ನೀಡುವ
- ರೋಗಿಗಳನ್ನು ಸ್ವಸ್ಥಮಾಡಿರಿ, ಕುಷ್ಠರೋಗಿಗಳನ್ನು ಶುದ್ಧಮಾಡಿರಿ, ಸತ್ತವರನ್ನು ಎಬ್ಬಿಸಿರಿ, ದೆವ್ವಗಳನ್ನು ಬಿಡಿಸಿರಿ; ನೀವು ಉಚಿತವಾಗಿ ಹೊಂದಿದ್ದೀರಿ, ಉಚಿತ ವಾಗಿ ಕೊಡಿರಿ.
 ಮತ್ತಾಯನು 10:8
- 
ನಿನಗೆ ಸಾಧ್ಯವಿರುವಾಗ ಹೊಂದತಕ್ಕವರಿಗೆ ಒಳ್ಳೆ ಯದು ಮಾಡುವದನ್ನು ತಪ್ಪಿಸಬೇಡ. 
 ಙ್ಞಾನೋಕ್ತಿಗಳು 3:27
- 
ಕೊಡಿರಿ, ಆಗ ನಿಮಗೂ ಕೊಡ ಲ್ಪಡುವದು. ಒಳ್ಳೆಯ ಅಳತೆ ಒತ್ತಿ ಅಲ್ಲಾಡಿಸಿ ಹೊರಗೆ ಚೆಲ್ಲುವಂತೆ ಮನುಷ್ಯರು ನಿಮ್ಮ ಉಡಿಲಲ್ಲಿ ಹಾಕುವರು; ಯಾಕಂದರೆ ನೀವು ಅಳೆಯುವ ಅಳತೆಯಿಂದಲೇ ನಿಮಗೂ ತಿರಿಗಿ ಅಳೆಯಲ್ಪಡುವದು. 
 ಲೂಕನು 6:38
- 
ಒಬ್ಬ ಸಹೋದರನಿಗೆ ಇಲ್ಲವೆ ಒಬ್ಬ ಸಹೋದರಿಗೆ ಬಟ್ಟೆಯೂ ಆ ದಿನದ ಆಹಾರವೂ ಇಲ್ಲದಿರುವಾಗ   ನಿಮ್ಮಲ್ಲಿ ಒಬ್ಬನು ಅವರಿಗೆ ದೇಹಕ್ಕೆ ಬೇಕಾದವುಗಳನ್ನು ಕೊಡದೆ--ಸಮಾಧಾನದಿಂದ ಹೋಗಿರಿ, ಬೆಂಕಿಕಾಯಿಸಿಕೊಳ್ಳಿರಿ, ಹೊಟ್ಟೆತುಂಬಿಸಿ ಕೊಳ್ಳಿರಿ ಎಂದು ಹೇಳಿದರೆ ಪ್ರಯೋಜನವೇನು?   ಹಾಗೆಯೇ ಕ್ರಿಯೆಗಳಿಲ್ಲದಿದ್ದರೆ ನಂಬಿಕೆಯು ಒಂಟಿಯಾಗಿದ್ದು ಸತ್ತದ್ದಾಗಿದೆ. 
 ಯಾಕೋಬನು 2:15-17
- 
ಚದುರಿಸಿದಾಗ್ಯೂ ವೃದ್ಧಿಯಾಗುತ್ತದೆ; ಬೇಕಾದದ್ದಕ್ಕಿಂತ ಹೆಚ್ಚಿನದನ್ನು ಬಿಗಿಹಿಡಿಯುವಂಥದ್ದು ಬಡತನಕ್ಕೆ ನಡಿಸುತ್ತದೆ.   ಉದಾರಿಯು ಪುಷ್ಠನಾಗು ವನು; ನೀರು ಹಾಯಿಸುವವನಿಗೆ ನೀರು ದೊರೆಯು ವದು. 
 ಙ್ಞಾನೋಕ್ತಿಗಳು 11:24, 25
- 
ನಿನ್ನನ್ನು ಕೇಳುವವನಿಗೆ ಕೊಡು; ಮತ್ತು ನಿನ್ನಿಂದ ಕಡಾ ತಕ್ಕೊಳ್ಳಬೇಕೆಂದಿರುವವನಿಂದ ನೀನು ತಿರುಗಿಕೊಳ್ಳಬೇಡ. 
 ಮತ್ತಾಯನು 5:42
- 
ಬಡವರು ದೇಶದಲ್ಲಿ ಇಲ್ಲದೆ ಹೋಗುವದಿಲ್ಲ: ಆದದರಿಂದನಿನ್ನ ಸಹೋದರನಿಗೂ ದರಿದ್ರನಿಗೂ ಬಡವನಿಗೂ ದೇಶದಲ್ಲಿ ನಿನ್ನ ಕೈಯನ್ನು ವಿಶಾಲವಾಗಿ ತೆರೆಯ ಬೇಕೆಂದು ನಾನು ನಿನಗೆ ಆಜ್ಞಾಪಿಸುತ್ತೇನೆ. 
 ಧರ್ಮೋಪದೇಶಕಾಂಡ 15:11
- 
ನಿನ್ನ ಆಸ್ತಿಯಿಂದಲೂ ಅಭಿವೃದ್ಧಿಯ ಎಲ್ಲಾ ಪ್ರಥಮ ಫಲಗಳಿಂದಲೂ ಕರ್ತನನ್ನು ಸನ್ಮಾನಿಸು.   ಹೀಗೆ ನಿನ್ನ ಕಣಜಗಳು ಸಮೃದ್ಧಿಯಿಂದ ತುಂಬಲ್ಪಡುವವು, ಹೊಸ ದ್ರಾಕ್ಷಾರಸದಿಂದ ನಿನ್ನ ತೊಟ್ಟಿಗಳು ತುಂಬಿ ತುಳುಕುವವು. 
 ಙ್ಞಾನೋಕ್ತಿಗಳು 3:9, 10
- 
ಬಡವರ ಕೂಗಿಗೆ ತನ್ನ ಕಿವಿಗಳನ್ನು ಮುಚ್ಚಿಕೊಳ್ಳುವವನು ತಾನು ಕೂಗಿದಾಗ ಯಾರೂ ಅವನಿಗೆ ಉತ್ತರಕೊಡುವದಿಲ್ಲ. 
 ಙ್ಞಾನೋಕ್ತಿಗಳು 21:13
- 
ನನ್ನ ಆಲಯದಲ್ಲಿ ಆಹಾರವಿರುವ ಹಾಗೆ ಹತ್ತನೇ ಪಾಲು ಗಳನ್ನೆಲ್ಲಾ ಬೊಕ್ಕಸದ ಮನೆಯಲ್ಲಿ ತನ್ನಿರಿ; ಇದರಿಂದ ನನ್ನನ್ನು ಪರೀಕ್ಷಿಸಿರಿ; ನಾನು ನಿಮಗೆ ಆಕಾಶದ ಕಿಟಕಿ ಗಳನ್ನು ತೆರೆದು ಸಾಕಾಗುವಷ್ಟಕ್ಕಿಂತ ಹೆಚ್ಚಾಗುವಷ್ಟು ಆಶೀರ್ವಾದ ನಿಮಗೆ ಸುರಿಸದಿರುವೆನೇ? ಎಂದು ಸೈನ್ಯಗಳ ಕರ್ತನು ಹೇಳುತ್ತಾನೆ. 
 ಮಲಾಕಿಯ 3:10
- 
ಆದರೆ ನೀನು ದಾನಮಾಡುವಾಗ ನಿನ್ನ ಬಲಗೈ ಮಾಡುವದು ನಿನ್ನ ಎಡಗೈಗೆ ತಿಳಿಯದಿರಲಿ.   ಹೀಗೆ ನಿನ್ನ ದಾನವು ಅಂತರಂಗದಲ್ಲಿರುವದು; ಮತ್ತು ಅಂತರಂಗದಲ್ಲಿ ನೋಡುವ ನಿನ್ನ ತಂದೆಯು ತಾನೇ ಬಹಿರಂಗವಾಗಿ ನಿನಗೆ ಪ್ರತಿಫಲ ಕೊಡುವನು.
 ಮತ್ತಾಯನು 6:3, 4
- 
ಅದಕ್ಕೆ ಅರಸನು ಪ್ರತ್ಯುತ್ತರವಾಗಿ ಅವರಿಗೆ--ನಾನು ನಿಮಗೆ ನಿಜವಾಗಿ ಹೇಳುತ್ತೇನೆ--ನೀವು ಈ ನನ್ನ ಸಹೋದರ ರಲ್ಲಿ ಅತ್ಯಲ್ಪನಾದವನೊಬ್ಬನಿಗೆ ಮಾಡಿದ್ದು ನನಗೂ ಮಾಡಿದಂತಾಯಿತು ಅಂದನು. 
 ಮತ್ತಾಯನು 25:40
- 
ಆದರೆ--ಸ್ವಲ್ಪವಾಗಿ ಬಿತ್ತುವವನು (ಪೈರನ್ನು) ಸ್ವಲ್ಪವಾಗಿ ಕೊಯ್ಯುವನು; ಹೆಚ್ಚಾಗಿ ಬಿತ್ತುವವನು ಹೆಚ್ಚಾಗಿಯೇ ಕೊಯ್ಯುವನು ಎಂದು ನಾನು ಹೇಳು ತ್ತೇನೆ.   ಪ್ರತಿಯೊಬ್ಬನು ತನ್ನ ಹೃದಯದಲ್ಲಿ ನಿರ್ಣಯಿಸಿ ಕೊಂಡ ಪ್ರಕಾರ ಕೊಡಲಿ; ದುಃಖದಿಂದಾಗಲಿ ಬಲಾತ್ಕಾರದಿಂದಾಗಲಿ ಯಾರೂ ಕೊಡಬಾರದು; ಯಾಕಂದರೆ ಸಂತೋಷವಾಗಿ ಕೊಡುವವನನ್ನು ದೇವರು ಪ್ರೀತಿ ಮಾಡುತ್ತಾನೆ.    ದೇವರು ಸಕಲ ವಿಧವಾದ ಕೃಪೆಯನ್ನು ನಿಮಗೆ ಧಾರಾಳವಾಗಿ ಅನುಗ್ರಹಿಸುವದಕ್ಕೆ ಶಕ್ತನಾದ್ದರಿಂದ ನೀವು ಯಾವಾ ಗಲೂ ಎಲ್ಲಾ ವಿಷಯಗಳಲ್ಲಿ ಪರಿಪೂರ್ಣತೆ ಯುಳ್ಳವರಾಗಿ ಸಕಲಸತ್ಕಾರ್ಯಗಳನ್ನು ಹೇರಳವಾಗಿ ಮಾಡುವವರಾಗಿರುವಿರಿ.  (ಬರೆದಿರುವ ಪ್ರಕಾರ--ಆತನು ಬಡವರಿಗೆ ಧಾರಾಳವಾಗಿ ಹಂಚಿಕೊಟ್ಟನು; ಆತನ ನೀತಿಯು ಸದಾಕಾಲವೂ ಇರುವದು ಎಂಬದೇ.   ಬಿತ್ತುವವನಿಗೆ ಬೀಜವನ್ನೂ ತಿನ್ನುವವನಿಗೆ ಆಹಾರ ವನ್ನೂ ಕೊಡುವಾತನು ನಿಮಗೂ ಬಿತ್ತುವದಕ್ಕೆ ಬೀಜವನ್ನು ಕೊಟ್ಟು ಹೆಚ್ಚಿಸಿ ನಿಮ್ಮ ನೀತಿಯಿಂದಾದ ಕಾರ್ಯಗಳ ಫಲಗಳನ್ನು ವೃದ್ಧಿಪಡಿಸುವನು.)   ಹೀಗೆ ನೀವು ಎಲ್ಲಾ ವಿಷಯಗಳಲ್ಲಿ ಐಶ್ವರ್ಯವಂತರಾಗಿದ್ದು ಉದಾರವಾಗಿ ಕೊಡಲು ಶಕ್ತರಾಗುವಿರಿ; ಅದು ನಮ್ಮ ಮೂಲಕ ದೇವರಿಗೆ ಕೃತಜ್ಞತಾಸ್ತುತಿಯನ್ನುಂಟು ಮಾಡುವದು.   ಹೇಗಂದರೆ ಈ ನಿಮ್ಮ ಸೇವೆಯ ಪರಿಚರ್ಯವು ಪರಿಶುದ್ಧರ ಕೊರತೆಗಳನ್ನು ನೀಗು ವದು ಮಾತ್ರವಲ್ಲದೆ ಅನೇಕರಿಂದ ದೇವರಿಗೆ ಕೃತಜ್ಞತಾಸ್ತುತಿಯನ್ನು ಹುಟ್ಟಿಸುವದು. 
 2 ಕೊರಿಂಥದವರಿಗೆ 9:6-12