ಪ್ರಾರ್ಥನೆ


 • ಬೇಡಿಕೊಳ್ಳಿರಿ, ಅದು ನಿಮಗೆ ಕೊಡಲ್ಪಡುವದು; ಹುಡುಕಿರಿ, ನಿಮಗೆ ಸಿಕ್ಕುವದು; ತಟ್ಟಿರಿ, ಅದು ನಿಮಗೆ ತೆರೆಯಲ್ಪಡುವದು.
  ಮತ್ತಾಯನು 7:7
 • ನೀವು ನನ್ನಲ್ಲಿಯೂ ನನ್ನ ವಾಕ್ಯಗಳು ನಿಮ್ಮಲ್ಲಿಯೂ ನೆಲೆಗೊಂಡಿದ್ದರೆ ನಿಮಗೆ ಬೇಕಾದದ್ದನ್ನು ಬೇಡಿಕೊಳ್ಳಿರಿ, ನಿಮಗೆ ಅದು ದೊರೆ ಯುವದು.
  ಯೋಹಾನನು 15:7
 • ನನ್ನನ್ನು ಕರೆ, ಆಗ ನಿನಗೆ ಉತ್ತರ ಕೊಡುವೆನು; ನಿನಗೆ ತಿಳಿಯದ ದೊಡ್ಡ ಮಹತ್ತಾದವುಗಳನ್ನು ನಿನಗೆ ತಿಳಿಸುವೆನು.
  ಯೆರೆಮಿಯ 33:3
 • ನನ್ನನ್ನು ಹುಡುಕುವಿರಿ; ಪೂರ್ಣ ಹೃದಯದಿಂದ ನನ್ನನ್ನು ಹುಡುಕುವಾಗ ನನ್ನನ್ನು ಕಂಡುಕೊಳ್ಳುವಿರಿ.
  ಯೆರೆಮಿಯ 29:13
 • ಅವರು ಕರೆಯುವದಕ್ಕಿಂತ ಮುಂಚೆ ನಾನು ಉತ್ತರ ಕೊಡುವೆನು ಅವರು ಇನ್ನೂ ಮಾತಾಡು ತ್ತಿರುವಾಗಲೇ ನಾನು ಕೇಳಿಸಿಕೊಳ್ಳುವೆನು.
  ಯೆಶಾಯ 65:24
 • ನಾನು ನಿಮಗೆ ನಿಜವಾಗಿ ಹೇಳುವದೇನಂ ದರೆ--ನೀವು ಭೂಮಿಯ ಮೇಲೆ ಯಾವದನ್ನು ಕಟ್ಟುತ್ತೀರೋ ಅದು ಪರಲೋಕದಲ್ಲಿಯೂ ಕಟ್ಟಲ್ಪಡು ವದು. ಮತ್ತು ನೀವು ಭೂಮಿಯ ಮೇಲೆ ಯಾವದನ್ನು ಬಿಚ್ಚುತ್ತೀರೋ ಅದು ಪರಲೋಕದಲ್ಲಿಯೂ ಬಿಚ್ಚಲ್ಪ ಡುವದು. ನಾನು ನಿಮಗೆ ತಿರಿಗಿ ಹೇಳುವದೇನಂದರೆ --ನಿಮ್ಮಲ್ಲಿ ಇಬ್ಬರು ತಾವು ಬೇಡಿಕೊಳ್ಳುವ ಯಾವ ವಿಷಯಕ್ಕಾದರೂ ಭೂಮಿಯ ಮೇಲೆ ಸಮ್ಮತಿಸಿದರೆ ಅದು ಪರಲೋಕದಲ್ಲಿರುವ ನನ್ನ ತಂದೆಯಿಂದ ಅವರಿಗೆ ಆಗುವದು. ಯಾಕಂದರೆ ಇಬ್ಬರಾಗಲೀ ಮೂವರಾಗಲೀ ನನ್ನ ಹೆಸರಿನಲ್ಲಿ ಎಲ್ಲಿ ಕೂಡಿಬರುತ್ತಾರೋ ಅವರ ಮಧ್ಯ ದಲ್ಲಿ ನಾನು ಇದ್ದೇನೆ ಅಂದನು.
  ಮತ್ತಾಯನು 18:19, 20
 • ನಾವು ಆತನ ಚಿತ್ತಾನುಸಾರ ವಾಗಿ ಏನಾದರೂ ಬೇಡಿಕೊಂಡರೆ ಆತನು ಕೇಳು ತ್ತಾನೆಂಬ ಭರವಸವು ಆತನಲ್ಲಿ ನಮಗುಂಟು. ನಾವು ಏನು ಬೇಡಿಕೊಂಡರೂ ಆತನು ನಮ್ಮ ವಿಜ್ಞಾಪನೆಯನ್ನು ಕೇಳುತ್ತಾನೆಂಬದು ನಮಗೆ ಗೊತ್ತಾಗಿದ್ದರೆ ನಾವು ಆಶಿಸಿದವುಗಳು ಆತನಿಂದ ನಮಗೆ ದೊರೆತವೆಂಬದು ನಮಗೆ ತಿಳಿದದೆ.
  1 ಯೋಹಾನನು 5:14, 15
 • ಎಡೆಬಿಡದೆ ಪ್ರಾರ್ಥನೆ ಮಾಡಿರಿ.
  1 ಥೆಸಲೊನೀಕದವರಿಗೆ 5:17
 • ನನ್ನ ಹೃದಯದಲ್ಲಿ ಅಪರಾಧವನ್ನು ನಾನು ಆಶಿಸಿದ್ದರೆ ಕರ್ತನು ನನ್ನ ಪ್ರಾರ್ಥನೆಯನ್ನು ಕೇಳುವದಿಲ್ಲ.ಆದರೆ ನಿಜವಾಗಿ ನನ್ನ ಪ್ರಾರ್ಥನೆಯನ್ನು ದೇವರು ಕೇಳಿದ್ದಾನಲ್ಲಾ! ಆತನು ನನ್ನ ಪ್ರಾರ್ಥನೆಯ ಸ್ವರವನ್ನು ಆಲೈಸಿದ್ದಾನಲ್ಲಾ!
  ಕೀರ್ತನೆಗಳು 66:18, 19
 • ತರುವಾಯ ಕರ್ತನು--ಸೀಮೋನನೇ, ಸೀಮೋ ನನೇ, ಇಗೋ, ಸೈತಾನನು ನಿಮ್ಮನ್ನು ಗೋಧಿಯಂತೆ ಒನೆಯಬೇಕೆಂದು ಅಪೇಕ್ಷೆಪಟ್ಟಿದ್ದಾನೆ. ಆದರೆ ನಿನ್ನ ನಂಬಿಕೆಯು ಬಿದ್ದುಹೋಗದಂತೆ ನಾನು ನಿನಗೋಸ್ಕರ ಬೇಡಿಕೊಂಡಿದ್ದೇನೆ; ನೀನು ತಿರುಗಿಕೊಂಡ ಮೇಲೆ ನಿನ್ನ ಸಹೋದರರನ್ನು ಬಲಪಡಿಸು ಎಂದು ಹೇಳಿದನು.
  ಲೂಕನು 22:31, 32
 • ಆದಕಾರಣ ಆತನು ತನ್ನ ಮೂಲಕ ದೇವರ ಬಳಿಗೆ ಬರುವವರನ್ನು ಸಂಪೂರ್ಣವಾಗಿ ರಕ್ಷಿಸುವದಕ್ಕೆ ಶಕ್ತನಾಗಿದ್ದಾನೆ; ಅವರಿ ಗೋಸ್ಕರ ವಿಜ್ಞಾಪನೆಮಾಡುವದಕ್ಕೆ ಯಾವಾಗಲೂ ಬದುಕವವನಾಗಿದ್ದಾನೆ.
  ಇಬ್ರಿಯರಿಗೆ 7:25
 • ಆದದರಿಂದ ಪುರುಷರು ಎಲ್ಲಾ ಸ್ಥಳಗಳಲ್ಲಿ ಕೋಪವೂ ಸಂದೇಹವೂ ಇಲ್ಲದೆ ಪವಿತ್ರವಾದ ಕೈಗಳನ್ನೆತ್ತಿ ಪ್ರಾರ್ಥಿಸಬೇಕೆಂದು ನಾನು ಅಪೇಕ್ಷಿಸು ತ್ತೇನೆ.
  1 ತಿಮೊಥೆಯನಿಗೆ 2:8
 • ಹಾಗೆಯೇ ಆತ್ಮನು ಸಹ ನಮ್ಮ ಬಲಹೀನತೆ ಗಳಿಗೆ ಸಹಾಯಮಾಡುತ್ತಾನೆ; ಹೇಗಂದರೆ ನಾವು ತಕ್ಕ ಪ್ರಕಾರ ಏನು ಬೇಡಿಕೊಳ್ಳಬೇಕೋ ನಮಗೆ ಗೊತ್ತಿಲ್ಲವಾದ್ದರಿಂದ ಆತ್ಮನು ತಾನೇ ಉಚ್ಚರಿಸಲಾಗ ದಂಥ ನರಳಾಟದಿಂದ ನಮಗೋಸ್ಕರ ವಿಜ್ಞಾಪನೆ ಮಾಡುತ್ತಾನೆ. ಆದರೆ ಹೃದಯಗಳನ್ನು ಶೋಧಿಸು ವಾತನಿಗೆ ಆತ್ಮನ ಮನೊಭಾವವು ಏನೆಂದು ತಿಳಿದದೆ; ಆ ಆತ್ಮನು ದೇವರ ಚಿತ್ತಾನುಸಾರವಾಗಿ ಪರಿಶುದ್ಧರಿ ಗೋಸ್ಕರ ವಿಜ್ಞಾಪನೆ ಮಾಡುತ್ತಾನೆ.
  ರೋಮಾಪುರದವರಿಗೆ 8:26, 27
 • ಆದ ಕಾರಣ ನಾನು ನಿಮಗೆ ಹೇಳುವದೇನಂದರೆ--ನೀವು ಪ್ರಾರ್ಥನೆ ಮಾಡುವಾಗ ಯಾವವುಗಳನ್ನು ಆಶಿಸು ತ್ತೀರೋ ಅವು ನಿಮಗೆ ಸಿಕ್ಕುವವೆಂದು ನಂಬಿರಿ; ಮತ್ತು ಅವುಗಳನ್ನು ನೀವು ಹೊಂದುವಿರಿ.
  ಮಾರ್ಕನು 11:24
 • ನಾವು ಏನೇನು ಬೇಡಿಕೊಳ್ಳುತ್ತೇವೋ ಆತನಿಂದ ನಾವು ಹೊಂದಿಕೊಳ್ಳುತ್ತೇವೆ. ಯಾಕಂದರೆ ನಾವು ಆತನ ಆಜ್ಞೆಗಳನ್ನು ಕೈಕೊಂಡು ಆತನ ದೃಷ್ಟಿಯಲ್ಲಿ ಮೆಚ್ಚಿಕೆಯಾದವುಗಳನ್ನು ಮಾಡುವವರಾಗಿದ್ದೇವೆ.
  1 ಯೋಹಾನನು 3:22
 • ಆಮೇಲೆ ಆತನು ಸ್ವಲ್ಪದೂರ ಹೋಗಿ ಅಡ್ಡಬಿದ್ದು ಪ್ರಾರ್ಥಿ ಸುತ್ತಾ--ಓ ನನ್ನ ತಂದೆಯೇ, ಸಾಧ್ಯವಾದರೆ ಈ ಪಾತ್ರೆಯು ನನ್ನನ್ನು ಬಿಟ್ಟು ಹೋಗಲಿ; ಆದಾಗ್ಯೂ ನನ್ನ ಚಿತ್ತದಂತಲ್ಲ; ನಿನ್ನ ಚಿತ್ತದಂತೆಯೇ ಆಗಲಿ ಅಂದನು.
  ಮತ್ತಾಯನು 26:39
 • ಆದರೆ ನೀನು ಪ್ರಾರ್ಥನೆ ಮಾಡುವಾಗ ನಿನ್ನ ಕೋಣೆಯೊಳಕ್ಕೆ ಹೋಗಿ ಬಾಗಿಲನ್ನು ಮುಚ್ಚಿ ಅಂತರಂಗದಲ್ಲಿರುವ ನಿನ್ನ ತಂದೆಗೆ ಪ್ರಾರ್ಥನೆಮಾಡು; ಆಗ ಅಂತರಂಗದಲ್ಲಿ ನೋಡುವ ನಿನ್ನ ತಂದೆಯು ಬಹಿರಂಗವಾಗಿ ನಿನಗೆ ಪ್ರತಿಫಲ ಕೊಡುವನು. ಆದರೆ ನೀವು ಪ್ರಾರ್ಥನೆ ಮಾಡುವಾಗ ಅನ್ಯರು ಮಾಡುವಂತೆ ವ್ಯರ್ಥವಾದದ್ದನ್ನು ಪದೇಪದೇ ಹೇಳ ಬೇಡಿರಿ ಯಾಕಂದರೆ ತಾವು ಬಹಳವಾಗಿ ಮಾತನಾಡು ವದರಿಂದ ತಮ್ಮ ಪ್ರಾರ್ಥನೆಯು ಕೇಳಲ್ಪಡುವದೆಂದು ಅವರು ಯೋಚಿಸುತ್ತಾರೆ.
  ಮತ್ತಾಯನು 6:6, 7
 • ಆದದರಿಂದ ನಾವು ಕರುಣೆಯನ್ನು ಹೊಂದುವಂತೆಯೂ ಆತನ ಕೃಪೆಯಿಂದ ಸಮಯೋಚಿತವಾದ ಸಹಾಯವು ನಮಗೆ ದೊರೆಯುವಂತೆಯೂ ಧೈರ್ಯದಿಂದ ಕೃಪಾ ಸಿಂಹಾಸನದ ಬಳಿಗೆ ಬರೋಣ.
  ಇಬ್ರಿಯರಿಗೆ 4:16
 • ನೀವು ಆತ್ಮ ಪ್ರೇರಿತರಾಗಿ ಎಲ್ಲಾ ಸಮಯಗಳಲ್ಲಿ ಸಕಲವಿಧ ವಾದ ಪ್ರಾರ್ಥನೆಯಿಂದಲೂ ವಿಜ್ಞಾಪನೆಯಿಂದಲೂ ಪ್ರಾರ್ಥಿಸಿರಿ. ಇದರಲ್ಲಿ ಪೂರ್ಣ ಸ್ಥಿರಚಿತ್ತರಾಗಿದ್ದು ಪರಿಶುದ್ಧರೆಲ್ಲರ ವಿಷಯದಲ್ಲಿ ವಿಜ್ಞಾಪನೆಮಾಡುತ್ತಾ ಎಚ್ಚರವಾಗಿರ್ರಿ.
  ಎಫೆಸದವರಿಗೆ 6:18
 • ಸಂಜೆಯಲ್ಲಿ ಮುಂಜಾನೆ ಯಲ್ಲಿ ಮಧ್ಯಾಹ್ನದಲ್ಲಿ ಪ್ರಾರ್ಥಿಸಿ ಕೂಗುವೆನು;ಆತನು ನನ್ನ ಸ್ವರವನ್ನು ಕೇಳುವನು.
  ಕೀರ್ತನೆಗಳು 55:17
 • ದಿಕ್ಕಿಲ್ಲದವನ ಪ್ರಾರ್ಥನೆಗೆ ಕಿವಿಗೊಡುತ್ತಾನೆ; ಅವರ ಪ್ರಾರ್ಥನೆಯನ್ನು ತಿರಸ್ಕರಿ ಸುವದಿಲ್ಲ.
  ಕೀರ್ತನೆಗಳು 102:17
 • ನಾನು ಕರ್ತನನ್ನು ಪ್ರೀತಿ ಮಾಡುತ್ತೇನೆ.ಆತನು ನನ್ನ ಸ್ವರವನ್ನೂ ವಿಜ್ಞಾಪನೆಯನ್ನೂ ಕೇಳಿದ್ದಾನೆ. ಆತನು ನನ್ನ ಮೊರೆಯನ್ನು ಆಲಿಸಿದ್ದರಿಂದ ನಾನು ಜೀವದಿಂದಿರುವ ವರೆಗೂ ಆತನನ್ನೇ ಬೇಡುವೆನು.
  ಕೀರ್ತನೆಗಳು 116:1, 2
 • ಸಂಜೆಯಲ್ಲಿ ಮುಂಜಾನೆ ಯಲ್ಲಿ ಮಧ್ಯಾಹ್ನದಲ್ಲಿ ಪ್ರಾರ್ಥಿಸಿ ಕೂಗುವೆನು;ಆತನು ನನ್ನ ಸ್ವರವನ್ನು ಕೇಳುವನು.
  ಕೀರ್ತನೆಗಳು 55:17
 • ದಿಕ್ಕಿಲ್ಲದವನ ಪ್ರಾರ್ಥನೆಗೆ ಕಿವಿಗೊಡುತ್ತಾನೆ; ಅವರ ಪ್ರಾರ್ಥನೆಯನ್ನು ತಿರಸ್ಕರಿ ಸುವದಿಲ್ಲ.
  ಕೀರ್ತನೆಗಳು 102:17
 • ನಾನು ಕರ್ತನನ್ನು ಪ್ರೀತಿ ಮಾಡುತ್ತೇನೆ.ಆತನು ನನ್ನ ಸ್ವರವನ್ನೂ ವಿಜ್ಞಾಪನೆಯನ್ನೂ ಕೇಳಿದ್ದಾನೆ. 2 ಆತನು ನನ್ನ ಮೊರೆಯನ್ನು ಆಲಿಸಿದ್ದರಿಂದ ನಾನು ಜೀವದಿಂದಿರುವ ವರೆಗೂ ಆತನನ್ನೇ ಬೇಡುವೆನು.
  ಕೀರ್ತನೆಗಳು 116:1, 2
 • ಯೆರೂಸಲೇಮಿನಲ್ಲಿ ವಾಸಿಸುವ ಚೀಯೋನಿನ ಜನರೇ, ನೀವು ಇನ್ನು ಅಳು ವದೇ ಇಲ್ಲ. ನೀವು ಕೂಗಿಕೊಂಡ ಶಬ್ದವನ್ನು ಆತನು ಕೇಳಿ ನಿಮಗೆ ಕೃಪೆ ತೋರಿಸೇ ತೋರಿಸುವನು. ಆತನು ಅದನ್ನು ಕೇಳಿದಾಗಲೇ ಸದುತ್ತರವನ್ನು ದಯಪಾಲಿಸು ವನು.
  ಯೆಶಾಯ 30:19
 • ಅವರು ಕರೆಯುವದಕ್ಕಿಂತ ಮುಂಚೆ ನಾನು ಉತ್ತರ ಕೊಡುವೆನು ಅವರು ಇನ್ನೂ ಮಾತಾಡು ತ್ತಿರುವಾಗಲೇ ನಾನು ಕೇಳಿಸಿಕೊಳ್ಳುವೆನು.
  ಯೆಶಾಯ 65:24
 • ನನ್ನನ್ನು ಕರೆ, ಆಗ ನಿನಗೆ ಉತ್ತರ ಕೊಡುವೆನು; ನಿನಗೆ ತಿಳಿಯದ ದೊಡ್ಡ ಮಹತ್ತಾದವುಗಳನ್ನು ನಿನಗೆ ತಿಳಿಸುವೆನು.
  ಯೆರೆಮಿಯ 33:3
 • ನೀನು ಪ್ರಾರ್ಥನೆ ಮಾಡುವಾಗ ಕಪಟಿಗಳಂತೆ ಇರಬೇಡ; ಯಾಕಂದರೆ ಜನರು ನೋಡುವಂತೆ ಸಭಾಮಂದಿರಗಳಲ್ಲಿಯೂ ಬೀದಿಗಳ ಮೂಲೆಗಳ ಲ್ಲಿಯೂ ನಿಂತು ಪ್ರಾರ್ಥನೆಮಾಡುವದನ್ನು ಅವರು ಪ್ರೀತಿಸುತ್ತಾರೆ. ನಾನು ನಿಮಗೆ ನಿಜವಾಗಿ ಹೇಳುವ ದೇನಂದರೆ--ಅವರು ತಮ್ಮ ಪ್ರತಿಫಲವನ್ನು ಹೊಂದಿ ದ್ದಾರೆ.
  ಮತ್ತಾಯನು 6:5
 • ನಾನು ನಿಮಗೆ ನಿಜವಾಗಿ ಹೇಳುವದೇನಂ ದರೆ--ನೀವು ಭೂಮಿಯ ಮೇಲೆ ಯಾವದನ್ನು ಕಟ್ಟುತ್ತೀರೋ ಅದು ಪರಲೋಕದಲ್ಲಿಯೂ ಕಟ್ಟಲ್ಪಡು ವದು. ಮತ್ತು ನೀವು ಭೂಮಿಯ ಮೇಲೆ ಯಾವದನ್ನು ಬಿಚ್ಚುತ್ತೀರೋ ಅದು ಪರಲೋಕದಲ್ಲಿಯೂ ಬಿಚ್ಚಲ್ಪ ಡುವದು. 19 ನಾನು ನಿಮಗೆ ತಿರಿಗಿ ಹೇಳುವದೇನಂದರೆ --ನಿಮ್ಮಲ್ಲಿ ಇಬ್ಬರು ತಾವು ಬೇಡಿಕೊಳ್ಳುವ ಯಾವ ವಿಷಯಕ್ಕಾದರೂ ಭೂಮಿಯ ಮೇಲೆ ಸಮ್ಮತಿಸಿದರೆ ಅದು ಪರಲೋಕದಲ್ಲಿರುವ ನನ್ನ ತಂದೆಯಿಂದ ಅವರಿಗೆ ಆಗುವದು. 20 ಯಾಕಂದರೆ ಇಬ್ಬರಾಗಲೀ ಮೂವರಾಗಲೀ ನನ್ನ ಹೆಸರಿನಲ್ಲಿ ಎಲ್ಲಿ ಕೂಡಿಬರುತ್ತಾರೋ ಅವರ ಮಧ್ಯ ದಲ್ಲಿ ನಾನು ಇದ್ದೇನೆ ಅಂದನು.
  ಮತ್ತಾಯನು 18:18, 19, 20
 • ನನ್ನ ಹೆಸರಿನಲ್ಲಿ ನೀವು ಏನೇನು ಬೇಡಿಕೊಳ್ಳುವಿರೋ ಅದನ್ನು ನಾನು ಮಾಡುವೆನು. ಹೀಗೆ ಮಗನಲ್ಲಿ ತಂದೆಯು ಮಹಿಮೆ ಹೊಂದುವನು. ನೀವು ನನ್ನ ಹೆಸರಿನಲ್ಲಿ ಏನಾದರೂ ಕೇಳಿಕೊಂಡರೆ ನಾನು ಅದನ್ನು ಮಾಡುವೆನು.
  ಯೋಹಾನನು 14:13, 14
 • ನೀವು ನನ್ನಲ್ಲಿಯೂ ನನ್ನ ವಾಕ್ಯಗಳು ನಿಮ್ಮಲ್ಲಿಯೂ ನೆಲೆಗೊಂಡಿದ್ದರೆ ನಿಮಗೆ ಬೇಕಾದದ್ದನ್ನು ಬೇಡಿಕೊಳ್ಳಿರಿ, ನಿಮಗೆ ಅದು ದೊರೆ ಯುವದು.
  ಯೋಹಾನನು 15:7
 • ಆ ದಿನದಲ್ಲಿ ನೀವು ನನ್ನನ್ನು ಏನೂ ಕೇಳುವದಿಲ್ಲ. ನಾನು ನಿಮಗೆ ನಿಜನಿಜವಾಗಿ ಹೇಳುತ್ತೇನೆ--ನೀವು ನನ್ನ ಹೆಸರಿನಲ್ಲಿ ತಂದೆಯನ್ನು ಏನು ಕೇಳಿಕೊಂಡರೂ ಅದನ್ನು ಆತನು ನಿಮಗೆ ಕೊಡುವನು. 24 ನೀವು ಇದುವರೆಗೆ ನನ್ನ ಹೆಸರಿನಲ್ಲಿ ಏನೂ ಬೇಡಿಕೊಳ್ಳಲಿಲ್ಲ; ಬೇಡಿಕೊಳ್ಳಿರಿ, ನಿಮಗೆ ದೊರೆಯುವದು; ಆಗ ನಿಮ್ಮ ಆನಂದವು ಪರಿಪೂರ್ಣವಾಗುವದು.
  ಯೋಹಾನನು 16:23, 24
 • ದೇವರ ಸವಿಾಪಕ್ಕೆ ಬನ್ನಿರಿ, ಆಗ ಆತನು ನಿಮ್ಮ ಸವಿಾಪಕ್ಕೆ ಬರುವನು. ಪಾಪಿಗಳೇ, ನಿಮ್ಮ ಕೈಗಳನ್ನು ಶುಚಿ ಮಾಡಿಕೊಳ್ಳಿರಿ; ಎರಡು ಮನಸ್ಸುಳ್ಳವರೇ, ನಿಮ್ಮ ಹೃದಯಗಳನ್ನು ನಿರ್ಮಲ ಮಾಡಿಕೊಳ್ಳಿರಿ.
  ಯಾಕೋಬನು 4:8
 • ನಾವು ಏನೇನು ಬೇಡಿಕೊಳ್ಳುತ್ತೇವೋ ಆತನಿಂದ ನಾವು ಹೊಂದಿಕೊಳ್ಳುತ್ತೇವೆ. ಯಾಕಂದರೆ ನಾವು ಆತನ ಆಜ್ಞೆಗಳನ್ನು ಕೈಕೊಂಡು ಆತನ ದೃಷ್ಟಿಯಲ್ಲಿ ಮೆಚ್ಚಿಕೆಯಾದವುಗಳನ್ನು ಮಾಡುವವರಾಗಿದ್ದೇವೆ.
  1 ಯೋಹಾನನು 3:22
 • ನಾವು ಆತನ ಚಿತ್ತಾನುಸಾರ ವಾಗಿ ಏನಾದರೂ ಬೇಡಿಕೊಂಡರೆ ಆತನು ಕೇಳು ತ್ತಾನೆಂಬ ಭರವಸವು ಆತನಲ್ಲಿ ನಮಗುಂಟು. 15 ನಾವು ಏನು ಬೇಡಿಕೊಂಡರೂ ಆತನು ನಮ್ಮ ವಿಜ್ಞಾಪನೆಯನ್ನು ಕೇಳುತ್ತಾನೆಂಬದು ನಮಗೆ ಗೊತ್ತಾಗಿದ್ದರೆ ನಾವು ಆಶಿಸಿದವುಗಳು ಆತನಿಂದ ನಮಗೆ ದೊರೆತವೆಂಬದು ನಮಗೆ ತಿಳಿದದೆ.
  1 ಯೋಹಾನನು 5:14, 15
 • ಇಸ್ರಾಯೇಲಿನ ಪರಿ ಶುದ್ಧನೂ ಅದನ್ನು ರೂಪಿಸಿದವನೂ ಆಗಿರುವ ಕರ್ತನು--ಮುಂದೆ ಸಂಭವಿಸುವ ನನ್ನ ಮಕ್ಕಳ ವಿಷಯವಾಗಿಯೂ ನನ್ನ ಕೈಕೆಲಸದ ವಿಷಯವಾ ಗಿಯೂ ನೀವು ನನಗೆ ಆಜ್ಞೆ ಮಾಡುವಿರಾ?
  ಯೆಶಾಯ 45:11
 • ನನ್ನನ್ನು ಹುಡುಕುವಿರಿ; ಪೂರ್ಣ ಹೃದಯದಿಂದ ನನ್ನನ್ನು ಹುಡುಕುವಾಗ ನನ್ನನ್ನು ಕಂಡುಕೊಳ್ಳುವಿರಿ.
  ಯೆರೆಮಿಯ 29:13
 • ಯೇಸು ಪ್ರತ್ಯುತ್ತರವಾಗಿ ಅವರಿಗೆ--ನಾನು ನಿಮಗೆ ನಿಜವಾಗಿ ಹೇಳುತ್ತೇನೆ--ನಿಮ್ಮಲ್ಲಿ ನಂಬಿಕೆಯಿದ್ದು ಮತ್ತು ಸಂದೇಹ ಪಡದೆಹೋದರೆ ಈ ಅಂಜೂರದ ಮರಕ್ಕೆ ಮಾಡಿದಂತೆ ಮಾಡುವದಲ್ಲದೆ ನೀವು ಈ ಗುಡ್ಡಕ್ಕೆ --ನೀನು ಕಿತ್ತುಕೊಂಡು ಹೋಗಿ ಸಮುದ್ರದಲ್ಲಿ ಬೀಳು ಎಂದು ಹೇಳಿದರೂ ಅದು ಆಗುವ ನೀವು ನಂಬುವವ ರಾಗಿ ಪ್ರಾರ್ಥನೆಯಲ್ಲಿ ಏನೇನೂ ಕೇಳುವಿರೋ ಅವುಗಳನ್ನೆಲ್ಲಾ ಹೊಂದುವಿರಿ ಅಂದನು.
  ಮತ್ತಾಯನು 21:21, 22
 • ಆದ ಕಾರಣ ನಾನು ನಿಮಗೆ ಹೇಳುವದೇನಂದರೆ--ನೀವು ಪ್ರಾರ್ಥನೆ ಮಾಡುವಾಗ ಯಾವವುಗಳನ್ನು ಆಶಿಸು ತ್ತೀರೋ ಅವು ನಿಮಗೆ ಸಿಕ್ಕುವವೆಂದು ನಂಬಿರಿ; ಮತ್ತು ಅವುಗಳನ್ನು ನೀವು ಹೊಂದುವಿರಿ.
  ಮಾರ್ಕನು 11:24
 • ನಾನು ನಿಮಗೆ ಹೇಳುವದೇನಂ ದರೆ--ಬೇಡಿಕೊಳ್ಳಿರಿ, ನಿಮಗೆ ಕೊಡಲ್ಪಡುವದು; ಹುಡುಕಿರಿ, ನೀವು ಕಂಡುಕೊಳ್ಳುವಿರಿ; ತಟ್ಟಿರಿ, ನಿಮಗೆ ತೆರೆಯಲ್ಪಡುವದು. 10 ಬೇಡಿಕೊಳ್ಳುವ ಪ್ರತಿಯೊಬ್ಬನು ಹೊಂದುವನು; ಹುಡುಕುವವನು ಕಂಡುಕೊಳ್ಳುವನು; ತಟ್ಟುವವನಿಗೆ ತೆರೆಯಲ್ಪಡುವದು.
  ಲೂಕನು 11:9, 10
 • ದೇವರು ಮಾಡಿದ ವಾಗ್ದಾನದ ವಿಷಯದಲ್ಲಿ ಅವನು ಅಪನಂಬಿಕೆಯಿಂದ ಚಂಚಲಚಿತ್ತನಾಗಲಿಲ್ಲ; ಆದರೆ ದೇವರನ್ನು ಘನಪಡಿಸುವವನಾಗಿ ದೃಢನಂಬಿಕೆಯುಳ್ಳ ವನಾದನು. 21 ಆತನು ತನ್ನ ವಾಗ್ದಾನವನ್ನು ನೆರವೇರಿ ಸುವದಕ್ಕೆ ಸಮರ್ಥನೆಂದು ಪೂರಾ ಭರವಸವಿಟ್ಟನು.
  ರೋಮಾಪುರದವರಿಗೆ 4:20, 21
 • ನಮ್ಮಲ್ಲಿ ಕಾರ್ಯಸಾಧಿಸುವ ತನ್ನ ಶಕ್ತಿಯ ಪ್ರಕಾರ ನಾವು ಬೇಡುವದಕ್ಕಿಂತಲೂ ಯೋಚಿಸುವದಕ್ಕಿಂತಲೂ ಅತ್ಯಧಿಕವಾದದ್ದನ್ನು ಮಾಡಲು ಶಕ್ತನಾದಾತನಿಗೆ
  ಎಫೆಸದವರಿಗೆ 3:20
 • ಆದದರಿಂದ ನಾವು ಕರುಣೆಯನ್ನು ಹೊಂದುವಂತೆಯೂ ಆತನ ಕೃಪೆಯಿಂದ ಸಮಯೋಚಿತವಾದ ಸಹಾಯವು ನಮಗೆ ದೊರೆಯುವಂತೆಯೂ ಧೈರ್ಯದಿಂದ ಕೃಪಾ ಸಿಂಹಾಸನದ ಬಳಿಗೆ ಬರೋಣ.
  ಇಬ್ರಿಯರಿಗೆ 4:16
 • ಆದರೆ ನಂಬಿಕೆಯಿಲ್ಲದೆ ದೇವರನ್ನು ಮೆಚ್ಚಿಸುವದು ಅಸಾಧ್ಯ; ಯಾಕಂದರೆ ದೇವರ ಬಳಿಗೆ ಬರುವವನು ದೇವರು ಇದ್ದಾನೆ, ತನ್ನನ್ನು ಜಾಗ್ರತೆಯಾಗಿ ಹುಡುಕು ವವನಿಗೆ ಪ್ರತಿಫಲವನ್ನು ಕೊಡುತ್ತಾನೆ ಎಂದು ನಂಬು ವದು ಅವಶ್ಯ.
  ಇಬ್ರಿಯರಿಗೆ 11:6
 • ಆದರೆ ಅವನು ಸ್ವಲ್ಪವೂ ಸಂದೇಹ ಪಡದೆ ನಂಬಿಕೆ ಯಲ್ಲಿ ಕೇಳಿಕೊಳ್ಳಲಿ. ಯಾಕಂದರೆ ಸಂದೇಹಪಡುವ ವನು ಗಾಳಿಯಿಂದ ಬಡಿಯಲ್ಪಟ್ಟ ಸಮುದ್ರದ ತೆರೆ ಯಂತೆ ಅಲೆದಾಡುತ್ತಿರುವನು. 7 ಆ ಮನುಷ್ಯನು ತಾನು ಕರ್ತನಿಂದ ಏನಾದರೂ ಹೊಂದುವೆನೆಂದು ಭಾವಿಸದೆ ಇರಲಿ.
  ಯಾಕೋಬನು 1:6, 7
 • ನಾವು ಆತನ ಚಿತ್ತಾನುಸಾರ ವಾಗಿ ಏನಾದರೂ ಬೇಡಿಕೊಂಡರೆ ಆತನು ಕೇಳು ತ್ತಾನೆಂಬ ಭರವಸವು ಆತನಲ್ಲಿ ನಮಗುಂಟು.
  1 ಯೋಹಾನನು 5:14
 • ಓ ಕರ್ತನೇ, ಬೆಳಿಗ್ಗೆ ನನ್ನ ಸ್ವರವನ್ನು ಕೇಳುವಿ; ಹೊತ್ತಾರೆಯಲ್ಲಿ ನಿನಗೆ ಪ್ರಾರ್ಥಿಸಿ ಮೇಲಕ್ಕೆ ನೋಡುವೆನು.
  ಕೀರ್ತನೆಗಳು 5:3
 • ಓ ದೇವರೇ, ನೀನೇ ನನ್ನ ದೇವರು ಹೊತ್ತಾರೆ ನಿನ್ನನ್ನು ಹುಡುಕುತ್ತೇನೆ; ನೀರಿಲ್ಲದೆ ಒಣಗಿದ ಭೂಮಿಯಲ್ಲಿದ್ದವನು ನೀರಿ ಗಾಗಿಯೋ ಎಂಬಂತೆ ನನ್ನ ಆತ್ಮವು ನಿನಗಾಗಿ ಆತುರ ಗೊಳ್ಳುತ್ತದೆ; ಶರೀರವು ಕಂದಿಹೋಗುತ್ತದೆ.
  ಕೀರ್ತನೆಗಳು 63:1
 • ಆತನ ಸಾಕ್ಷಿಗಳನ್ನು ಕೈಕೊಂಡು ಪೂರ್ಣಹೃದಯದಿಂದ ಆತನನ್ನು ಹುಡುಕುವವರು ಧನ್ಯರು.
  ಕೀರ್ತನೆಗಳು 119:2
 • ಆದರೆ ನೀನು ಪ್ರಾರ್ಥನೆ ಮಾಡುವಾಗ ನಿನ್ನ ಕೋಣೆಯೊಳಕ್ಕೆ ಹೋಗಿ ಬಾಗಿಲನ್ನು ಮುಚ್ಚಿ ಅಂತರಂಗದಲ್ಲಿರುವ ನಿನ್ನ ತಂದೆಗೆ ಪ್ರಾರ್ಥನೆಮಾಡು; ಆಗ ಅಂತರಂಗದಲ್ಲಿ ನೋಡುವ ನಿನ್ನ ತಂದೆಯು ಬಹಿರಂಗವಾಗಿ ನಿನಗೆ ಪ್ರತಿಫಲ ಕೊಡುವನು.
  ಮತ್ತಾಯನು 6:6
 • ಮರಣದಲೆಗಳು ನನ್ನನ್ನು ಆವರಿಸಿಕೊಂಡವು; ಭಕ್ತಿಹೀನರ ಪ್ರವಾಹಗಳು ನನ್ನನ್ನು ಹೆದರಿಸಿದವು; 6 ಪಾತಾಳದ ದುಃಖಗಳು ನನ್ನನ್ನು ಸುತ್ತಿಕೊಂಡವು; ಮರಣದ ಉರ್ಲುಗಳು ನನ್ನನ್ನು ಎದುರುಗೊಂಡವು; ನನ್ನ ಇಕ್ಕಟ್ಟಿನಲ್ಲಿ ಕರ್ತ ನನ್ನು ಕರೆದೆನು; ನನ್ನ ದೇವರನ್ನು ಕರೆದೆನು. ಆತನು ತನ್ನ ಮಂದಿರದೊಳಗಿಂದ ನನ್ನ ಶಬ್ದವನ್ನು ಕೇಳಿದನು; ನನ್ನ ಮೊರೆಯು ಆತನ ಕಿವಿಗೆ ಮುಟ್ಟಿತು.
  2 ಸಮುವೇಲನು 2 Samuel 22:5-7
 • ಸಂಕಟ ಪಡುವವನ ಸಂಕಟ ವನ್ನು ಆತನು ತಿರಸ್ಕರಿಸಲಿಲ್ಲ, ಅಸಹ್ಯಿಸಲಿಲ್ಲ; ತನ್ನ ಮುಖವನ್ನು ಅವನಿಂದ ಮರೆಮಾಡಲಿಲ್ಲ; ಆದರೆ ಅವನು ಮೊರೆಯಿಡಲು ಆತನು ಕೇಳಿದನು.
  ಕೀರ್ತನೆಗಳು 22:24
 • ಇಕ್ಕಟ್ಟಿನ ದಿವಸದಲ್ಲಿ ನನ್ನನ್ನು ಕರೆ; ನಾನು ನಿನ್ನನ್ನು ತಪ್ಪಿಸಿಬಿಡುವೆನು; ಆಗ ನನ್ನನ್ನು ಘನಪಡಿಸುವಿ.
  ಕೀರ್ತನೆಗಳು 50:15
 • ಎಲ್ಲಾ ಕಾಲದಲ್ಲಿ ಆತನಲ್ಲಿ ಭರವಸ ವಿಡಿರಿ, ಜನರೇ; ನಿಮ್ಮ ಹೃದಯವನ್ನು ಆತನ ಮುಂದೆ ಹೊಯ್ಯಿರಿ; ದೇವರು ನಮಗೆ ಆಶ್ರಯವಾಗಿದ್ದಾನೆ. ಸೆಲಾ.
  ಕೀರ್ತನೆಗಳು 62:8
 • ಆದಾಗ್ಯೂ ಅವರ ಕೂಗನ್ನು ಆತನು ಕೇಳಿದಾಗ ಅವರ ಇಕ್ಕಟ್ಟಿನ ಮೇಲೆ ಲಕ್ಷ್ಯವಿಟ್ಟು 45 ಅವರಿಗಾಗಿ ತನ್ನ ಒಡಂಬಡಿಕೆಯನ್ನು ಜ್ಞಾಪಕಮಾಡಿಕೊಂಡು ತನ್ನ ಅತಿಶಯವಾದ ಕರು ಣೆಯ ಪ್ರಕಾರ ಪಶ್ಚಾತ್ತಾಪಪಟ್ಟನು.
  ಕೀರ್ತನೆಗಳು 106:44, 45
 • ನನ್ನ ಪೂರ್ಣಹೃದಯದಿಂದ ನಿನ್ನನ್ನು ಹುಡುಕಿದ್ದೇನೆ; ನಿನ್ನ ಆಜ್ಞೆಗಳಿಂದ ನಾನು ತಪ್ಪಿಹೋಗ ದಂತೆ ಮಾಡು.
  ಕೀರ್ತನೆಗಳು 119:10
 • ಕರ್ತನು ಸಿಕ್ಕುವ ಕಾಲದಲ್ಲಿ ಆತನನ್ನು ಹುಡುಕಿರಿ; ಆತನು ಸವಿಾಪವಾಗಿರುವಾಗಲೇ ಆತನನ್ನು ಕರೆಯಿರಿ.
  ಯೆಶಾಯ 55:6
 • ನಿನ್ನ ಹೆಸರನ್ನು ಕರೆಯುವವನೂ ನಿನ್ನನ್ನು ಹಿಡು ಕೊಳ್ಳುವದಕ್ಕೆ ತನ್ನನ್ನು ಪ್ರೇರಿಸಿಕೊಳ್ಳುವವನು ಒಬ್ಬನೂ ಇಲ್ಲ; ನಿನ್ನ ಮುಖವನ್ನು ನಮಗೆ ಮರೆಮಾಡಿದ್ದೀ; ನಮ್ಮ ಅಕ್ರಮಗಳಿಗಾಗಿ ನಮ್ಮನ್ನು ದಹಿಸಿಬಿಟ್ಟಿದ್ದೀ.
  ಯೆಶಾಯ 64:7
 • ನನ್ನನ್ನು ಹುಡುಕುವಿರಿ; ಪೂರ್ಣ ಹೃದಯದಿಂದ ನನ್ನನ್ನು ಹುಡುಕುವಾಗ ನನ್ನನ್ನು ಕಂಡುಕೊಳ್ಳುವಿರಿ.
  ಯೆರೆಮಿಯ 29:13
 • ಎದ್ದೇಳು, ರಾತ್ರಿಯಲ್ಲಿ ಕೂಗು; ನಿನ್ನ ಹೃದಯವನ್ನು ಕರ್ತನ ಸಮ್ಮುಖದಲ್ಲಿ ಆರಂಭದ ಜಾವಗಳಲ್ಲಿ (ನೀರಿನಂತೆ) ಹೊಯ್ಯಿ; ನಿನ್ನ ಕೈಗಳನ್ನು ಆತನ ಕಡೆಗೆ ಎತ್ತು, ಯಾಕಂದರೆ ನಿನ್ನ ಚಿಕ್ಕ ಮಕ್ಕಳ ಪ್ರಾಣವು ಪ್ರತಿಯೊಂದು ಬೀದಿಯ ಬದಿಯಲ್ಲಿ ಹಸಿವೆಯಿಂದ ದುರ್ಬಲವಾಗಿದೆ.
  ಪ್ರಲಾಪಗಳು 2:19
 • ನಾವು ನಮ್ಮ ಮಾರ್ಗಗಳನ್ನು ಶೋಧಿಸಿ ಪರೀಕ್ಷಿಸಿ ಕೊಂಡು ಮತ್ತೆ ಕರ್ತನ ಬಳಿಗೆ ತಿರುಗಿಕೊಳ್ಳೋಣ. ನಮ್ಮ ಹೃದಯವನ್ನು ಕೈಗಳೊಂದಿಗೆ ಪರಲೋಕದ ದೇವರ ಕಡೆಗೆ ಎತ್ತಿಕೊಳ್ಳೋಣ.
  ಪ್ರಲಾಪಗಳು 3:40, 41
 • ಹೀಗಿರುವದರಿಂದ ಈಗ ಕರ್ತನು ಅನ್ನುವದೇ ನಂದರೆ--ಪೂರ್ಣ ಹೃದಯದಿಂದಲೂ ಉಪವಾಸ ದಿಂದಲೂ ಅಳುವಿಕೆಯಿಂದಲೂ ಗೋಳಾಟದಿಂದ ಲೂ ನನ್ನ ಕಡೆಗೆ ತಿರುಗಿಕೊಳ್ಳಿರಿ.
  ಯೋವೇಲ 2:12
 • ಪ್ರಾರ್ಥನೆ ಉಪವಾಸಗಳಿಂದಲ್ಲದೆ ಈ ತರವಾದದ್ದು ಹೊರಟು ಹೋಗುವದಿಲ್ಲ ಅಂದನು.
  ಮತ್ತಾಯನು 17:21