ಶಕ್ತಿ


  • ನೀವು ನಿಮ್ಮ ದೇವರಾದ ಕರ್ತನಿಗೆ ಸೇವೆಮಾಡಬೇಕು. ಆಗ ಆತನು ನಿಮ್ಮ ರೊಟ್ಟಿಯನ್ನೂ ನೀರನ್ನೂ ಆಶೀರ್ವದಿಸುವನು, ನಾನು ವ್ಯಾಧಿಯನ್ನು ನಿಮ್ಮ ಮಧ್ಯದಿಂದ ತೊಲಗಿಸಿ ಬಿಡುವೆನು.
    ವಿಮೋಚನಕಾಂಡ 23:25
  • ನೀನು ತಿರುಗಿಕೊಂಡು ನನ್ನ ಜನರ ನಾಯಕನಾದ ಹಿಜ್ಕೀಯನಿಗೆ ಹೇಳಬೇಕಾದದ್ದೇ ನಂದರೆ--ನಾನು ನಿನ್ನ ಪ್ರಾರ್ಥನೆಯನ್ನು ಕೇಳಿದ್ದೇನೆ; ನಿನ್ನ ಕಣ್ಣೀರನ್ನು ನೋಡಿದ್ದೇನೆ; ಇಗೋ, ನಾನು ನಿನ್ನನ್ನು ಸ್ವಸ್ಥಮಾಡುತ್ತೇನೆ; ಮೂರನೇ ದಿವಸದಲ್ಲಿ ಕರ್ತನ ಮನೆಗೆ ಹೋಗುವಿ.
    2 ಅರಸುಗಳು 20:5
  • ಹೀಗೆಯೇ ಸೈನ್ಯಗಳ ಕರ್ತನು ಅವನ ಸಂಗಡ ಇದದ್ದರಿಂದ ದಾವೀದನು ಕ್ರಮೇಣವಾಗಿ ಅಭಿವೃದ್ಧಿಯಾದನು.
    1 ಪೂರ್ವಕಾಲವೃತ್ತಾ 11:9
  • ಓ ಕರ್ತನೇ, ನಿನ್ನ ಬಲದಲ್ಲಿ ಅರಸನು ಸಂತೋಷಪಡುವನು; ನಿನ್ನ ರಕ್ಷಣೆಯಲ್ಲಿ ಎಷ್ಟೋ ಅಧಿಕವಾಗಿ ಉಲ್ಲಾಸಪಡುವನು.
    ಕೀರ್ತನೆಗಳು 21:1
  • ಜೀವವನ್ನು ಅವನು ನಿನ್ನಿಂದ ಬೇಡಲು ನೀನು ಅವನಿಗೆ ಯುಗಯುಗಾಂತರಗಳಿಗೂ ದೀರ್ಘಾಯುಷ್ಯವನ್ನು ಕೊಟ್ಟೆ.
    ಕೀರ್ತನೆಗಳು 21:4
  • ನೀನು ಎಂದೆಂದಿಗೂ ಅವನನ್ನು ಅಧಿಕವಾಗಿ ಆಶೀರ್ವಾದ ಮಾಡಿದ್ದೀ. ನಿನ್ನ ಮುಖದ ಮುಂದೆ ಅವನನ್ನು ಅಧಿಕ ವಾಗಿ ಸಂತೋಷಪಡುವಂತೆ ಮಾಡಿದ್ದೀ.
    ಕೀರ್ತನೆಗಳು 21:6
  • ಆತನ ಎಲುಬು ಗಳನ್ನೆಲ್ಲಾ ಕಾಪಾಡುತ್ತಾನೆ; ಅವುಗಳಲ್ಲಿ ಒಂದಾದರೂ ಮುರಿಯಲ್ಪಡುವದಿಲ್ಲ.
    ಕೀರ್ತನೆಗಳು 34:20
  • ಓ ದೇವರೇ, ನನ್ನ ಯೌವನದಿಂದ ನನಗೆ ನೀನು ಕಲಿಸಿದ್ದೀ; ಈ ವರೆಗೂ ನಿನ್ನ ಅದ್ಭುತ ಕಾರ್ಯಗಳನ್ನು ತಿಳಿಸುವೆನು. ಓ ದೇವರೇ, ನಾನು ಮುಪ್ಪಿನವನೂ ನರೆ ಕೂದಲಿನವನೂ ಆದಾಗ ಈ ಸಂತತಿಯವರಿಗೆ ನಿನ್ನ ಶಕ್ತಿಯನ್ನೂ ಮುಂದೆ ಬರುವ ಪ್ರತಿಯೊಬ್ಬನಿಗೆ ನಿನ್ನ ಅಧಿಕಾರವನ್ನೂ ತಿಳಿಸುವ ವರೆಗೂ ನನ್ನನ್ನು ಕೈಬಿಡಬೇಡ.
    ಕೀರ್ತನೆಗಳು 71:17, 18
  • ಅವನು ಕೆಟ್ಟಸುದ್ದಿಗೆ ಭಯಪಡನು; ಅವನ ಹೃದಯವು ಕರ್ತನಲ್ಲಿ ಭರವಸವಿಟ್ಟು ಸ್ಥಿರವಾಗಿದೆ.
    ಕೀರ್ತನೆಗಳು 112:7
  • ನಮ್ಮ ಗಂಡು ಮಕ್ಕಳು ಸಸಿಗಳ ಹಾಗೆ ತಮ್ಮ ಯೌವನದಲ್ಲಿ ಬೆಳೆದವರಾಗಿರಲಿ; ನಮ್ಮ ಹೆಣ್ಣು ಮಕ್ಕಳು ಅರಮನೆಯ ಕಟ್ಟುವಿಕೆಯ ಪ್ರಕಾರ ಕೆತ್ತಲ್ಪಟ್ಟ ಮೂಲೆಯ ಕಲ್ಲುಗಳ ಹಾಗಿರಲಿ.
    ಕೀರ್ತನೆಗಳು 144:12
  • ನಿನ್ನ ಮಾರ್ಗದಲ್ಲಿ ನೀನು ನಿರ್ಭಯವಾಗಿ ನಡೆಯುವಿ, ನಿನ್ನ ಪಾದವು ಎಡವುವದಿಲ್ಲ.
    ಙ್ಞಾನೋಕ್ತಿಗಳು 3:23
  • ಪ್ರಿಯನೇ, ನಿನ್ನ ಆತ್ಮವು ಅಭಿವೃದಿ ಹೊಂದಿರುವ ಪ್ರಕಾರವೇ ಎಲ್ಲಾ ವಿಷಯಗಳಿಗಿಂತ ನೀನು ಸ್ವಸ್ಥನಾಗಿದ್ದು ಕ್ಷೇಮಹೊಂದಿ ಅಭಿವೃದ್ಧಿಯಾಗ ಬೇಕೆಂದು ನಾನು ಅಪೇಕ್ಷಿಸುತ್ತೇನೆ.
    3 ಯೋಹಾನನು 1:2
  • ಯಾಕಂದರೆ ನಿಮ್ಮ ಶತ್ರುಗಳ ವಿರೋಧವಾಗಿ ನಿಮಗೋಸ್ಕರ ಯುದ್ಧಮಾಡಿ ನಿಮ್ಮನ್ನು ರಕ್ಷಿಸುವದಕ್ಕೆ ನಿಮ್ಮ ದೇವರಾದ ಕರ್ತನೇ ನಿಮ್ಮ ಸಂಗಡ ಹೋಗುತ್ತಾನೆ ಎಂದು ಹೇಳಬೇಕು.
    ಧರ್ಮೋಪದೇಶಕಾಂಡ 20:4
  • ದಾವೀದನು ತನ್ನ ಮಗನಾದ ಸೊಲೊಮೋನ ನಿಗೆ ಹೇಳಿದ್ದೇನಂದರೆ--ನೀನು ಬಲಗೊಂಡು ದೃಢ ಪಟ್ಟು ಮಾಡು; ಭಯಪಡಬೇಡ, ಹೆದರಬೇಡ; ಯಾಕಂದರೆ ನನ್ನ ದೇವರಾಗಿರುವ ಕರ್ತನಾದ ದೇವರು ನಿನ್ನ ಸಂಗಡ ಇರುವನು. ಕರ್ತನ ಮನೆಯ ಸೇವೆಯ ಕಾರ್ಯವನ್ನೆಲ್ಲಾ ನೀನು ತೀರಿಸುವ ವರೆಗೂ ಆತನು ನಿನ್ನನ್ನು ವಿಸರ್ಜಿಸುವದಿಲ್ಲ, ಕೈ ಬಿಡುವದಿಲ್ಲ.
    1 ಪೂರ್ವಕಾಲವೃತ್ತಾ 28:20
  • ಅವನ ಸಂಗಡ ಮಾಂಸದ ತೋಳು; ಆದರೆ ನಮ್ಮ ಸಂಗಡ ನಮಗೆ ಸಹಾಯ ಕೊಡುವದಕ್ಕೂ ನಮ್ಮ ಯುದ್ಧಗಳನ್ನು ನಡಿಸುವದಕ್ಕೂ ನಮ್ಮ ದೇವರಾದ ಕರ್ತನು ತಾನೇ ಇದ್ದಾನೆ ಎಂದು ಹೇಳಿದನು. ಆದ ದರಿಂದ ಜನರು ಯೆಹೂದದ ಅರಸನಾದ ಹಿಜ್ಕೀಯನ ಮಾತುಗಳಲ್ಲಿ ಆತುಕೊಂಡರು.
    2 ಪೂರ್ವಕಾಲವೃತ್ತಾ 32:8
  • ಶತ್ರುವನ್ನೂ ಮುಯ್ಯಿಗೆ ಮುಯ್ಯಿ ಕೊಡುವವನನ್ನೂ ನಿಲ್ಲಿಸಿಬಿಡುವದಕ್ಕೆ ನಿನ್ನ ವೈರಿಗಳ ನಿಮಿತ್ತ ಶಿಶುಗಳ ಮತ್ತು ಮೊಲೆ ಕೂಸುಗಳ ಬಾಯಿಂದ ನೀನು ನಿನ್ನ ಬಲವನ್ನು ಸ್ಥಾಪಿಸಿದ್ದೀ.
    ಕೀರ್ತನೆಗಳು 8:2
  • ನಿನ್ನಿಂದ ನಾನು ದಂಡಿನ ಮೇಲೆ ಬಿದ್ದೆನು; ನನ್ನ ದೇವರಿಂದ ಗೋಡೆ ನೆಗೆದೆನು. 30 ದೇವರ ಮಾರ್ಗವಾದರೋ ಸಂಪೂರ್ಣವಾದದ್ದು; ಕರ್ತನ ವಾಕ್ಯವು ಪುಟಕ್ಕೆ ಹಾಕಿದ್ದಾಗಿದೆ; ಆತನು ತನ್ನಲ್ಲಿ ಭರವಸವಿಟ್ಟವರೆಲ್ಲರಿಗೆ ಗುರಾಣಿಯಾಗಿದ್ದಾನೆ. -- 32 ಪರಾ ಕ್ರಮದಿಂದ ನನ್ನ ನಡುವನ್ನು ಕಟ್ಟಿ ನನ್ನ ಮಾರ್ಗವನ್ನು ಸಂಪೂರ್ಣ ಮಾಡುವ ದೇವರು ಆತನೇ.
    ಕೀರ್ತನೆಗಳು 18:29, 30, 32
  • ಕೆಲವರು ರಥಗಳಲ್ಲಿಯೂ ಕೆಲವರು ಕುದುರೆಗಳ ಲ್ಲಿಯೂ ಭರವಸವಿಡುತ್ತಾರೆ; ಆದರೆ ನಾವು ನಮ್ಮ ದೇವರಾದ ಕರ್ತನ ಹೆಸರನ್ನು ಜ್ಞಾಪಕಮಾಡುತ್ತೇವೆ.
    ಕೀರ್ತನೆಗಳು 20:7
  • ಕೆಲವರು ರಥಗಳಲ್ಲಿಯೂ ಕೆಲವರು ಕುದುರೆಗಳ ಲ್ಲಿಯೂ ಭರವಸವಿಡುತ್ತಾರೆ; ಆದರೆ ನಾವು ನಮ್ಮ ದೇವರಾದ ಕರ್ತನ ಹೆಸರನ್ನು ಜ್ಞಾಪಕಮಾಡುತ್ತೇವೆ.
    ಕೀರ್ತನೆಗಳು 27:13, 14
  • ಕರ್ತನು ನನ್ನ ಬಲವೂ ಗುರಾಣಿಯೂ ಆಗಿದ್ದಾನೆ; ನನ್ನ ಹೃದಯವು ಆತನಲ್ಲಿ ಭರವಸವಿಟ್ಟದ್ದರಿಂದ ಸಹಾಯ ಹೊಂದಿದೆನು; ಆದದರಿಂದ ನನ್ನ ಹೃದಯವು ಬಹಳವಾಗಿ ಉತ್ಸಾಹ ಪಡುವದು; ನನ್ನ ಹಾಡಿನಿಂದ ಆತನನ್ನು ಕೊಂಡಾ ಡುವೆನು. 8 ಕರ್ತನು ಅವರಿಗೆ ಬಲವಾಗಿದ್ದಾನೆ; ತನ್ನ ಅಭಿಷಕ್ತನ ರಕ್ಷಣೆಯ ಬಲವು ಆತನೇ.
    ಕೀರ್ತನೆಗಳು 28:7, 8
  • ನೀತಿವಂತರ ರಕ್ಷಣೆಯು ಕರ್ತ ನಿಂದಲೇ; ಇಕ್ಕಟ್ಟಿನ ಕಾಲದಲ್ಲಿ ಅವರ ಬಲವು ಆತನೇ.
    ಕೀರ್ತನೆಗಳು 37:39
  • ನನ್ನ ಮಾಂಸವೂ ಹೃದಯವೂ ಕುಂದುತ್ತದೆ; ಆದರೆ ದೇವರು ಯುಗಯುಗಕ್ಕೂ ನನ್ನ ಹೃದಯದ ಬಲವೂ ಪಾಲೂ ಆಗಿದ್ದಾನೆ.
    ಕೀರ್ತನೆಗಳು 73:26
  • ಯಾರಿಗೆ ನೀನು ಬಲವಾಗಿ ದ್ದೀಯೋ ಆ ಮನುಷ್ಯನು ಭಾಗ್ಯವಂತನು; ಯಾರಲ್ಲಿ ಆತನ ಮಾರ್ಗಗಳು ಇವೆಯೋ ಅವನೇ ಧನ್ಯನು. 6 ಬಾಕಾ ತಗ್ಗನ್ನು ದಾಟುವಾಗ ಅದನ್ನು ಬುಗ್ಗೆಯಾಗಿ ಮಾಡುತ್ತಾರೆ; ಮಳೆಯು ಕೊಳಗಳನ್ನು ತುಂಬುತ್ತದೆ. 7 ಅವರು ಬಲದಿಂದ ಬಲಕ್ಕೆ ಹೋಗಿ, ಚೀಯೋನಿನಲ್ಲಿ ದೇವರ ಮುಂದೆ ಕಾಣಿಸಿಕೊಳ್ಳುತ್ತಾರೆ.
    ಕೀರ್ತನೆಗಳು 84:5, 7
  • ನನ್ನ ಬಲವೂ ಕೀರ್ತನೆಯೂ ಕರ್ತನೇ; ಆತನೇ ನನಗೆ ರಕ್ಷಣೆಯಾದನು.
    ಕೀರ್ತನೆಗಳು 118:14
  • ನನ್ನ ಪ್ರಾಣವು ಭಾರದಿಂದ ಕರಗಿಹೋಗುತ್ತದೆ; ನಿನ್ನ ವಾಕ್ಯದ ಪ್ರಕಾರ ನನ್ನನ್ನು ಸ್ಥಿರಮಾಡು;
    ಕೀರ್ತನೆಗಳು 119:28
  • ನೀನು ದೀನರಿಗೆ ಕೋಟೆಯೂ ಇಕ್ಕಟ್ಟಿನಲ್ಲಿ ದರಿದ್ರರಿಗೆ ರಕ್ಷಣಾ ದುರ್ಗವೂ ಭೀಕರರ ಶ್ವಾಸವು ಬಿಸಿಲಿಗೋಸ್ಕರ ನೆರಳೂ ಗೋಡೆಗೆ ಬಡಿದು ಬಿಡುವ ಬಿರುಗಾಳಿಯಂತಿರುವಾಗ ಬಿರುಗಾಳಿಗೋ ಸ್ಕರ ಆಶ್ರಯವೂ ಆಗಿದ್ದೀ.
    ಯೆಶಾಯ 25:4
  • ಆತನು ದಣಿದವನಿಗೆ ಶಕ್ತಿಯನ್ನೂ ಬಲಹೀನನಿಗೆ ಬಹುಬಲವನ್ನೂ ಕೊಡುತ್ತಾನೆ.
    ಯೆಶಾಯ 40:29
  • ನೀನಂತೂ ಹೆದರಬೇಡ; ನಾನೇ ನಿನ್ನೊಂದಿಗಿದ್ದೇನೆ; ದಿಗ್ಭ್ರಮೆಗೊಳ್ಳದಿರು. ನಾನೇ ನಿನ್ನ ದೇವರು; ನಾನು ನಿನ್ನನ್ನು ಬಲಪಡಿ ಸುತ್ತೇನೆ; ಹೌದು, ನಾನು ನಿನಗೆ ಸಹಾಯ ಮಾಡು ತ್ತೇನೆ. ಹೌದು, ನನ್ನ ನೀತಿಯ ಬಲಗೈಯಿಂದ ನಿನ್ನನ್ನು ಎತ್ತಿ ಹಿಡಿಯುತ್ತೇನೆ.
    ಯೆಶಾಯ 41:10
  • ಅದಕ್ಕೆ ಯೇಸು ಅವರನ್ನು ದೃಷ್ಟಿಸಿ ನೋಡಿ ಅವರಿಗೆ--ಇದು ಮನುಷ್ಯರಿಗೆ ಅಸಾಧ್ಯ; ಆದರೆ ದೇವರಿಗೆ ಎಲ್ಲವು ಸಾಧ್ಯವೇ ಎಂದು ಹೇಳಿದನು.
    ಮತ್ತಾಯನು 19:26
  • ಹಾಗಾದರೆ ಈ ವಿಷಯಗಳಲ್ಲಿ ನಾವು ಏನು ಹೇಳೋಣ? ದೇವರು ನಮ್ಮ ಕಡೆ ಇದ್ದರೆ ನಮ್ಮನ್ನು ಎದುರಿಸುವವರು ಯಾರು?
    ರೋಮಾಪುರದವರಿಗೆ 8:31
  • ನಮ್ಮಿಂದಲೇ ಏನಾದರೂ ಉಂಟಾಯಿ ತೆಂದು ಆಲೋಚಿಸಿಕೊಳ್ಳುವದಕ್ಕೆ ನಮ್ಮಷ್ಟಕ್ಕೆ ನಾವೇ ಸಮರ್ಥರೆಂತಲ್ಲ; ನಮಗಿರುವ ಸಾಮರ್ಥ್ಯವು ದೇವರಿಂದಲೇ ಬಂದದ್ದು;
    2 ಕೊರಿಂಥದವರಿಗೆ 3:5
  • (ನಾವು ಉಪಯೋಗಿಸುವ ಯುದ್ಧಾಯುಧಗಳು ಶರೀರ ಸಂಬಂಧವಾದ ಆಯುಧ ಗಳಲ್ಲ; ಅವು ದೇವರ ಮೂಲಕ ಬಲವಾಗಿದ್ದು ಬಲ ವಾದ ಕೋಟೆಗಳನ್ನು ಕೆಡವಿಹಾಕುವಂಥವುಗಳಾಗಿವೆ).
    2 ಕೊರಿಂಥದವರಿಗೆ 10:4
  • ಅದಕ್ಕಾತನು--ನನ್ನ ಕೃಪೆಯೇ ನಿನಗೆ ಸಾಕು; ಬಲಹೀನತೆಯಲ್ಲಿಯೇ ನನ್ನ ಬಲವು ಪರಿಪೂರ್ಣವಾಗುತ್ತದೆ ಎಂದು ನನಗೆ ಹೇಳಿದನು. ಹೀಗಿರಲಾಗಿ ಕ್ರಿಸ್ತನ ಬಲವು ನನ್ನಲ್ಲಿ ನೆಲೆಸಿ ಕೊಂಡಿರಬೇಕೆಂದು ನನಗುಂಟಾಗುವ ನಿರ್ಬಲಾ ವಸ್ಥೆಗಳ ವಿಷಯದಲ್ಲಿಯೇ ಬಹು ಸಂತೋಷವಾಗಿ ಹೆಚ್ಚಳಪಡುವೆನು. 10 ಆದದರಿಂದ ನಾನು ಕ್ರಿಸ್ತನ ನಿಮಿತ್ತ ನಿರ್ಬಲಾವಸ್ಥೆಗಳಲ್ಲಿ ಅವಮಾನಗಳಲ್ಲಿ ಕೊರತೆ ಗಳಲ್ಲಿ ಹಿಂಸೆಗಳಲ್ಲಿ ಇಕ್ಕಟ್ಟುಗಳಲ್ಲಿ ಸಂತೋಷವಾಗಿ ದ್ದೇನೆ; ಯಾಕಂದರೆ ನಾನು ಯಾವಾಗ ನಿರ್ಬಲ ನಾಗಿದ್ದೇನೋ ಅವಾಗಲೇ ಬಲವುಳ್ಳವನಾಗಿದ್ದೇನೆ.
    2 ಕೊರಿಂಥದವರಿಗೆ 12:9, 10
  • ನಿಮಗೆ ತನ್ನ ಮಹಿಮೆಯ ಐಶ್ವರ್ಯಕ್ಕನುಸಾರವಾಗಿ ಆತನ ಆತ್ಮನ ಮೂಲಕ ಆಂತರ್ಯದಲ್ಲಿ ವಿಶೇಷ ಬಲವನ್ನು ಅನುಗ್ರಹಿಸುವ ಹಾಗೆಯೂ
    ಎಫೆಸದವರಿಗೆ 3:16
  • ಕಡೇದಾಗಿ ನನ್ನ ಸಹೋದರರೇ, ಕರ್ತನಲ್ಲಿಯೂ ಆತನ ಅತ್ಯಧಿಕವಾದ ಶಕ್ತಿಯಲ್ಲಿಯೂ ಬಲಗೊಳ್ಳಿರಿ.
    ಎಫೆಸದವರಿಗೆ 6:10
  • ನನ್ನನ್ನು ಬಲಪಡಿಸುವ ಕ್ರಿಸ್ತನ ಮೂಲಕ ನಾನು ಎಲ್ಲವುಗಳನ್ನು ಮಾಡಬಲ್ಲೆನು.
    ಫಿಲಿಪ್ಪಿಯವರಿಗೆ 4:13
  • ಚಿಕ್ಕಮಕ್ಕಳೇ, ನೀವು ದೇವರಿಗೆ ಸಂಬಂಧಪಟ್ಟವರಾ ಗಿದ್ದೀರಿ. ಅವರನ್ನು ಜಯಿಸಿದ್ದೀರಿ. ನಿಮ್ಮಲ್ಲಿರುವಾತನು ಲೋಕದಲ್ಲಿ ಇರುವವನಿಗಿಂತ ದೊಡ್ಡವನಾಗಿದ್ದಾನೆ.
    1 ಯೋಹಾನನು 4:4
  • ನಿನಗೆ ಆಜ್ಞಾ ಪಿಸಿದ್ದೇನಲ್ಲಾ; ಬಲವಾಗಿರು, ಒಳ್ಳೆ ಧೈರ್ಯದಿಂದಿರು; ಭಯಪಡಬೇಡ, ನಿರಾಶೆಗೊಳ್ಳಬೇಡ. ನೀನು ಹೋಗು ವಲ್ಲೆಲ್ಲಾ ನಿನ್ನ ದೇವರಾದ ಕರ್ತನು ನಿನ್ನ ಸಂಗಡ ಇದ್ದಾನೆ ಎಂದು ಹೇಳಿದನು.
    ಯೆಹೋಶುವ 1:9
  • ಆದ ದರಿಂದ ಸೈನ್ಯಗಳ ದೇವರಾದ ಕರ್ತನು ಹೀಗೆ ಹೇಳು ತ್ತಾನೆ--ನೀವು ಈ ಮಾತನ್ನಾಡುವದರಿಂದ ಇಗೋ, ನಾನು ನಿನ್ನ ಬಾಯಲ್ಲಿರುವ ನನ್ನ ಮಾತುಗಳನ್ನು ಬೆಂಕಿಯಾಗಿಯೂ ಈ ಜನರನ್ನು ಕಟ್ಟಿಗೆಯಾಗಿಯೂ ಮಾಡುವೆನು; ಅದು ಅವರನ್ನು ತಿಂದುಬಿಡುವದು.
    ಯೆರೆಮಿಯ 5:14
  • ಕರ್ತನಲ್ಲಿ ನಾನು ಅವರನ್ನು ಬಲಪಡಿಸುವೆನು; ಆತನ ಹೆಸರಿನಲ್ಲಿ ಅವರು ಮೇಲೆ ಕೆಳಗೆ ನಡೆಯುವರು ಎಂದು ಕರ್ತನು ಅನ್ನುತ್ತಾನೆ.
    ಜೆಕರ್ಯ 10:12
  • ಯಾಕಂದರೆ ಮಾತನಾಡು ವವರು ನೀವಲ್ಲ, ಆದರೆ ನಿಮ್ಮ ತಂದೆಯ ಆತ್ಮನು ನಿಮ್ಮೊಳಗೆ ಮಾತನಾಡುತ್ತಾನೆ.
    ಮತ್ತಾಯನು 10:20
  • ಆದರೆ ಪವಿತ್ರಾತ್ಮನು ನಿಮ್ಮ ಮೇಲೆ ಬಂದಾಗ ನೀವು ಬಲವನ್ನು ಹೊಂದುವಿರಿ; ಯೆರೂಸಲೇಮಿನಲ್ಲಿಯೂ ಎಲ್ಲಾ ಯೂದಾಯದ ಲ್ಲಿಯೂ ಸಮಾರ್ಯದಲ್ಲಿಯೂ ಭೂಮಿಯ ಕಟ್ಟ ಕಡೆಯವರೆಗೂ ನೀವು ನನಗೆ ಸಾಕ್ಷಿಗಳಾಗಿರುವಿರಿ ಎಂದು ಹೇಳಿದನು.
    ಅಪೊಸ್ತಲರ ಕೃತ್ಯಗ 1:8
  • ಅವರು ಪೇತ್ರ ಯೋಹಾನರ ಧೈರ್ಯವನ್ನು ನೋಡಿ ಇವರು ವಿದ್ಯೆಯಿಲ್ಲದವರೂ ತಿಳುವಳಿಕೆ ಯಿಲ್ಲದವರೂ ಎಂದು ಗ್ರಹಿಸಿ ಆಶ್ಚರ್ಯಪಟ್ಟು ಅವರು ಯೇಸುವಿನೊಂದಿಗೆ ಇದ್ದವರೆಂದು ತಿಳಿದುಕೊಂಡರು.
    ಅಪೊಸ್ತಲರ ಕೃತ್ಯಗ 4:13
  • ನಾಶವಾಗುವವರಿಗೆ ಶಿಲುಬೆಯ ವಿಷಯವಾದ ಸಾರೋಣವು ಹುಚ್ಚುತನವಾಗಿದೆ; ರಕ್ಷಣೆ ಹೊಂದಿದ ನಮಗಾದರೋ ಅದು ದೇವರ ಶಕ್ತಿಯಾಗಿದೆ.
    1 ಕೊರಿಂಥದವರಿಗೆ 1:18
  • ನನ್ನ ಬೋಧನೆಯಲ್ಲಿಯೂ ಪ್ರಸಂಗದಲ್ಲಿಯೂ ಮನವೊಲಿಸುವ ಮನುಷ್ಯಜ್ಞಾನ ವಾಕ್ಯಗಳನ್ನು ನಾನು ಪ್ರಯೋಗಿಸದೆ ಆತ್ಮನ ಬಲವನ್ನು ತೋರ್ಪಡಿಸುವ ವಾಕ್ಯಗಳನ್ನೇ ಪ್ರಯೋಗಿಸಿದೆನು. 5 ಹೀಗೆ ನಿಮ್ಮ ನಂಬಿಕೆಯು ಮನುಷ್ಯಜ್ಞಾನವನ್ನು ಆಧಾರ ಮಾಡಿಕೊಂಡಿರದೆ ದೇವರ ಶಕ್ತಿಯನ್ನೇ ಆಧಾರ ಮಾಡಿಕೊಂಡಿರಬೇಕು.
    1 ಕೊರಿಂಥದವರಿಗೆ 2:4, 5