ಪ್ರೀತಿ


  • ಹೀಗೆ ನಂಬಿಕೆ ನಿರೀಕ್ಷೆ ಪ್ರೀತಿ ಈ ಮೂರೇ ನಿಲ್ಲುತ್ತವೆ; ಆದರೆ ಇವುಗಳಲ್ಲಿ ದೊಡ್ಡದು ಪ್ರೀತಿಯೇ.
    1 ಕೊರಿಂಥದವರಿಗೆ 13:13
  • ಯೇಸು ಅವ ನಿಗೆ--ನೀನು ನಿನ್ನ ದೇವರಾದ ಕರ್ತನನ್ನು ನಿನ್ನ ಪೂರ್ಣಹೃದಯದಿಂದಲೂ ನಿನ್ನ ಪೂರ್ಣಪ್ರಾಣ ದಿಂದಲೂ ನಿನ್ನ ಪೂರ್ಣ ಮನಸ್ಸಿನಿಂದಲೂ ಪ್ರೀತಿಸಬೇಕು. ಈ ಆಜ್ಞೆಯು ಮೊದಲನೆಯದೂ ದೊಡ್ಡದೂ ಆಗಿದೆ. ಅದರಂತೆ-- ನೀನು ನಿನ್ನ ನೆರೆಯವನನ್ನು ನಿನ್ನಂತೆಯೇ ಪ್ರೀತಿಸಬೇಕೆಂಬದು ಎರಡನೆಯದು. ನ್ಯಾಯ ಪ್ರಮಾಣವೆಲ್ಲವೂ ಪ್ರವಾದನೆಗಳೂ ಈ ಎರಡು ಆಜ್ಞೆಗಳ ಮೇಲೆ ಆಧಾರಗೊಂಡಿವೆ ಅಂದನು.
    ಮತ್ತಾಯನು 22:37-40
  • ಆತನು ಪಾರಿವಾಳ ಮಾರುವ ವರಿಗೆ--ಇವುಗಳನ್ನು ಇಲ್ಲಿಂದ ತಕ್ಕೊಂಡು ಹೋಗಿರಿ; ನನ್ನ ತಂದೆಯ ಮನೆಯನ್ನು ವ್ಯಾಪಾರದ ಮನೆಯ ನ್ನಾಗಿ ಮಾಡಬೇಡಿರಿ ಅಂದನು.
    ಯೋಹಾನನು 3:16
  • ಎಲ್ಲವುಗಳಿಗೆ ಮಿಗಿಲಾಗಿ ನಿಮ್ಮ ನಿಮ್ಮೊಳಗೆ ಯಥಾರ್ಥವಾದ ಪ್ರೀತಿಯಿರಲಿ; ಯಾಕಂದರೆ ಪ್ರೀತಿಯು ಎಷ್ಟೋ ಪಾಪಗಳನ್ನು ಮುಚ್ಚುತ್ತದೆ.
    1 ಪೇತ್ರನು 4:8
  • ಆತನು ನಮಗೋಸ್ಕರ ತನ್ನ ಪ್ರಾಣವನ್ನು ಕೊಟ್ಟದ್ದರಲ್ಲಿಯೇ ದೇವರ ಪ್ರೀತಿ ಇಂಥದ್ದೆಂದು ನಮಗೆ ತಿಳಿದು ಬಂದಿದೆ. ನಾವು ಸಹ ಸಹೋದರರಿಗೋಸ್ಕರ ನಮ್ಮ ಪ್ರಾಣಗಳನ್ನು ಕೊಡುವ ಹಂಗಿನಲ್ಲಿದ್ದೇವೆ. ಆದರೆ ಈ ಲೋಕದ ಸಂಪತ್ತುಳ್ಳ ಯಾವನಾದರೂ ಕೊರತೆಯಲ್ಲಿರುವ ತನ್ನ ಸಹೋದರನನ್ನು ನೋಡಿ ಕರುಣಿಸದೆ ಬಿಟ್ಟರೆ ದೇವರ ಪ್ರೀತಿಯು ಅವನಲ್ಲಿ ನೆಲೆಗೊಂಡಿರುವದು ಹೇಗೆ? ನನ್ನ ಚಿಕ್ಕ ಮಕ್ಕಳೇ, ನೀವು ಮಾತಿನಿಂದಾಗಲಿ ನಾಲಿಗೆಯಿಂದಾಗಲಿ ಪ್ರೀತಿಸುವವರಾಗಿರದೆ ಕ್ರಿಯೆಯಲ್ಲಿಯೂ ಸತ್ಯದ ಲ್ಲಿಯೂ ಪ್ರೀತಿಸುವವರಾಗಿರಬೇಕು.
    1 ಯೋಹಾನನು 3:16-18
  • ಪ್ರಿಯರೇ, ನಾವು ಒಬ್ಬರನ್ನೊಬ್ಬರು ಪ್ರೀತಿಸೋಣ. ಯಾಕಂದರೆ ಪ್ರೀತಿಯು ದೇವರಿಂದಾಗಿದೆ. ಪ್ರೀತಿ ಮಾಡುವ ಪ್ರತಿಯೊಬ್ಬನು ದೇವರಿಂದ ಹುಟ್ಟಿದವನೂ ದೇವರನ್ನು ಬಲ್ಲವನೂ ಆಗಿದ್ದಾನೆ. ಪ್ರೀತಿಯಿಲ್ಲದ ವನು ದೇವರನ್ನು ಬಲ್ಲವನಲ್ಲ; ಯಾಕಂದರೆ ದೇವರು ಪ್ರೀತಿಯಾಗಿದ್ದಾನೆ.
    1 ಯೋಹಾನನು 4:7, 8
  • ನಿನ್ನ ನೆರೆಯವನನ್ನು ನಿನ್ನಂತೆಯೇ ಪ್ರೀತಿಸು ಎಂಬ ಒಂದೇ ಮಾತಿನಲ್ಲಿ ನ್ಯಾಯಪ್ರಮಾಣವೆಲಾ ನೆರವೇರುತ್ತದೆ.
    ಗಲಾತ್ಯದವರಿಗೆ 5:14
  • ನೀವು ನನ್ನನ್ನು ಪ್ರೀತಿಸುವದಾದರೆ ನನ್ನ ಆಜ್ಞೆ ಗಳನ್ನು ಕೈಕೊಳ್ಳಿರಿ.
    ಯೋಹಾನನು 14:15
  • ನೀವು ಈ ನನ್ನ ಸಹೋದರ ರಲ್ಲಿ ಅತ್ಯಲ್ಪನಾದವನೊಬ್ಬನಿಗೆ ಮಾಡಿದ್ದು ನನಗೂ ಮಾಡಿದಂತಾಯಿತು ಅಂದನು.
    ಮತ್ತಾಯನು 25:40
  • ಆದದರಿಂದ ಜನರು ನಿಮಗೆ ಏನೇನು ಮಾಡಬೇಕೆಂದು ನೀವು ಇಚ್ಛೈಸುವಿರೋ ಅವುಗಳನ್ನು ನೀವು ಸಹ ಅವರಿಗೆ ಹಾಗೆಯೇ ಮಾಡಿರಿ; ಯಾಕಂದರೆ ಇದೇ ನ್ಯಾಯಪ್ರಮಾಣದ ಮತ್ತು ಪ್ರವಾದಿಗಳ ತಾತ್ಪರ್ಯ.
    ಮತ್ತಾಯನು 7:12
  • ಯಾವನಿ ಗಾದರೂ ಒಬ್ಬನಿಗೆ ಇನ್ನೊಬ್ಬನ ಮೇಲೆ ವಿರೋಧವಾಗಿ ವ್ಯಾಜ್ಯವಿದ್ದರೂ ಒಬ್ಬರಿಗೊಬ್ಬರು ತಾಳಿಕೊಂಡು ಕ್ರಿಸ್ತನು ನಿಮ್ಮನ್ನು ಕ್ಷಮಿಸಿದಂತೆಯೇ ನೀವು ಒಬ್ಬರಿಗೊಬ್ಬರು ಕ್ಷಮಿಸಿರಿ. ಇದೆಲ್ಲಾದರ ಮೇಲೆ ಪ್ರೀತಿಯನ್ನು ಧರಿಸಿಕೊಳ್ಳಿರಿ; ಅದು ಸಂಪೂರ್ಣ ಮಾಡುವ ಬಂಧವಾಗಿದೆ.
    ಕೊಲೊಸ್ಸೆಯವರಿಗೆ 3:13, 14
  • ನೀವು ಮಾಡುವದನ್ನೆಲ್ಲಾ ಪ್ರೀತಿಯಿಂದ ಮಾಡಿರಿ.
    1 ಕೊರಿಂಥದವರಿಗೆ 16:14
  • ಒಬ್ಬನು ತನ್ನ ಸ್ನೇಹಿತರಿ ಗೋಸ್ಕರ ತನ್ನ ಪ್ರಾಣವನ್ನು ಕೊಡುವ ಪ್ರೀತಿಗಿಂತ ಹೆಚ್ಚಿನದು ಯಾವದೂ ಇಲ್ಲ.
    ಯೋಹಾನನು 15:13
  • ಆತನು ಮೊದಲು ನಮ್ಮನ್ನು ಪ್ರೀತಿಸಿದ್ದರಿಂದಲೇ ನಾವು ಆತನನ್ನು ಪ್ರೀತಿಸುತ್ತೇವೆ.
    1 ಯೋಹಾನನು 4:19
  • ಹೇಗಂದರೆ ಮರಣವಾಗಲಿ ಜೀವವಾಗಲಿ ದೂತರಾಗಲಿ ರಾಜತ್ವಗಳಾಗಲಿ ಅಧಿಕಾರಗಳಾಗಲಿ ಈಗಿನವುಗಳಾ ಗಲಿ ಮುಂಬರುವವುಗಳಾಗಲಿ ಉನ್ನತವಾಗಲಿ ಅಗಾಧವಾಗಲಿ ಬೇರೆ ಯಾವ ಸೃಷ್ಟಿಯಾಗಲಿ ನಮ್ಮನ್ನು ನಮ್ಮ ಕರ್ತನಾದ ಕ್ರಿಸ್ತ ಯೇಸುವಿನಲ್ಲಿರುವ ದೇವರ ಪ್ರೀತಿಯಿಂದ ಅಗಲಿಸಲಾರವೆಂದು ನನಗೆ ನಿಶ್ಚಯ ಉಂಟು.
    ರೋಮಾಪುರದವರಿಗೆ 8:38, 39
  • ಒಬ್ಬರನ್ನೊಬ್ಬರು ಪ್ರೀತಿಸಬೇಕೆಂಬ ಒಂದು ಹೊಸ ಆಜ್ಞೆಯನ್ನು ನಾನು ನಿಮಗೆ ಕೊಡುತ್ತೇನೆ--ನಾನು ನಿಮ್ಮನ್ನು ಪ್ರೀತಿಸಿದ ಹಾಗೆಯೇ ನೀವೂ ಒಬ್ಬರನ್ನೊಬ್ಬರು ಪ್ರೀತಿಸಬೇಕು. ಒಬ್ಬರ ಮೇಲೊಬ್ಬರಿಗೆ ಪ್ರೀತಿಯಿದ್ದರೆ ಇದರಿಂದ ಎಲ್ಲರೂ ನಿಮ್ಮನ್ನು ನನ್ನ ಶಿಷ್ಯರೆಂದು ತಿಳಿದುಕೊಳ್ಳು ವರು ಎಂದು ಹೇಳಿದನು.
    ಯೋಹಾನನು 13:34, 35
  • ನನ್ನ ಆಜ್ಞೆಗಳನ್ನು ಹೊಂದಿ ಅವುಗಳನ್ನು ಅನುಸರಿಸುವವನೇ ನನ್ನನ್ನು ಪ್ರೀತಿಸುವವನು; ನನ್ನನ್ನು ಪ್ರೀತಿಸುವವನನ್ನು ನನ್ನ ತಂದೆಯೂ ಪ್ರೀತಿಸುವನು. ನಾನು ಅವನನ್ನು ಪ್ರೀತಿಸಿ ಅವನಿಗೆ ನನ್ನನ್ನು ವ್ಯಕ್ತಪಡಿಸಿ ಕೊಳ್ಳುವೆನು ಎಂದು ಹೇಳಿದನು. ಯೂದನು (ಇಸ್ಕರಿಯೋತನಲ್ಲ)--ಕರ್ತನೇ, ನೀನು ಲೋಕಕ್ಕೆ ಕಾಣಿಸಿಕೊಳ್ಳದೆ ನಮಗೆ ಕಾಣಿಸಿ ಕೊಳ್ಳುವದು ಹೇಗೆ ಎಂದು ಆತನನ್ನು ಕೇಳಿದನು. ಯೇಸು ಪ್ರತ್ಯುತ್ತರವಾಗಿ ಅವನಿಗೆ--ಯಾವನಾ ದರೂ ನನ್ನನ್ನು ಪ್ರೀತಿಸುವದಾದರೆ ಅವನು ನನ್ನ ಮಾತುಗಳನ್ನು ಕೈಕೊಳ್ಳುವನು; ನನ್ನ ತಂದೆಯು ಅವ ನನ್ನು ಪ್ರೀತಿಸುವನು. ಇದಲ್ಲದೆ ನಾವು ಅವನ ಬಳಿಗೆ ಬಂದು ಅವನೊಂದಿಗೆ ನಮ್ಮ ನಿವಾಸವನ್ನು ಮಾಡಿ ಕೊಳ್ಳುವೆವು. ನನ್ನನ್ನು ಪ್ರೀತಿಸದವನು ನನ್ನ ಮಾತು ಗಳನ್ನು ಕೈಕೊಳ್ಳುವದಿಲ್ಲ; ನೀವು ಕೇಳಿದ ಮಾತು ನನ್ನದಲ್ಲ; ಆದರೆ ನನ್ನನ್ನು ಕಳುಹಿಸಿದ ನನ್ನ ತಂದೆಯ ಮಾತೇ.
    ಯೋಹಾನನು 14:21-24
  • ಪ್ರೀತಿಯು ನಿಷ್ಕಪಟವಾಗಿರಲಿ ಕೆಟ್ಟತನವನ್ನು ಹೇಸಿ ಕೊಂಡು ಒಳ್ಳೆಯದಕ್ಕೆ ಅಂಟಿಕೊಳ್ಳಿರಿ.
    ರೋಮಾಪುರದವರಿಗೆ 12:9
  • ಪ್ರಿಯರೇ, ದೇವರು ನಮ್ಮನ್ನು ಹೀಗೆ ಪ್ರೀತಿಸಿದ ಮೇಲೆ ನಾವು ಸಹ ಒಬ್ಬರನ್ನೊಬ್ಬರು ಪ್ರೀತಿಸುವ ಹಂಗಿನಲ್ಲಿದ್ದೇವೆ.
    1 ಯೋಹಾನನು 4:11
  • ದೇವರನ್ನು ಪ್ರೀತಿಸುವವನು ತನ್ನ ಸಹೋದರನನ್ನೂ ಪ್ರೀತಿಸಬೇಕೆಂಬ ಈ ಆಜ್ಞೆ ಯನ್ನು ನಾವು ಆತನಿಂದ ಹೊಂದಿದ್ದೇವೆ.
    1 ಯೋಹಾನನು 4:21
  • ನಿನ್ನ ದೇವರಾದ ಕರ್ತನನ್ನು ನಿನ್ನ ಪೂರ್ಣಹೃದಯದಿಂದಲೂ ಪೂರ್ಣ ಪ್ರಾಣದಿಂದಲೂ ಪೂರ್ಣಬಲದಿಂದಲೂ ಪ್ರೀತಿ ಮಾಡಬೇಕು.
    ಧರ್ಮೋಪದೇಶಕಾಂಡ 6:5
  • ಈಗ ಇಸ್ರಾಯೇಲೇ, ನಿನ್ನ ಕರ್ತನಾದ ದೇವರಿಗೆ ಭಯಪಟ್ಟು ಆತನ ಎಲ್ಲಾ ಮಾರ್ಗಗಳಲ್ಲಿ ನಡೆದು ಕೊಂಡು ಆತನನ್ನು ಪ್ರೀತಿಮಾಡಿ ನಿನ್ನ ಕರ್ತನಾದ ದೇವರಿಗೆ ನಿನ್ನ ಪೂರ್ಣಹೃದಯದಿಂದಲೂ ನಿನ್ನ ಪೂರ್ಣಪ್ರಾಣದಿಂದಲೂ ಸೇವೆಮಾಡಿ
    ಧರ್ಮೋಪದೇಶಕಾಂಡ 10:12
  • ನಾನು ಜೀವವನ್ನೂ ಮರಣವನ್ನೂ, ಆಶೀರ್ವಾದವನ್ನೂ ಶಾಪ ವನ್ನೂ ನಿನ್ನ ಮುಂದೆ ಇಟ್ಟಿದ್ದೇನೆಂಬದಕ್ಕೆ ಆಕಾಶವನ್ನೂ ಭೂಮಿಯನ್ನೂ ಈಹೊತ್ತು ನಿಮ್ಮ ಮೇಲೆ ಸಾಕ್ಷಿಗಳಾಗಿ ಕರೆಯುತ್ತೇನೆ.
    ಧರ್ಮೋಪದೇಶಕಾಂಡ 30:20
  • ಆದರೆ ನೀವು ಕರ್ತನಿಗೆ ಭಯ ಪಟ್ಟು ನಿಮ್ಮ ಪೂರ್ಣ ಹೃದಯದಿಂದ ಸತ್ಯದಲ್ಲಿ ಆತ ನನ್ನು ಸೇವಿಸಿರಿ. ಆತನು ನಿಮಗೋಸ್ಕರ ಎಂಥ ಮಹತ್ತಾದ ಕಾರ್ಯಗಳನ್ನು ಮಾಡಿದನೆಂದು ಆಲೋ ಚಿಸಿರಿ.
    1 ಸಮುವೇಲನು 12:24
  • ನಾನು ಕರ್ತನನ್ನು ಯಾವಾಗಲೂ ನನ್ನ ಮುಂದೆ ಇಟ್ಟುಕೊಂಡಿದ್ದೇನೆ. ಆತನು ನನ್ನ ಬಲಗಡೆಯಲ್ಲಿ ಇರುವದರಿಂದ ನಾನು ಕದಲೆನು. 9 ಆದದರಿಂದ ನನ್ನ ಹೃದಯವು ಸಂತೋಷಿಸಿ ನನ್ನ ಹೆಮ್ಮೆಯು ಉಲ್ಲಾಸಪಡುತ್ತದೆ; ನನ್ನ ಶರೀರವು ಸಹ ನಿರೀಕ್ಷೆಯಿಂದ ವಿಶ್ರಾಂತಿಸುವದು.
    ಕೀರ್ತನೆಗಳು 16:8, 9
  • ಓ ದೇವರೇ, ಜಿಂಕೆಯು ನೀರಿನ ತೊರೆಗಳನ್ನು ಹೇಗೆ ಬಯಸುವದೋ ಹಾಗೆಯೇ ನನ್ನ ಪ್ರಾಣವು ನಿನ್ನನ್ನು ಬಯಸುತ್ತದೆ. 2 ದೇವರಿ ಗೋಸ್ಕರ ಹೌದು, ಜೀವವುಳ್ಳ ದೇವರಿಗೋಸ್ಕರ ನನ್ನ ಪ್ರಾಣವು ದಾಹಗೊಳ್ಳುತ್ತದೆ; ಯಾವಾಗ ಬಂದು ದೇವರ ಮುಂದೆ ಕಾಣಿಸಿಕೊಳ್ಳಲಿ?
    ಕೀರ್ತನೆಗಳು 42:1, 2
  • ಓ ದೇವರೇ, ನೀನೇ ನನ್ನ ದೇವರು ಹೊತ್ತಾರೆ ನಿನ್ನನ್ನು ಹುಡುಕುತ್ತೇನೆ; ನೀರಿಲ್ಲದೆ ಒಣಗಿದ ಭೂಮಿಯಲ್ಲಿದ್ದವನು ನೀರಿ ಗಾಗಿಯೋ ಎಂಬಂತೆ ನನ್ನ ಆತ್ಮವು ನಿನಗಾಗಿ ಆತುರ ಗೊಳ್ಳುತ್ತದೆ; ಶರೀರವು ಕಂದಿಹೋಗುತ್ತದೆ.
    ಕೀರ್ತನೆಗಳು 63:1
  • ನನ್ನ ಪ್ರಾಣವು ನಿನ್ನನ್ನು ಹಿಂಬಾಲಿಸಿ ಬರುತ್ತದೆ; ನಿನ್ನ ಬಲಗೈ ನನ್ನನ್ನು ಗಟ್ಟಿ ಯಾಗಿ ಎತ್ತಿಹಿಡಿಯುತ್ತದೆ.
    ಕೀರ್ತನೆಗಳು 63:8
  • ಪರ ಲೋಕದಲ್ಲಿ ನನಗೆ ನೀನಲ್ಲದೆ ಮತ್ತಾರಿದ್ದಾರೆ? ನಿನ್ನ ಹೊರತಾಗಿ ಭೂಮಿಯಲ್ಲಿ ನಾನು ಅಪೇಕ್ಷಿಸುವವರು ಯಾರೂ ಇಲ್ಲ. 26 ನನ್ನ ಮಾಂಸವೂ ಹೃದಯವೂ ಕುಂದುತ್ತದೆ; ಆದರೆ ದೇವರು ಯುಗಯುಗಕ್ಕೂ ನನ್ನ ಹೃದಯದ ಬಲವೂ ಪಾಲೂ ಆಗಿದ್ದಾನೆ.
    ಕೀರ್ತನೆಗಳು 73:25, 26
  • ದಾಹಪಟ್ಟ ಪ್ರಾಣ ವನ್ನು ತೃಪ್ತಿಪಡಿಸಿ ಹಸಿದ ಪ್ರಾಣವನ್ನು ಒಳ್ಳೇದರಿಂದ ತುಂಬಿಸಿದ್ದಾನೆ.
    ಕೀರ್ತನೆಗಳು 107:9
  • ನಾನು ಕರ್ತನನ್ನು ಪ್ರೀತಿ ಮಾಡುತ್ತೇನೆ.ಆತನು ನನ್ನ ಸ್ವರವನ್ನೂ ವಿಜ್ಞಾಪನೆಯನ್ನೂ ಕೇಳಿದ್ದಾನೆ. 2 ಆತನು ನನ್ನ ಮೊರೆಯನ್ನು ಆಲಿಸಿದ್ದರಿಂದ ನಾನು ಜೀವದಿಂದಿರುವ ವರೆಗೂ ಆತನನ್ನೇ ಬೇಡುವೆನು.
    ಕೀರ್ತನೆಗಳು 116:1, 2
  • ಕಣ್ಣು ಶರೀರದ ದೀಪವಾಗಿದೆ. ಆದಕಾರಣ ನಿನ್ನ ಕಣ್ಣು ಶುದ್ಧವಾಗಿದ್ದರೆ ನಿನ್ನ ಶರೀರವೆಲ್ಲಾ ಬೆಳಕಾಗಿರುವದು.
    ಮತ್ತಾಯನು 6:22
  • ಆದರೆ ಮೊದಲು ನೀವು ದೇವರ ರಾಜ್ಯವನ್ನೂ ಆತನ ನೀತಿಯನ್ನೂ ಹುಡುಕಿರಿ. ಇವುಗಳ ಕೂಡ ಅವೆಲ್ಲವುಗಳು ಕೂಡಿಸಲ್ಪಡುವವು.
    ಮತ್ತಾಯನು 6:33
  • ಮತ್ತು ತನ್ನ ಮನೆಗಳನ್ನಾಗಲೀ ಸಹೋದರರನ್ನಾಗಲೀ ಸಹೋದರಿ ಯರನ್ನಾಗಲೀ ತಂದೆಯನ್ನಾಗಲೀ ತಾಯಿಯನ್ನಾಗಲೀ ಮಕ್ಕಳನ್ನಾಗಲೀ ಭೂಮಿಯನ್ನಾಗಲೀ ನನ್ನ ಹೆಸರಿ ನಿಮಿತ್ತವಾಗಿ ಬಿಟ್ಟುಬಿಡುವ ಪ್ರತಿಯೊಬ್ಬನು ನೂರರಷ್ಟು ಹೊಂದಿಕೊಳ್ಳುವನು; ಮತ್ತು ನಿತ್ಯಜೀವವನ್ನು ಬಾಧ್ಯ ವಾಗಿ ಹೊಂದುವನು
    ಮತ್ತಾಯನು 19:29
  • ನನ್ನಲ್ಲಿ ನೆಲೆಗೊಂಡಿರ್ರಿ, ನಾನು ನಿಮ್ಮಲ್ಲಿ ನೆಲೆ ಗೊಂಡಿರುವೆನು. ಕೊಂಬೆಯು ದ್ರಾಕ್ಷೇಯಬಳ್ಳಿಯಲ್ಲಿ ನೆಲೆಗೊಂಡಿರದಿದ್ದರೆ ಹೇಗೆ ತನ್ನಷ್ಟಕ್ಕೆ ತಾನೇ ಫಲ ಕೊಡಲಾರದೋ ಹಾಗೆಯೇ ನೀವೂ ನನ್ನಲಿ ನೆಲೆಗೊಂಡಿರದಿದ್ದರೆ ಫಲಕೊಡಲಾರಿರಿ.
    ಯೋಹಾನನು 15:4
  • ಮೇಲಿರು ವಂಥವುಗಳ ಮೇಲೆ ನಿಮ್ಮ ಮನಸ್ಸಿಡಿರಿ. ಭೂಸಂಬಂಧ ವಾದವುಗಳ ಮೇಲೆ ಇಡಬೇಡಿರಿ.
    ಕೊಲೊಸ್ಸೆಯವರಿಗೆ 3:2
  • ದೇವರ ಪ್ರೀತಿ ಏನಂದರೆ ಆತನ ಆಜ್ಞೆಗಳನ್ನು ಕೈಕೊಂಡು ನಡೆಯುವದೇ, ಆತನ ಆಜ್ಞೆಗಳು ಕಠಿಣ ವಾದವುಗಳಲ್ಲ.
    1 ಯೋಹಾನನು 5:3