ಕ್ಷಮೆ


 • ಆದದರಿಂದ ನೀವು ಮನುಷ್ಯರ ಅಪರಾಧ ಗಳನ್ನು ಕ್ಷಮಿಸುವದಾದರೆ ಪರಲೋಕದ ನಿಮ್ಮ ತಂದೆಯು ಸಹ ನಿಮ್ಮನ್ನು ಕ್ಷಮಿಸುವನು. ನೀವು ಮನುಷ್ಯರ ಅಪರಾಧಗಳನ್ನು ಕ್ಷಮಿಸದೆ ಹೋದರೆ ನಿಮ್ಮ ತಂದೆಯೂ ನಿಮ್ಮ ಅಪರಾಧಗಳನ್ನು ಕ್ಷಮಿಸು ವದಿಲ್ಲ.
  ಮತ್ತಾಯನು 6:14, 15
 • ಆಗ ಯೇಸು--ತಂದೆಯೇ, ಅವರನ್ನು ಕ್ಷಮಿಸು; ಯಾಕಂದರೆ ತಾವು ಏನು ಮಾಡುತ್ತೇವೆಂದು ಅವರು ಅರಿಯರು ಅಂದನು. ಅವರು ಆತನ ಉಡುಪನ್ನು ಪಾಲು ಮಾಡಿ ಚೀಟು ಹಾಕಿದರು.
  ಲೂಕನು 23:34
 • ಅದಕ್ಕೆ ಆಕೆಯು-- ಕರ್ತನೇ, ಯಾರೂ ವಿಧಿಸಲಿಲ್ಲ ಅಂದಳು. ಯೇಸು ಆಕೆಗೆ--ನಾನೂ ನಿನಗೆ ಶಿಕ್ಷೆ ವಿಧಿಸುವದಿಲ್ಲ; ಹೋಗು, ಇನ್ನು ಮೇಲೆ ಪಾಪಮಾಡಬೇಡ ಅಂದನು.
  ಯೋಹಾನನು 8:11
 • ನಾನಾಗಿ ನಾನೇ ನನಗೋಸ್ಕರ ನಿನ್ನ ದ್ರೋಹಗಳನ್ನು ಅಳಿಸಿಬಿಡುತ್ತೇನೆ. ನಿನ್ನ ಪಾಪ ಗಳನ್ನು ನನ್ನ ನೆನಪಿನಲ್ಲಿಡೆನು.
  ಯೆಶಾಯ 43:25
 • ಕರುಣೆಯುಳ್ಳವರು ಧನ್ಯರು; ಯಾಕಂದರೆ ಅವರು ಕರುಣೆ ಹೊಂದುವರು.
  ಮತ್ತಾಯನು 5:7
 • ನಾನು ಅವರ ಅನೀತಿಯ ವಿಷಯವಾಗಿ ಕರುಣೆಯುಳ್ಳವನಾಗಿದ್ದು ಅವರ ಪಾಪಗಳನ್ನೂ ಅಪರಾಧಗಳನ್ನೂ ನನ್ನ ನೆನಪಿಗೆ ಇನ್ನೆಂದಿಗೂ ತರುವದಿಲ್ಲ ಎಂದು ಕರ್ತನು ನುಡಿಯು ತ್ತಾನೆ.
  ಇಬ್ರಿಯರಿಗೆ 8:12
 • ತರುವಾಯ ಪೇತ್ರನು ಆತನ ಬಳಿಗೆ ಬಂದು--ಕರ್ತನೇ, ನನ್ನ ಸಹೋದರನು ನನಗೆ ವಿರೋಧ ವಾಗಿ ಪಾಪಮಾಡಿದರೆ ನಾನು ಎಷ್ಟು ಸಾರಿ ಅವನಿಗೆ ಕ್ಷಮಿಸಬೇಕು? ಏಳು ಸಾರಿಯೋ ಎಂದು ಕೇಳಿದನು. ಯೇಸು ಅವನಿಗೆ--ಏಳು ಸಾರಿಯಲ್ಲ, ಆದರೆ ಏಳೆಪ್ಪತ್ತು ಸಾರಿ ಎಂದು ನಾನು ನಿನಗೆ ಹೇಳುತ್ತೇನೆ;
  ಮತ್ತಾಯನು 18:21, 22
 • ನಾವು ನಮ್ಮ ಪಾಪಗಳನ್ನು ಅರಿಕೆ ಮಾಡಿದರೆ ಆತನು ನಂಬಿಗಸ್ತನೂ ನೀತಿವಂತನೂ ಆಗಿರುವದರಿಂದ ನಮ್ಮ ಪಾಪಗಳನ್ನು ಕ್ಷಮಿಸಿಬಿಟ್ಟು ಸಕಲ ಅನೀತಿಯಿಂದ ನಮ್ಮನ್ನು ಶುದ್ಧಿ ಮಾಡುವನು.
  1 ಯೋಹಾನನು 1:9
 • ಪೂರ್ವಕ್ಕೂ ಪಶ್ಚಿಮಕ್ಕೂ ಎಷ್ಟು ದೂರವೋ ನಮ್ಮ ದ್ರೋಹಗಳನ್ನು ನಮ್ಮಿಂದ ಅಷ್ಟು ದೂರ ಮಾಡಿದ್ದಾನೆ.
  ಕೀರ್ತನೆಗಳು 103:12
 • ನಿನ್ನ ಜನರ ಮಕ್ಕಳ ಮೇಲೆ ಮುಯ್ಯಿಗೆಮುಯ್ಯಿ ತೀರಿಸದವ ನಾಗಿಯೂ ಸೇಡು ತೀರಿಸದೆಯೂ ಇರು. ಆದರೆ ನೀನು ನಿನ್ನ ನೆರೆಯವನನ್ನು ನಿನ್ನಂತೆಯೇ ಪ್ರೀತಿಸಬೇಕು; ನಾನೇ ಕರ್ತನು.
  ಯಾಜಕಕಾಂಡ 19:18
 • ನೀನು ಕರುಣೆಯು ಳ್ಳವನಿಗೆ ಕರುಣೆಯನ್ನು ತೋರಿಸುವಿ; ಸಂಪೂರ್ಣ ನಾದ ಮನುಷ್ಯನಿಗೆ ಸಂಪೂರ್ಣನಾಗಿರುವಿ. ;
  ಕೀರ್ತನೆಗಳು 18:25
 • ಕರ್ತನೇ, ನೀನು ಒಳ್ಳೆಯವನೂ ಕ್ಷಮಿಸುವದಕ್ಕೆ ಸಿದ್ಧನೂ ಆಗಿದ್ದೀ; ನಿನಗೆ ಮೊರೆಯಿಡುವವರೆಲ್ಲರಿಗೆ ಬಹು ಕೃಪೆಯುಳ್ಳವನೂ ಆಗಿದ್ದೀ.
  ಕೀರ್ತನೆಗಳು 86:5
 • ಕರುಣೆಯೂ ಸತ್ಯವೂ ನಿನ್ನನ್ನು ಬಿಡದಿರಲಿ. ನಿನ್ನ ಕೊರಳಿನ ಸುತ್ತಲೂ ಅವುಗಳನ್ನು ಕಟ್ಟಿಕೋ; ನಿನ್ನ ಹೃದಯದ ಹಲಗೆಯ ಮೇಲೆ ಅವುಗಳನ್ನು ಬರೆ. ಹೀಗೆ ನೀನು ದೇವರ ಮುಂದೆಯೂ ಮನುಷ್ಯನ ಮುಂದೆಯೂ ದಯೆಯನ್ನೂ ಒಳ್ಳೆಯ ವಿವೇಕವನ್ನೂ ಪಡೆದುಕೊಳ್ಳುವಿ.
  ಙ್ಞಾನೋಕ್ತಿಗಳು 3:3, 4
 • ಅದರಂತೆಯೇ ನಿಮ್ಮಲ್ಲಿ ಪ್ರತಿಯೊ ಬ್ಬನು ಹೃದಯಪೂರ್ವಕವಾಗಿ ತನ್ನ ಸಹೋದರನ ತಪ್ಪುಗಳನ್ನು ಕ್ಷಮಿಸದೆಹೋದರೆ ಪರಲೋಕದಲ್ಲಿರುವ ನನ್ನ ತಂದೆಯೂ ನಿಮಗೆ ಹಾಗೆಯೇ ಮಾಡುವನು ಅಂದನು.
  ಮತ್ತಾಯನು 18:35
 • ನೀವು ನಿಂತು ಕೊಂಡು ಪ್ರಾರ್ಥಿಸುವಾಗ ಯಾವನಿಗಾದರೂ ವಿರೋ ಧವಾದದ್ದು ನಿಮ್ಮಲ್ಲಿದ್ದರೆ ಕ್ಷಮಿಸಿರಿ; ಆಗ ಪರಲೋಕ ದಲ್ಲಿರುವ ನಿಮ್ಮ ತಂದೆಯು ಸಹ ನಿಮ್ಮ ಅಪರಾಧಗಳನ್ನು ನಿಮಗೆ ಕ್ಷಮಿಸುವನು.
  ಮಾರ್ಕನು 11:25
 • ತೀರ್ಪು ಮಾಡಬೇಡಿರಿ; ಆಗ ನಿಮಗೂ ತೀರ್ಪಾಗುವದಿಲ್ಲ. ಖಂಡಿಸಬೇಡಿರಿ; ಆಗ ನಿಮಗೂ ಖಂಡನೆಯಾಗುವದಿಲ್ಲ. ಕ್ಷಮಿಸಿರಿ; ಆಗ ನಿಮಗೂ ಕ್ಷಮಿಸಲ್ಪಡುವದು.
  ಲೂಕನು 6:37
 • ದೇವರು ನಿಮಗೆ ಕ್ರಿಸ್ತನಲ್ಲಿ ಕ್ಷಮಿಸಿ ದಂತೆಯೇ ನೀವು ಒಬ್ಬರಿಗೊಬ್ಬರು ಉಪಕಾರಿಗಳಾ ಗಿಯೂ ಕರುಣೆಯುಳ್ಳವರಾಗಿಯೂ ಕ್ಷಮಿಸುವವ ರಾಗಿಯೂ ಇರ್ರಿ.
  ಎಫೆಸದವರಿಗೆ 4:32
 • ಯಾವನಿ ಗಾದರೂ ಒಬ್ಬನಿಗೆ ಇನ್ನೊಬ್ಬನ ಮೇಲೆ ವಿರೋಧವಾಗಿ ವ್ಯಾಜ್ಯವಿದ್ದರೂ ಒಬ್ಬರಿಗೊಬ್ಬರು ತಾಳಿಕೊಂಡು ಕ್ರಿಸ್ತನು ನಿಮ್ಮನ್ನು ಕ್ಷಮಿಸಿದಂತೆಯೇ ನೀವು ಒಬ್ಬರಿಗೊಬ್ಬರು ಕ್ಷಮಿಸಿರಿ.
  ಕೊಲೊಸ್ಸೆಯವರಿಗೆ 3:13
 • ನಿಮ್ಮಲ್ಲಿ ಯಾವನಾದರೂ ದೇವರ ಕೃಪೆಗೆ ತಪ್ಪಿ ಹೋಗ ದಂತೆಯೂ ಯಾವ ವಿಷವುಳ್ಳ ಬೇರೂ ನಿಮ್ಮಲ್ಲಿ ಚಿಗುರಿ ಕಳವಳ ಹುಟ್ಟಿಸಿ ಅದರಿಂದ ಅನೇಕರು ಅಶುದ್ಧರಾಗ ದಂತೆಯೂ
  ಇಬ್ರಿಯರಿಗೆ 12:15