ಹೋರಾಟ


 • ಓ ಇಸ್ರಾಯೇಲೇ ಕೇಳು, ನೀವು ಈಹೊತ್ತು ನಿಮ್ಮ ಶತ್ರುಗಳಿಗೆ ವಿರೋಧವಾಗಿ ಯುದ್ಧಕ್ಕೆ ಸವಿಾಪ ಬಂದಿದ್ದೀರಿ; ನಿಮ್ಮ ಹೃದಯಗಳು ಬಳಲಬಾರದು; ನೀವು ಭಯಪಡಬೇಡಿರಿ, ನಡುಗಬೇಡಿರಿ, ಅವರಿಗೆ ಹೆದರಲೂಬೇಡಿರಿ ;
  ಧರ್ಮೋಪದೇಶಕಾಂಡ 20:3
 • ನನ್ನ ಕೈಗಳಿಗೆ ಕಾಳಗವನ್ನು, ನನ್ನ ಬೆರಳುಗಳಿಗೆ ಯುದ್ಧವನ್ನು, ಕಲಿಸಿದ ನನ್ನ ಬಲವಾಗಿರುವ ಕರ್ತನಿಗೆ ಸ್ತೋತ್ರವಾಗಲಿ.
  ಕೀರ್ತನೆಗಳು 144:1
 • ನಾನು ಸಹ ನಿನಗೆ ಹೇಳುವದೇ ನಂದರೆ--ನೀನು ಪೇತ್ರನು, ಈ ಬಂಡೆಯ ಮೇಲೆ ನಾನು ನನ್ನ ಸಭೆಯನ್ನು ಕಟ್ಟುವೆನು; ನರಕದ ದ್ವಾರಗಳು ಅದನ್ನು ಜಯಿಸಲಾರವು.
  ಮತ್ತಾಯನು 16:18
 • ಕ್ರಿಸ್ತನಲ್ಲಿ ನಮ್ಮನ್ನು ಯಾವಾಗಲೂ ಜಯೋತ್ಸವ ದೊಡನೆ ಮೆರಸುತ್ತಾ ಆತನ ವಿಷಯವಾದ ಜ್ಞಾನ ವೆಂಬ ಸುವಾಸನೆಯನ್ನು ನಮ್ಮ ಮೂಲಕ ಎಲ್ಲಾ ಸ್ಥಳಗಳಲ್ಲಿ ವ್ಯಾಪನಗೊಳಿಸುತ್ತಾ ಬರುವ ದೇವರಿಗೆ ಸ್ತೋತ್ರ;
  2 ಕೊರಿಂಥದವರಿಗೆ 2:14
 • ನಿಮಗೆ ತನ್ನ ಮಹಿಮೆಯ ಐಶ್ವರ್ಯಕ್ಕನುಸಾರವಾಗಿ ಆತನ ಆತ್ಮನ ಮೂಲಕ ಆಂತರ್ಯದಲ್ಲಿ ವಿಶೇಷ ಬಲವನ್ನು ಅನುಗ್ರಹಿಸುವ ಹಾಗೆಯೂ
  ಎಫೆಸದವರಿಗೆ 3:16
 • ನಂಬಿಕೆಯ ಶ್ರೇಷ್ಠ ಹೋರಾಟವನ್ನು ಮಾಡು, ನಿತ್ಯಜೀವವನ್ನು ಹಿಡಿದುಕೋ; ಅದಕ್ಕಾಗಿಯೇ ನೀನು ಕರೆಯಲ್ಪಟ್ಟಿದ್ದೀ. ನೀನು ಅನೇಕ ಸಾಕ್ಷಿಗಳ ಮುಂದೆ ಒಳ್ಳೇ ಅರಿಕೆಯನ್ನು ಮಾಡಿದ್ದೀಯಲ್ಲಾ.
  1 ತಿಮೊಥೆಯನಿಗೆ 6:12
 • ಆದದರಿಂದ ನೀನು ಯೇಸು ಕ್ರಿಸ್ತನ ಒಳ್ಳೇ ಸೈನಿಕನಂತೆ ಶ್ರಮೆಯನ್ನ ನುಭವಿಸು.
  2 ತಿಮೊಥೆಯನಿಗೆ 2:3
 • ಯುದ್ಧಕ್ಕೆ ಹೋಗುವವನು ಈ ಜೀವನದ ವ್ಯವಹಾರಗಳಲ್ಲಿ ಸಿಕ್ಕಿಕೊಳ್ಳದೆ ತನ್ನನ್ನು ಸೈನಿಕನನ್ನಾಗಿ ಆರಿಸಿಕೊಂಡವನನ್ನು ಮೆಚ್ಚಿಸುವದಕ್ಕೆ ಪ್ರಯಾಸಪಡು ತ್ತಾನೆ.
  2 ತಿಮೊಥೆಯನಿಗೆ 2:4
 • ತಂದೆಗಳೇ, ಆದಿ ಯಿಂದಿರುವಾತನನ್ನು ನೀವು ಬಲ್ಲವರಾಗಿರುವದರಿಂದ ನಿಮಗೆ ಬರೆದಿದ್ದೇನೆ. ಯೌವನಸ್ಥರೇ, ನೀವು ಶಕ್ತರಾಗಿ ರುವದರಿಂದಲೂ ದೇವರ ವಾಕ್ಯವು ನಿಮ್ಮಲ್ಲಿ ನೆಲೆ ಗೊಂಡಿರುವದರಿಂದಲೂ ನೀವು ಕೆಡುಕನನ್ನು ಜಯಿಸಿ ರುವದರಿಂದಲೂ ನಿಮಗೆ ಬರೆದಿದ್ದೇನೆ.
  1 ಯೋಹಾನನು 2:14
 • ಪ್ರಿಯರೇ, ಹುದುವಾಗಿರುವ ರಕ್ಷಣೆಯ ವಿಷಯ ದಲ್ಲಿ ನಿಮಗೆ ಬರೆಯುವದಕ್ಕೆ ಪೂರ್ಣ ಜಾಗ್ರತೆಯಿಂದ ಪ್ರಯತ್ನಮಾಡುತ್ತಿದ್ದಾಗ ಪರಿಶುದ್ಧರಿಗೆ ಒಂದೇ ಸಾರಿ ಒಪ್ಪಿಸಲ್ಪಟ್ಟ ನಂಬಿಕೆಯನ್ನು ಕಾಪಾಡಿಕೊಳ್ಳುವದಕ್ಕೆ ನೀವು ಹೋರಾಡಬೇಕೆಂದು ಎಚ್ಚರಿಸಿ ಬರೆಯುವದು ಅವಶ್ಯವೆಂದು ತೋಚಿತು.
  ಯೂದನು 3