ಪದ
- ಆದಿಯಲ್ಲಿ ವಾಕ್ಯವಿದ್ದನು; ಆ ವಾಕ್ಯವು ದೇವರೊಂದಿಗೆ ಇದ್ದನು; ಆ ವಾಕ್ಯವು ದೇವರಾಗಿದ್ದನು. ಇದಲ್ಲದೆ ಆ ವಾಕ್ಯವಾಗಿರುವಾತನು ಶರೀರಧಾರಿ ಯಾಗಿ ಕೃಪೆಯಿಂದಲೂ ಸತ್ಯದಿಂದಲೂ ತುಂಬಿ ನಮ್ಮ ಮಧ್ಯದಲ್ಲಿ ವಾಸಮಾಡಿದನು. (ತಂದೆಯಿಂದ ಹುಟ್ಟಿದ ಒಬ್ಬನೇ ಮಗನ ಮಹಿಮೆಯಂತೆ ನಾವು ಆತನ ಮಹಿಮೆಯನ್ನು ನೋಡಿದೆವು). ಯೋಹಾನನು 1:1, 14
- ಆದರೆ ಆತನು ಪ್ರತ್ಯುತ್ತರವಾಗಿ--ಮನುಷ್ಯನು ರೊಟ್ಟಿ ಮಾತ್ರದಿಂದಲೇ ಜೀವಿಸುವದಿಲ್ಲ, ಆದರೆ ದೇವರ ಬಾಯೊಳಗಿಂದ ಹೊರಡುವ ಪ್ರತಿಯೊಂದು ಮಾತಿನಿಂದ ಜೀವಿಸುವನು ಎಂದು ಬರೆದದೆ ಅಂದನು. ಮತ್ತಾಯನು 4:4
- ನಿನಗೆ ವಿರೋಧವಾಗಿ ಪಾಪ ಮಾಡದ ಹಾಗೆ ನನ್ನ ಹೃದಯದಲ್ಲಿ ನಿನ್ನ ವಾಕ್ಯವನ್ನು ಬಚ್ಚಿಟ್ಟಿದ್ದೇನೆ. ಕೀರ್ತನೆಗಳು 119:11
- ನಾನು ನಿಮಗೆ ಹೇಳಿದ ಮಾತಿನ ದೆಸೆಯಿಂದ ನೀವು ಈಗ ಶುದ್ಧರಾಗಿದ್ದೀರಿ. ಯೋಹಾನನು 15:3
- ನಿನ್ನ ವಾಕ್ಯಗಳ ಪ್ರವೇಶವು ಬೆಳಕನ್ನು ಕೊಟ್ಟು ಮೂರ್ಖರಿಗೆ ಗ್ರಹಿಕೆಯನ್ನು ಉಂಟುಮಾಡುತ್ತದೆ. ಕೀರ್ತನೆಗಳು 119:130
- ನೀನು ದೇವರಿಗೆ ಯೋಗ್ಯನಾಗಿ ಕಾಣಿಸಿಕೊಳ್ಳುವದಕ್ಕೆ ಅಭ್ಯಾಸಿಸು. ಅವಮಾನಕ್ಕೆ ಗುರಿ ಯಾಗದ ಕೆಲಸದವನೂ ಸತ್ಯವಾಕ್ಯವನ್ನು ಸರಿಯಾಗಿ ವಿಭಾಗಿಸುವವನೂ ಆಗಿರು. 2 ತಿಮೊಥೆಯನಿಗೆ 2:15
- ಯಾಕಂದರೆ ದೇವರ ವಾಕ್ಯವು ಸಜೀವ ವಾದದ್ದು, ಶಕ್ತಿಯುಳ್ಳದ್ದು, ಯಾವ ಇಬ್ಬಾಯಿ ಕತ್ತಿ ಗಿಂತಲೂ ಹದವಾದದ್ದು, ಪ್ರಾಣ ಆತ್ಮಗಳನ್ನೂ ಕೀಲು ಮಜ್ಜೆಗಳನ್ನೂ ವಿಭಾಗಿಸುವಷ್ಟರ ಮಟ್ಟಿಗೆ ತೂರಿ ಹೋಗುವಂಥದ್ದೂ ಹೃದಯದ ಆಲೋಚನೆಗಳನ್ನೂ ಉದ್ದೇಶಗಳನ್ನೂ ವಿವೇಚಿಸುವಂಥದ್ದೂ ಆಗಿದೆ. ಇಬ್ರಿಯರಿಗೆ 4:12
- ಬದುಕಿಸುವಂಥದ್ದು ಆತ್ಮವೇ; ಮಾಂಸವು ಯಾವದಕ್ಕೂ ಪ್ರಯೋಜನವಾಗುವದಿಲ್ಲ; ನಾನು ನಿಮಗೆ ಹೇಳುವ ಮಾತುಗಳೇ ಆತ್ಮವಾಗಿಯೂ ಜೀವವಾಗಿಯೂ ಇವೆ. ಯೋಹಾನನು 6:63
- ಆಕಾಶವೂ ಭೂಮಿಯೂ ಅಳಿದುಹೋಗುವವು; ಆದರೆ ನನ್ನ ಮಾತುಗಳು ಅಳಿದುಹೋಗುವದೇ ಇಲ್ಲ. ಮತ್ತಾಯನು 24:35
- ಹೊಸದಾಗಿ ಹುಟ್ಟಿದ ಶಿಶುಗಳಂತಿರುವ ನೀವು ಬೆಳೆಯುವ ಹಾಗೆ ವಾಕ್ಯವೆಂಬ ಶುದ್ಧ ಹಾಲನ್ನು ಬಯಸಿರಿ. 1 ಪೇತ್ರನು 2:2