ದೇವರ ಮೇಲೆ ಅವಲಂಬಿತವಾಗಿರುತ್ತವೆ


 • ಅದಕ್ಕೆ ಮೋಶೆಯು ಜನರಿಗೆ--ನೀವು ಭಯಪಡ ಬೇಡಿರಿ; ಕದಲದೆ ನಿಲ್ಲಿರಿ; ಕರ್ತನು ನಿಮಗೆ ಈ ಹೊತ್ತು ತೋರಿಸುವ ರಕ್ಷಣೆಯನ್ನು ನೋಡಿರಿ. ನೀವು ಈ ಹೊತ್ತು ನೋಡುವ ಐಗುಪ್ತ್ಯರನ್ನು ಇನ್ನು ಮುಂದೆ ಎಂದೆಂದಿಗೂ ನೋಡುವದಿಲ್ಲ. ಕರ್ತನು ನಿಮ ಗೋಸ್ಕರ ಯುದ್ಧಮಾಡುವನು; ಆದರೆ ನೀವು ಸಮಾಧಾನವಾಗಿರ್ರಿ ಅಂದನು.
  ವಿಮೋಚನಕಾಂಡ 14:13, 14
 • ನೀನು ನಿನ್ನ ಶತ್ರುಗಳಿಗೆ ವಿರೋಧವಾಗಿ ಯುದ್ಧಕ್ಕೆ ಹೊರಟು ಕುದುರೆಗಳನ್ನೂ ರಥ ಗಳನ್ನೂ ನಿನಗಿಂತ ಹೆಚ್ಚಾದ ಜನರನ್ನೂ ನೋಡಿದರೆ ಅವರಿಗೆ ಭಯಪಡಬೇಡ; ಐಗುಪ್ತದೇಶದೊಳಗಿಂದ ನಿನ್ನನ್ನು ಹೊರಗೆ ಬರಮಾಡಿದ ನಿನ್ನ ದೇವರಾದ ಕರ್ತನು ನಿನ್ನ ಸಂಗಡ ಇದ್ದಾನೆ.
  ಧರ್ಮೋಪದೇಶಕಾಂಡ 20:1
 • ಇದಲ್ಲದೆ ಕರ್ತನು ತಾನೇ ನಿನ್ನ ಮುಂದೆ ಹೋಗುತ್ತಾನೆ; ಆತನೇ ನಿನ್ನ ಸಂಗಡ ಇರುವನು; ನಿನ್ನನ್ನು ತೊರೆಯುವದಿಲ್ಲ, ವಿಸರ್ಜಿಸುವದಿಲ್ಲ; ನೀನು ಭಯಪಡಬೇಡ; ಅಂಜಿಕೊಳ್ಳಬೇಡ ಎಂದು ಹೇಳಿದನು.
  ಧರ್ಮೋಪದೇಶಕಾಂಡ 31:8
 • ನಿಮ್ಮಲ್ಲಿ ಇರುವ ಒಬ್ಬನು ಸಾವಿರ ಮಂದಿಯನ್ನು ಹಿಂದಟ್ಟುವನು. ನಿಮ್ಮ ದೇವರಾದ ಕರ್ತನು ನಿಮಗೆ ವಾಗ್ದಾನಮಾಡಿದ ಹಾಗೆ ಆತನೇ ನಿಮಗೋಸ್ಕರ ಯುದ್ಧಮಾಡುತ್ತಾನೆ.
  ಯೆಹೋಶುವ 23:10
 • ಆತನು ತನ್ನ ಪರಿಶುದ್ಧರ ಕಾಲುಗಳನ್ನು ಕಾಯು ವನು; ಆದರೆ ದುಷ್ಟರು ಕತ್ತಲಲ್ಲಿ ಮೌನವಾಗಿರುವರು; ಶಕ್ತಿಯಿಂದ ಒಬ್ಬನೂ ಜಯಿಸನು.
  1 ಸಮುವೇಲನು 2:9
 • ಆಗ ಯೋನಾತಾನನು ತನ್ನ ಆಯುಧಗಳನ್ನು ಹಿಡಿಯುವ ಯೌವನಸ್ಥನಿಗೆ--ನಾವು ಈ ಸುನ್ನತಿ ಇಲ್ಲದವರ ಠಾಣಕ್ಕೆ ದಾಟಿಹೋಗೋಣ ಬಾ; ಒಂದು ವೇಳೆ ದೇವರು ನಮಗೋಸ್ಕರ ಕಾರ್ಯ ನಡಿಸುವನು. ಯಾಕಂದರೆ ಅನೇಕ ಜನರಿಂದಾದರೂ ಸ್ವಲ್ಪ ಜನರಿಂದಾದರೂ ರಕ್ಷಿಸುವದಕ್ಕೆ ಕರ್ತನಿಗೆ ಯಾವ ಆಟಂಕವಿಲ್ಲ ಅಂದನು.
  1 ಸಮುವೇಲನು 14:6
 • ಈ ದಿನ ಇಸ್ರಾಯೇಲ್ಯರೊಳಗೆ ದೇವರು ಇದ್ದಾನೆಂದು ಭೂಲೋಕದವರೆಲ್ಲರೂ ತಿಳಿ ಯುವರು. ಕರ್ತನು ಕತ್ತಿಯಿಂದಲೂ ಈಟಿಯಿಂದಲೂ ರಕ್ಷಿಸುವದಿಲ್ಲ ಎಂದು ಈ ಸಭೆಯೆಲ್ಲಾ ತಿಳಿದುಕೊಳ್ಳು ವದು; ಯಾಕಂದರೆ ಯುದ್ಧವು ಕರ್ತನದು; ಆತನು ನಿಮ್ಮನ್ನು ನಮ್ಮ ಕೈಯಲ್ಲಿ ಒಪ್ಪಿಸಿಕೊಡುವನು ಅಂದನು.
  1 ಸಮುವೇಲನು 17:47
 • ಬಲಗೊಳ್ಳಿರಿ; ಧೈರ್ಯ ವಾಗಿರ್ರಿ; ಅಶ್ಶೂರಿನ ಅರಸನ ನಿಮಿತ್ತವೂ ಅವನ ಸಂಗಡ ಕೂಡಿರುವ ಮಹಾಗುಂಪಿನ ನಿಮಿತ್ತವೂ ಭಯ ಪಡಬೇಡಿರಿ; ಹೆದರಬೇಡಿರಿ. ಯಾಕಂದರೆ ಅವನ ಸಂಗಡ ಇರುವವರಿಗಿಂತ ನಮ್ಮ ಸಂಗಡ ಅನೇಕರು ಇದ್ದಾರೆ. ಅವನ ಸಂಗಡ ಮಾಂಸದ ತೋಳು; ಆದರೆ ನಮ್ಮ ಸಂಗಡ ನಮಗೆ ಸಹಾಯ ಕೊಡುವದಕ್ಕೂ ನಮ್ಮ ಯುದ್ಧಗಳನ್ನು ನಡಿಸುವದಕ್ಕೂ ನಮ್ಮ ದೇವರಾದ ಕರ್ತನು ತಾನೇ ಇದ್ದಾನೆ ಎಂದು ಹೇಳಿದನು. ಆದ ದರಿಂದ ಜನರು ಯೆಹೂದದ ಅರಸನಾದ ಹಿಜ್ಕೀಯನ ಮಾತುಗಳಲ್ಲಿ ಆತುಕೊಂಡರು.
  2 ಪೂರ್ವಕಾಲವೃತ್ತಾ 32:7, 8
 • ನನ್ನ ಹೆಜ್ಜೆಗಳು ಜಾರದ ಹಾಗೆ ನನ್ನ ನಡೆಗಳನ್ನು ನಿನ್ನ ದಾರಿಯಲ್ಲಿ ಸ್ಥಿರಪಡಿಸು.
  ಕೀರ್ತನೆಗಳು 17:5
 • ಓ ಕರ್ತನೇ, ನನಗೆ ನ್ಯಾಯತೀರಿಸು; ಯಾಕಂದರೆ ನಾನು ನನ್ನ ಯಥಾರ್ಥತ್ವ ದಲ್ಲಿ ನಡೆದುಕೊಂಡಿದ್ದೇನೆ. ನಾನು ಕರ್ತನಲ್ಲಿ ಭರ ವಸವಿಟ್ಟಿದ್ದೇನೆ; ನಾನು ಕದಲುವದಿಲ್ಲ.
  ಕೀರ್ತನೆಗಳು 26:1
 • ಇಕ್ಕಟ್ಟಿನಲ್ಲಿ ನಮಗೆ ಸಹಾಯ ಮಾಡು; ಮನುಷ್ಯನ ಸಹಾಯವು ವ್ಯರ್ಥವಾಗಿದೆ.
  ಕೀರ್ತನೆಗಳು 60:11
 • ನನ್ನ ಪ್ರಾಣವೇ, ದೇವರಿಗಾಗಿ ಮಾತ್ರ ಕಾದಿರು; ನನ್ನ ನಿರೀಕ್ಷೆಯು ಆತನಿಂದಲೇ.
  ಕೀರ್ತನೆಗಳು 62:5
 • ಯಾರಿಗೆ ನೀನು ಬಲವಾಗಿ ದ್ದೀಯೋ ಆ ಮನುಷ್ಯನು ಭಾಗ್ಯವಂತನು; ಯಾರಲ್ಲಿ ಆತನ ಮಾರ್ಗಗಳು ಇವೆಯೋ ಅವನೇ ಧನ್ಯನು. ಅವರು ಬಲದಿಂದ ಬಲಕ್ಕೆ ಹೋಗಿ, ಚೀಯೋನಿನಲ್ಲಿ ದೇವರ ಮುಂದೆ ಕಾಣಿಸಿಕೊಳ್ಳುತ್ತಾರೆ.
  ಕೀರ್ತನೆಗಳು 84:5, 7
 • ಅವನು ಕೆಟ್ಟಸುದ್ದಿಗೆ ಭಯಪಡನು; ಅವನ ಹೃದಯವು ಕರ್ತನಲ್ಲಿ ಭರವಸವಿಟ್ಟು ಸ್ಥಿರವಾಗಿದೆ. ಅವನ ಹೃದಯವು ದೃಢವಾಗಿದೆ; ತನ್ನ ವೈರಿಗಳ ಮೇಲೆ ತನ್ನ ಇಷ್ಟವನ್ನು ನೋಡುವ ಮಟ್ಟಿಗೂ ಭಯಪಡನು.
  ಕೀರ್ತನೆಗಳು 112:7, 8
 • ಮನುಷ್ಯರಲ್ಲಿ ಭರ ವಸವಿಡುವದಕ್ಕಿಂತ ಕರ್ತನಲ್ಲಿ ನಂಬಿಕೆಯಿಡುವದು ಒಳ್ಳೇದು.
  ಕೀರ್ತನೆಗಳು 118:8
 • ಹೊತ್ತಾರೆಯಲ್ಲಿ ನಿನ್ನ ಪ್ರೀತಿಕರುಣೆಯನ್ನು ನಾನು ಕೇಳುವಂತೆ ಮಾಡು; ನಿನ್ನಲ್ಲಿ ಭರವಸವಿಟ್ಟಿದ್ದೇನೆ; ನಾನು ಹೋಗಬೇಕಾದ ಮಾರ್ಗವನ್ನು ನನಗೆ ತಿಳಿಯಪಡಿಸು; ನಿನ್ನ ಕಡೆಗೆ ನನ್ನ ಪ್ರಾಣವನ್ನು ಎತ್ತುತ್ತೇನೆ.
  ಕೀರ್ತನೆಗಳು 143:8
 • ಪೂರ್ಣಹೃದಯದಿಂದ ಕರ್ತನಲ್ಲಿ ಭರವಸವಿಡು; ನಿನ್ನ ಸ್ವಂತ ಬುದ್ಧಿಯ ಮೇಲೆ ಆಧಾರ ಮಾಡಿಕೊಳ್ಳಬೇಡ. ನಿನ್ನ ಎಲ್ಲಾ ಮಾರ್ಗಗಳಲ್ಲಿ ಆತನನ್ನು ಸನ್ಮಾನಿಸು. ಆಗ ಆತನು ನಿನ್ನ ಮಾರ್ಗಗಳನ್ನು ಸರಾಗಮಾಡುವನು.
  ಙ್ಞಾನೋಕ್ತಿಗಳು 3:5, 6
 • ಇಸ್ರಾಯೇಲಿನ ಪರಿಶುದ್ಧ ಕರ್ತನಾದ ದೇವರು ಹೇಳುವದೇನೆಂದರೆ--ನೀವು ತಿರುಗಿಕೊಂಡು ಸುಮ್ಮನಿದ್ದರೆ ನಿಮಗೆ ರಕ್ಷಣೆಯಾಗು ವದು. ಶಾಂತರಾಗಿ ಭರವಸದಿಂದಿರುವದೇ ನಿಮಗೆ ಬಲ ಎಂದು ಹೇಳಿದ್ದರೂ ನೀವು ಒಪ್ಪಿಕೊಂಡಿಲ್ಲ.
  ಯೆಶಾಯ 30:15
 • ನಾನು--ನನ್ನ ಒಡೆಯನೇ, ಇಲ್ಲ ಅಂದೆನು. ಆಗ ಅವನು ಉತ್ತರಕೊಟ್ಟು ನನಗೆ ಹೇಳಿದ್ದೇನಂದರೆ--ಜೆರುಬ್ಬಾಬೆಲನಿಗೆ ಕರ್ತನ ವಾಕ್ಯವು ಇದೇ--ಬಲ ದಿಂದಲ್ಲ, ಶಕ್ತಿಯಿಂದಲ್ಲ, ನನ್ನ ಆತ್ಮದಿಂದಲೇ ಎಂದು ಸೈನ್ಯಗಳ ಕರ್ತನು ಹೇಳುತ್ತಾನೆ.
  ಜೆಕರ್ಯ 4:6
 • ನಾನೇ ದ್ರಾಕ್ಷೇಬಳ್ಳಿ, ನೀವು ಕೊಂಬೆಗಳು; ಒಬ್ಬನು ನನ್ನಲ್ಲಿ ಮತ್ತು ನಾನು ಅವನಲ್ಲಿ ನೆಲೆಗೊಂಡಿದ್ದರೆ ಅವನೇ ಬಹಳ ಫಲವನ್ನು ಕೊಡುವನು; ಯಾಕಂದರೆ ನಾನಿಲ್ಲದೆ ನೀವು ಏನೂ ಮಾಡಲಾರಿರಿ.
  ಯೋಹಾನನು 15:5
 • ಯಾಕಂದರೆ ದೇವರಿಂದ ಹುಟ್ಟಿರು ವಂಥದೆಲ್ಲವು ಲೋಕವನ್ನು ಜಯಿಸುತ್ತದೆ. ಲೋಕವನ್ನು ಜಯಿಸಿದಂಥ ಆ ಜಯವು ನಮ್ಮ ನಂಬಿಕೆಯೇ.
  1 ಯೋಹಾನನು 5:4