರಿಗೆ ದ್ರಾಕ್ಷಾರಸವು ಸಾಲದೆ ಹೋದ ದ್ದರಿಂದ ಯೇಸುವಿನ ತಾಯಿಯು ಆತನಿಗೆ--ಅವರಿಗೆ ದ್ರಾಕ್ಷಾರಸವು ಇಲ್ಲ ಅಂದಳು.
  ಯೋಹಾನನು 3:3
 • ನ್ಯಾಯಪ್ರಮಾಣದಿಂದ ಹೆಚ್ಚು ಕಡಿಮೆ ಎಲ್ಲಾ ವಸ್ತುಗಳು ರಕ್ತದಿಂದಲೇ ಶುದ್ಧೀಕರಿಸಲ್ಪಡುವವು; ರಕ್ತ ಧಾರೆಯಿಲ್ಲದೆ ಪಾಪ ಪರಿಹಾರವಿಲ್ಲ. - 
  ಇಬ್ರಿಯರಿಗೆ 9:22
 • ನೀವು ತಿರುಗಿ ಕೊಂಡು ಚಿಕ್ಕ ಮಕ್ಕಳಂತೆ ಆಗದೆಹೋದರೆ ಪರಲೋಕ ರಾಜ್ಯದೊಳಗೆ ಪ್ರವೇಶಿಸುವದಿಲ್ಲವೆಂದು ನಾನು ನಿಮಗೆ ನಿಜವಾಗಿ ಹೇಳುತ್ತೇನೆ. - 
  ಮತ್ತಾಯನು 18:3
 • ಇಗೋ, ನಾನು ಬಾಗಿಲ ಬಳಿಯಲ್ಲಿ ನಿಂತುಕೊಂಡು ತಟ್ಟುತ್ತಾ ಇದ್ದೇನೆ; ಯಾವನಾದರೂ ನನ್ನ ಸ್ವರವನ್ನು ಕೇಳಿ ಬಾಗಿಲನ್ನು ತೆರೆದರೆ ನಾನು ಒಳಗೆ ಬಂದು ಅವನ ಸಂಗಡ ಊಟ ಮಾಡುವೆನು, ಅವನು ನನ್ನ ಸಂಗಡ ಊಟ ಮಾಡುವನು.
   ಪ್ರಕಟನೆ 3:20
 • ನಾವು ನಮ್ಮ ಪಾಪಗಳನ್ನು ಅರಿಕೆ ಮಾಡಿದರೆ ಆತನು ನಂಬಿಗಸ್ತನೂ ನೀತಿವಂತನೂ ಆಗಿರುವದರಿಂದ ನಮ್ಮ ಪಾಪಗಳನ್ನು ಕ್ಷಮಿಸಿಬಿಟ್ಟು ಸಕಲ ಅನೀತಿಯಿಂದ ನಮ್ಮನ್ನು ಶುದ್ಧಿ ಮಾಡುವನು. - 
  1 ಯೋಹಾನನು 1:9
 • ನೀನು ಕರ್ತನಾದ ಯೇಸು ವನ್ನು ಬಾಯಿಂದ ಅರಿಕೆಮಾಡಿ ದೇವರು ಆತನನ್ನು ಸತ್ತವರೊಳಗಿಂದ ಎಬ್ಬಿಸಿದ್ದಾನೆಂದು ನಿನ್ನ ಹೃದಯದಲ್ಲಿ ನಂಬಿದರೆ ನಿನಗೆ ರಕ್ಷಣೆಯಾಗುವದು ಎಂಬದೇ. ಹೃದಯದಿಂದ ನಂಬುವದರ ಮೂಲಕ ನೀತಿಯು ದೊರೆಯುತ್ತದೆ. ಬಾಯಿಂದ ಅರಿಕೆಮಾಡುವದರ ಮೂಲಕ ರಕ್ಷಣೆಯಾಗುತ್ತದೆ. ಕರ್ತನ ನಾಮದಲ್ಲಿ ಬೇಡಿಕೊಳ್ಳುವ ಯಾರಿಗಾದರೂ ರಕ್ಷಣೆ ಯಾಗುವದು. - 
  ರೋಮಾಪುರದವರಿಗೆ 10:9, 10, 13
 • ನಂಬಿಕೆಯ ಮೂಲಕ ಕೃಪೆ ಯಿಂದಲೇ ನೀವು ರಕ್ಷಣೆ ಹೊಂದಿದವರಾಗಿದ್ದೀರಿ. ಆ ರಕ್ಷಣೆಯು ನಿಮ್ಮಿಂದುಂಟಾದದ್ದಲ್ಲ, ಅದು ದೇವರ ದಾನವೇ. ಅದು ಕ್ರಿಯೆಗಳಿಂದ ಉಂಟಾದದ್ದಲ್ಲ; ಆದದರಿಂದ ಹೊಗಳಿಕೊಳ್ಳುವದಕ್ಕೆ ಯಾರಿಗೂ ಆಸ್ಪದ ವಿಲ್ಲ.
  ಎಫೆಸದವರಿಗೆ 2:8, 9
 • ನಾವು ಮಾಡಿದ ನೀತಿಯ ಕ್ರಿಯೆ ಗಳಿಂದಲ್ಲ, ಆತನ ಕರುಣೆಯಿಂದಲೇ ಪುನರ್ಜನ್ಮದ ತೊಳೆಯುವಿಕೆಯಿಂದಲೂ ಪವಿತ್ರಾತ್ಮನು ನೂತನ ಸ್ವಭಾವವನ್ನುಂಟು ಮಾಡುವದರಿಂದಲೂ ಆತನು ನಮ್ಮನ್ನು ರಕ್ಷಿಸಿದನು. - 
  ತೀತನಿಗೆ 3:5
 • ಅವರು--ಕರ್ತನಾದ ಯೇಸು ಕ್ರಿಸ್ತನ ಮೇಲೆ ನಂಬಿಕೆಯಿಡು, ಆಗ ನೀನು ರಕ್ಷಣೆ ಹೊಂದುವಿ, ನಿನ್ನ ಮನೆಯವರೂ ರಕ್ಷಣೆ ಹೊಂದು ವರು ಎಂದು ಹೇಳಿದರು. - 
  ಅಪೊಸ್ತಲರ ಕೃತ್ಯಗ 16:31
 • ಮಗನ ಮೇಲೆ ನಂಬಿಕೆಯಿಡುವವನಿಗೆ ನಿತ್ಯಜೀವ ಉಂಟು; ಯಾವನು ಮಗನನ್ನು ನಂಬುವದಿಲ್ಲವೋ ಅವನು ಜೀವವನ್ನು ಕಾಣುವದಿಲ್ಲ; ಆದರೆ ದೇವರ ಕೋಪವು ಅವನ ಮೇಲೆ ನೆಲೆಗೊಂಡಿದೆ ಅಂದನು. - 
  ಯೋಹಾನನು 3:36
 • ನಾನು ಅವುಗಳಿಗೆ ನಿತ್ಯಜೀವವನ್ನು ಕೊಡುತ್ತೇನೆ; ಅವು ಎಂದಿಗೂ ನಾಶವಾಗುವದಿಲ್ಲ; ಇಲ್ಲವೆ ಅವು ಗಳನ್ನು ಯಾವನೂ ನನ್ನ ಕೈಯೊಳಗಿಂದ ಕಸಕೊಳ್ಳ ಲಾರನು. - 
  ಯೋಹಾನನು 10:28
 • ಹೀಗಿರಲಾಗಿ ಯಾವನಾದರೂ ಕ್ರಿಸ್ತನಲ್ಲಿದ್ದರೆ ಅವನು ನೂತನ ಸೃಷ್ಟಿಯಾಗಿದ್ದಾನೆ. ಹಳೆಯವುಗಳು ಅಳಿದುಹೋದವು; ಇಗೋ, ಎಲ್ಲವೂ ನೂತನವಾದವು. - 
  2 ಕೊರಿಂಥದವರಿಗೆ 5:17