ಮಾರ್ಗದರ್ಶಕ


  • ನಿನ್ನ ಹಿಂಡುಗಳ ಸ್ಥಿತಿಯನ್ನು ತಿಳಿದುಕೊಳ್ಳುವಂತೆ ಶ್ರದ್ಧೆವಹಿಸು; ನಿನ್ನ ಮಂದೆಗಳನ್ನು ಚೆನ್ನಾಗಿ ನೋಡಿಕೋ.
    ಙ್ಞಾನೋಕ್ತಿಗಳು 27:23
  • ದೇವರಾದ ಕರ್ತನು ಹೀಗೆ ಹೇಳುತ್ತಾನೆ; ಇಗೋ, ನಾನು ಹೌದು, ನಾನೇ ನನ್ನ ಕುರಿಗಳನ್ನು ವಿಚಾರಿಸಿ ಅವುಗಳನ್ನು ಹುಡುಕುತ್ತೇನೆ.
    ಯೆಹೆಜ್ಕೇಲನು 34:11
  • ಆತನು ತಿರಿಗಿ ಎರಡನೆಯ ಸಾರಿ ಅವನಿಗೆ--ಯೋನನ ಮಗನಾದ ಸೀಮೋನನೇ, ನೀನು ನನ್ನನ್ನು ಪ್ರೀತಿಸುತ್ತೀಯೋ ಎಂದು ಕೇಳಲು ಅವನು ಆತನಿಗೆ--ಹೌದು, ಕರ್ತನೇ, ನಾನು ನಿನ್ನನ್ನು ಪ್ರೀತಿಸುತ್ತೇನೆಂಬದನ್ನು ನೀನೇ ಬಲ್ಲೆ ಅಂದನು. ಅದಕ್ಕೆ ಆತನು ಅವನಿಗೆ--ನನ್ನ ಕುರಿಗಳನ್ನು ಮೇಯಿಸು ಎಂದು
    ಯೋಹಾನನು 21:16
  • ನಾನು ಸಸಿಯನ್ನು ನೆಟ್ಟೆನು, ಅಪೊಲ್ಲೋ ಸನು ನೀರು ಹೊಯಿದನು. ಆದರೆ ಬೆಳೆಸುತ್ತಾ ಬಂದಾತನು ದೇವರು. .. ಹೀಗಿರಲಾಗಿ ನೆಡುವವ ನಾಗಲಿ ನೀರು ಹೊಯ್ಯುವವನಾಗಲಿ ವಿಶೇಷವಾ ದವನಲ್ಲ, ಬೆಳೆಸುವ ದೇವರೇ ವಿಶೇಷವಾದವನು.
    1 ಕೊರಿಂಥದವರಿಗೆ 3:6, 7
  • ದೇವರು ನನಗೆ ಕೃಪೆಯನ್ನು ಕೊಟ್ಟ ಪ್ರಕಾರ ನಾನು ಪ್ರವೀಣಶಿಲ್ಪಿಯಂತೆ ಆಸ್ತಿವಾರ ಹಾಕಿದೆನು. ಮತ್ತೊಬ್ಬನು ಅದರ ಮೇಲೆ ಕಟ್ಟುತ್ತಾನೆ; ಪ್ರತಿಯೊಬ್ಬನು ತಾನು ಅದರ ಮೇಲೆ ಹೇಗೆ ಕಟ್ಟುತ್ತಾನೋ ಎಚ್ಚರಿಕೆಯಾಗಿರಬೇಕು.
    1 ಕೊರಿಂಥದವರಿಗೆ 3:10
  • ನಾವು ನಿಮಗೋಸ್ಕರ ಆತ್ಮಸಂಬಂಧ ವಾದವುಗಳನ್ನು ಬಿತ್ತಿದ ಮೇಲೆ ನಿಮ್ಮಿಂದ ಶಾರೀರಿಕ ವಾದವುಗಳನ್ನು ಕೊಯ್ಯುವದು ದೊಡ್ಡದೋ?
    1 ಕೊರಿಂಥದವರಿಗೆ 9:11
  • ಆದರೆ--ಸ್ವಲ್ಪವಾಗಿ ಬಿತ್ತುವವನು (ಪೈರನ್ನು) ಸ್ವಲ್ಪವಾಗಿ ಕೊಯ್ಯುವನು; ಹೆಚ್ಚಾಗಿ ಬಿತ್ತುವವನು ಹೆಚ್ಚಾಗಿಯೇ ಕೊಯ್ಯುವನು ಎಂದು ನಾನು ಹೇಳು ತ್ತೇನೆ.
    2 ಕೊರಿಂಥದವರಿಗೆ 9:6
  • ಅನೇಕ ಸಾಕ್ಷಿಗಳ ಮುಂದೆ ನೀನು ನನ್ನಿಂದ ಕೇಳಿದವುಗಳನ್ನೇ ಇತರರಿಗೆ ಸಹ ಬೋಧಿಸ ಶಕ್ತರಾದ ನಂಬಿಗಸ್ತ ಮನುಷ್ಯರಿಗೆ ಒಪ್ಪಿಸಿಕೊಡು.
    2 ತಿಮೊಥೆಯನಿಗೆ 2:2
  • ನಿಮ್ಮಲ್ಲಿರುವ ದೇವರ ಮಂದೆಯನ್ನು ಕಾಯಿರಿ; ಬಲಾತ್ಕಾರದಿಂದಲ್ಲ, ಆದರೆ ಇಷ್ಟಪೂರ್ವಕವಾಗಿಯೂ; ನೀಚವಾದ ದ್ರವ್ಯಾಶೆಯಿಂದಲ್ಲ, ಸಿದ್ಧಮನಸ್ಸಿನಿಂದಲೂ ಮೇಲ್ವಿ ಚಾರಣೆ ಮಾಡಿರಿ.
    1 ಪೇತ್ರನು 5:2