ಮೆಚ್ಚುಗೆ

+
 • markup will be injected here -->
 • 0:00
  0:00

  • ಇದಲ್ಲದೆ ಅವನು ಅವರಿಗೆ--ನೀವು ಹೋಗಿ ಕೊಬ್ಬಿದ್ದನ್ನು ತಿಂದು ಸಿಹಿ ಯಾದದ್ದನ್ನು ಕುಡಿದು ಯಾರಿಗೆ ಸಿದ್ಧಮಾಡಿದ್ದು ಏನೂ ಇಲ್ಲವೋ ಅವರಿಗೆ ಭಾಗಗಳನ್ನು ಕಳುಹಿಸಿ ಕೊಡಿರಿ. ಯಾಕಂದರೆ ಈ ದಿನವು ನಮ್ಮ ಕರ್ತನಿಗೆ ಪರಿಶುದ್ಧ ವಾಗಿದೆ. ಕರ್ತನ ಆನಂದವು ನಿಮ್ಮ ಬಲವಾಗಿರು ವದರಿಂದ ನೀವು ವ್ಯಥೆಪಡಬೇಡಿರಿ. ನೆಹೆಮಿಯ 8:10
  • ನಾನು ಎಲ್ಲಾ ಕಾಲಗಳಲ್ಲಿ ಕರ್ತನನ್ನು ಸ್ತುತಿಸುವೆನು; ಆತನ ಸ್ತೋತ್ರವು ಯಾವಾ ಗಲೂ ನನ್ನ ಬಾಯಲ್ಲಿ ಇರುವದು. ಕೀರ್ತನೆಗಳು 34:1
  • ಸ್ತೊತ್ರವನ್ನು ಅರ್ಪಿಸುವವನು ನನ್ನನ್ನು ಘನ ಪಡಿಸುತ್ತಾನೆ; ತನ್ನ ನಡವಳಿಕೆಯನ್ನು ಕ್ರಮಪಡಿಸಿ ಕೊಳ್ಳುವವನಿಗೆ ದೇವರ ರಕ್ಷಣೆಯನ್ನು ನಾನು ತೋರಿಸುವೆನು. ಕೀರ್ತನೆಗಳು 50:23
  • ನೀವು ಕರ್ತನನ್ನು ಸ್ತುತಿಸಿರಿ. ದೇವರನ್ನು ಆತನ ಪರಿಶುದ್ಧ ಆಲಯದಲ್ಲಿ ಸ್ತುತಿಸಿರಿ; ಆತನ ಬಲದ ಆಂತರಿಕ್ಷದಲ್ಲಿ ಆತನನ್ನು ಸ್ತುತಿಸಿರಿ. ಆತನ ಪರಾಕ್ರಮಗಳಿಗೋಸ್ಕರ ಆತನನ್ನು ಸ್ತುತಿಸಿರಿ; ಆತನ ಮಹಾ ಪ್ರಭಾವದ ಪ್ರಕಾರ ಆತನನ್ನು ಸ್ತುತಿಸಿರಿ. ತುತೂರಿಯ ಶಬ್ದ ದಿಂದ ಆತನನ್ನು ಸ್ತುತಿಸಿರಿ. ವೀಣೆಯಿಂದಲೂ ಕಿನ್ನರಿಯಿಂದಲೂ ಆತನನ್ನು ಸ್ತುತಿಸಿರಿ. ದಮ್ಮಡಿ ಯಿಂದಲೂ ಕುಣಿಯುತ್ತಾ ಆತನನ್ನು ಸ್ತುತಿಸಿರಿ; ತಂತಿವಾದ್ಯಗಳಿಂದಲೂ ಕೊಳಲುಗಳಿಂದಲೂ ಆತ ನನ್ನು ಸ್ತುತಿಸಿರಿ. ಜಲ್ಲರಿಯ ದೊಡ್ಡ ಶಬ್ದದಿಂದ ಆತನನ್ನು ಸ್ತುತಿಸಿರಿ; ಉತ್ಸಾಹದ ತಾಳಗಳಿಂದ ಆತನನ್ನು ಸ್ತುತಿಸಿರಿ. ಶ್ವಾಸವಿರುವದೆಲ್ಲಾ ಕರ್ತನನ್ನು ಸ್ತುತಿಸಲಿ. ಕರ್ತನನ್ನು ಸ್ತುತಿಸಿರಿ. ಕೀರ್ತನೆಗಳು 150
  • ಉತ್ಸಾಹ ಧ್ವನಿಯನ್ನು ತಿಳಿದ ಜನರು ಧನ್ಯರು; ಕರ್ತನೇ, ನಿನ್ನ ಮುಖದ ಬೆಳಕಿನಲ್ಲಿ ಅವರು ನಡೆದುಕೊಳ್ಳುವರು. ಕೀರ್ತನೆಗಳು 89:14
  • ಉತ್ಸಾಹ ಧ್ವನಿಯನ್ನು ತಿಳಿದ ಜನರು ಧನ್ಯರು; ಕರ್ತನೇ, ನಿನ್ನ ಮುಖದ ಬೆಳಕಿನಲ್ಲಿ ಅವರು ನಡೆದುಕೊಳ್ಳುವರು. ಕೀರ್ತನೆಗಳು 89:15
  • ಕರುಣೆ ನೀತಿಗಳನ್ನು ಕುರಿತು ಹಾಡುವೆನು; ಓ ಕರ್ತನೇ, ನಿನ್ನನ್ನು ಕೀರ್ತಿ ಸುವೆನು. ಸಂಪೂರ್ಣವಾದ ಮಾರ್ಗದಲ್ಲಿ ಬುದ್ಧಿ ಯಿಂದ ನಡೆದು ಕೊಳ್ಳುವೆನು; ಯಾವಾಗ ನನ್ನ ಬಳಿಗೆ ಬರುವಿ? ನನ್ನ ಹೃದಯದ ಸಂಪೂರ್ಣತೆಯಿಂದ ನನ್ನ ಮನೆಯೊಳಗೆ ನಡೆದುಕೊಳ್ಳುವೆನು. ಕೀರ್ತನೆಗಳು 100:1, 2
  • ಕರ್ತನನ್ನು ಕೊಂಡಾಡುವದೂ; ಮಹೋನ್ನತನೇ, ನಿನ್ನ ಹೆಸರನ್ನು ಕೀರ್ತಿಸುವದೂ: ಕೀರ್ತನೆಗಳು 92:1
  • ಕರುಣೆ ನೀತಿಗಳನ್ನು ಕುರಿತು ಹಾಡುವೆನು; ಓ ಕರ್ತನೇ, ನಿನ್ನನ್ನು ಕೀರ್ತಿ ಸುವೆನು. ಕೀರ್ತನೆಗಳು 101:1
  • ಕರ್ತನು ಆಳುತ್ತಾನೆ; ಭೂಮಿಯು ಉಲ್ಲಾಸಪಡಲಿ; ದ್ವೀಪಗಳ ಸಮೂಹವು ಸಂತೋ ಷಿಸಲಿ. ಕೀರ್ತನೆಗಳು 97:1
  • ಕರ್ತನು ಆಳುತ್ತಾನೆ; ಭೂಮಿಯು ಉಲ್ಲಾಸಪಡಲಿ; ದ್ವೀಪಗಳ ಸಮೂಹವು ಸಂತೋ ಷಿಸಲಿ. ಕೀರ್ತನೆಗಳು 97:12
  • ಓ ನನ್ನ ಮನವೇ, ಕರ್ತನನ್ನೂ ನನ್ನ ಎಲ್ಲಾ ಅಂತರಂಗವೇ, ಆತನ ಪರಿಶುದ್ಧವಾದ ಹೆಸರನ್ನೂ ಸ್ತುತಿಸು. ಓ ನನ್ನ ಮನವೇ, ಕರ್ತನನ್ನು ಸ್ತುತಿಸು. ಆತನ ಉಪಕಾರಗಳಲ್ಲಿ ಒಂದನ್ನೂ ಮರೆತುಬಿಡಬೇಡ. ಕೀರ್ತನೆಗಳು 103:1, 2
  • 1 ಕರ್ತನನ್ನು ಸ್ತುತಿಸಿರಿ. ಕರ್ತನಿಗೆ ಹೊಸ ಹಾಡನ್ನೂ ಪರಿಶುದ್ಧರ ಸಭೆ ಯಲ್ಲಿ ಆತನ ಸ್ತೋತ್ರವನ್ನೂ ಹಾಡಿರಿ. ಆತನ ಹೆಸರನ್ನು ಕುಣಿಯುತ್ತಾ ಸ್ತುತಿಸಲಿ; ದಮ್ಮಡಿ ಯಿಂದಲೂ ಕಿನ್ನರಿಯಿಂದಲೂ ಆತನನ್ನು ಕೀರ್ತಿಸಲಿ. ಕರ್ತನು ತನ್ನ ಜನರಲ್ಲಿ ಇಷ್ಟಪಡುತ್ತಾನೆ; ದೀನರನ್ನು ರಕ್ಷಣೆಯಿಂದ ಅಲಂಕರಿಸುತ್ತಾನೆ. ಪರಿಶುದ್ಧರು ಘನತೆಯಿಂದ ಉತ್ಸಾಹಪಡಲಿ; ತಮ್ಮ ಹಾಸಿಗೆಗಳ ಮೇಲೆ ಉತ್ಸಾಹಧ್ವನಿಮಾಡಲಿ. ಕೀರ್ತನೆಗಳು 149:1, 3-5
  • ಸ್ತೊತ್ರವನ್ನು ಅರ್ಪಿಸುವವನು ನನ್ನನ್ನು ಘನ ಪಡಿಸುತ್ತಾನೆ; ತನ್ನ ನಡವಳಿಕೆಯನ್ನು ಕ್ರಮಪಡಿಸಿ ಕೊಳ್ಳುವವನಿಗೆ ದೇವರ ರಕ್ಷಣೆಯನ್ನು ನಾನು ತೋರಿಸುವೆನು. ಕೀರ್ತನೆಗಳು 50:23
  • ಮಧ್ಯರಾತ್ರಿಯಲ್ಲಿ ಪೌಲನೂ ಸೀಲನೂ ಪ್ರಾರ್ಥನೆ ಮಾಡಿದವರಾಗಿ ದೇವರಿಗೆ ಸ್ತುತಿಪದಗಳನ್ನು ಹಾಡುತ್ತಿದ್ದರು. ಸೆರೆಯಲ್ಲಿದ್ದವರು ಅವುಗಳನ್ನು ಕೇಳುತ್ತಿದ್ದರು. ಅಪೊಸ್ತಲರ ಕೃತ್ಯಗ 16:25
  • ಅವನು ಜನರ ಸಂಗಡ ಆಲೋಚನೆ ಮಾಡಿದ ತರುವಾಯ ಸೈನ್ಯದ ಮುಂದೆ ಅವರು ಹೊರಡುವಾಗ ಪರಿಶುದ್ಧತ್ವದ ಪ್ರಭೆಯನ್ನು ಸ್ತುತಿಸುವದಕ್ಕೆ ಕರ್ತನನ್ನು ಕೊಂಡಾಡಿರಿ, ಯಾಕಂದರೆ ಆತನ ಕೃಪೆಯು ಯುಗ ಯುಗಕ್ಕೂ ಇರುವದೆಂದು ಹೇಳುವದಕ್ಕೆ ಕರ್ತ ನಿಗೆ ಸಂಗೀತಗಾರರನ್ನು ನೇಮಿಸಿದನು. -ಅವರು ಹಾಡುವದಕ್ಕೂ ಸ್ತುತಿಸುವದಕ್ಕೂ ಆರಂಭಿಸಿದಾಗಲೇ ಕರ್ತನು ಯೆಹೂದದ ಮೇಲೆ ಬಂದ ಅಮ್ಮೋನ್‌, ಮೋವಾಬ್‌, ಸೇಯಾರ್‌ ಪರ್ವತಗಳ ಮಕ್ಕಳಿಗೆ ವಿರೋಧವಾಗಿ ಹೊಂಚಿಕೊಳ್ಳುವವರನ್ನು ಇಟ್ಟಿದ್ದ ರಿಂದ ಅವರು ಹೊಡೆಯಲ್ಪಟ್ಟಿದ್ದರು. 2 ಪೂರ್ವಕಾಲವೃತ್ತಾ 20:21, 22
  • ಎಲ್ಲಾದರಲ್ಲಿಯೂ ಕೃತಜ್ಞತಾ ಸ್ತುತಿ ಮಾಡಿರಿ; ಯಾಕಂದರೆ ಇದೇ ನಿಮ್ಮ ವಿಷಯ ವಾಗಿ ಕ್ರಿಸ್ತ ಯೇಸುವಿನಲ್ಲಿರುವ ದೇವರ ಚಿತ್ತವಾಗಿದೆ. 1 ಥೆಸಲೊನೀಕದವರಿಗೆ 5:18
  • ಆದದರಿಂದ ಆತನ ಮೂಲಕ ವಾಗಿಯೇ ದೇವರಿಗೆ ಸ್ತೋತ್ರದ ಯಜ್ಞವನ್ನು ಎಡೆ ಬಿಡದೆ ಸಮರ್ಪಿಸೋಣ, ಅಂದರೆ ನಮ್ಮ ತುಟಿಗಳಿಂದ ಆತನ ನಾಮಕ್ಕೆ ಸಲ್ಲಿಸುವ ಸ್ತೋತ್ರಗಳ ಫಲವೇ ಆದಾಗಿದೆ. ಇಬ್ರಿಯರಿಗೆ 13:15
  • ಆದರೆ ನಾನು ಬಿಟ್ಟುಬಿಡದೆ ನಿನ್ನನ್ನು ನಿರೀಕ್ಷಿ ಸುತ್ತಾ ನಿನ್ನನ್ನು ಇನ್ನೂ ಹೆಚ್ಚೆಚ್ಚಾಗಿ ಸುತ್ತಿಸುವೆನು. ಕೀರ್ತನೆಗಳು 71:8
  • ಆದರೆ ನಾನು ಬಿಟ್ಟುಬಿಡದೆ ನಿನ್ನನ್ನು ನಿರೀಕ್ಷಿ ಸುತ್ತಾ ನಿನ್ನನ್ನು ಇನ್ನೂ ಹೆಚ್ಚೆಚ್ಚಾಗಿ ಸುತ್ತಿಸುವೆನು. ಕೀರ್ತನೆಗಳು 71:14
  • ಸೂರ್ಯೋದಯ ದಿಂದ ಅದರ ಅಸ್ತಮಾನದ ವರೆಗೂ ಕರ್ತನ ಹೆಸರು ಸ್ತುತಿಸಲ್ಪಡತಕ್ಕದ್ದು. ಕೀರ್ತನೆಗಳು 113:3
  • ಕೀರ್ತನೆಗಳಿಂದಲೂ ಸಂಗೀತ ಗಳಿಂದಲೂ ಆತ್ಮಸಂಬಂಧವಾದ ಹಾಡುಗಳಿಂದಲೂ ನಿಮಗೆ ನೀವೇ ಮಾತನಾಡಿಕೊಳ್ಳುತ್ತಾ ನಿಮ್ಮ ಹೃದಯದಲ್ಲಿ ಕರ್ತನಿಗೆ ಗಾನಮಾಡುತ್ತಾ ಇಂಪಾಗಿ ಹಾಡುತ್ತಾ ಇರ್ರಿ. ಯಾವಾಗಲೂ ಎಲ್ಲಾ ಕಾರ್ಯಗಳಿ ಗೋಸ್ಕರ ನಮ್ಮ ಕರ್ತನಾದ ಯೇಸು ಕ್ರಿಸ್ತನ ಹೆಸರಿನಲ್ಲಿ ತಂದೆಯಾದ ದೇವರಿಗೆ ಸ್ತೋತ್ರ ಮಾಡುತ್ತಾ ಇರ್ರಿ. ಎಫೆಸದವರಿಗೆ 5:19, 20
  • ಆತನಿಗೆ ಭಯ ಪಡುವ ಹಿರಿಕಿರಿಯರೇ, ನಮ್ಮ ದೇವರನ್ನು ಕೊಂಡಾಡಿರಿ ಎಂದು ಹೇಳಿತು. ಪ್ರಕಟನೆ 19:5