ದೆವ್ವವನ್ನು ಪ್ರತಿರೋಧಿಸುವ


 • ಆಗ ಪಶ್ಚಿ ಮದ ಕಡೆಯವರು ಕರ್ತನ ಹೆಸರಿಗೂ ಸೂರ್ಯೋ ದಯದ ಕಡೆಯವರು ಆತನ ಘನಕ್ಕೂ ಭಯಪಡು ವರು. ವೈರಿಯು ಪ್ರಳಯದಂತೆ ಬರುವಾಗ ಕರ್ತನ ಆತ್ಮನು ಅವನಿಗೆ ವಿರೋಧವಾಗಿ ಧ್ವಜವನ್ನೆತ್ತುವನು.
  ಯೆಶಾಯ 59:19
 • ಆತನು ತನ್ನ ಹನ್ನೆರಡು ಮಂದಿ ಶಿಷ್ಯರನ್ನು ತನ್ನ ಬಳಿಗೆ ಕರೆದು ಅಶುದ್ಧಾತ್ಮಗಳನ್ನು ಬಿಡಿಸುವಂತೆಯೂ ಎಲ್ಲಾ ತರವಾದ ರೋಗವನ್ನು ಮತ್ತು ಎಲ್ಲಾ ತರವಾದ ಅಸ್ವಸ್ಥತೆಯನ್ನು ಸ್ವಸ್ಥ ಮಾಡು ವಂತೆಯೂ ಅವರಿಗೆ ಅಧಿಕಾರ ಕೊಟ್ಟನು.
  ಮತ್ತಾಯನು 10:1
 • ನಾನು ನಿನಗೆ ಪರಲೋಕ ರಾಜ್ಯದ ಬೀಗದ ಕೈಗಳನ್ನು ಕೊಡುತ್ತೇನೆ; ನೀನು ಯಾವದನ್ನು ಭೂಮಿಯ ಮೇಲೆ ಕಟ್ಟುತ್ತೀಯೋ ಅದು ಪರಲೋಕದಲ್ಲಿಯೂ ಕಟ್ಟಲ್ಪಡುವದು; ನೀನು ಯಾವ ದನ್ನು ಭೂಮಿಯ ಮೇಲೆ ಬಿಚ್ಚುತ್ತೀಯೋ ಅದು ಪರಲೋಕದಲ್ಲಿಯೂ ಬಿಚ್ಚಲ್ಪಡುವದು ಅಂದನು.
  ಮತ್ತಾಯನು 16:19
 • ಆದರೆ ಆತನು ತಿರುಗಿಕೊಂಡು ತನ್ನ ಶಿಷ್ಯರ ಕಡೆಗೆ ನೋಡಿ ಪೇತ್ರನನ್ನು ಗದರಿಸಿ--ಸೈತಾನನೇ ನನ್ನ ಹಿಂದೆ ಹೋಗು; ಯಾಕಂದರೆ ನೀನು ಯೋಚಿಸುವಂಥದ್ದು ದೇವರವುಗಳಲ್ಲ, ಆದರೆ ಮನುಷ್ಯರವುಗಳೇ ಎಂದು ಹೇಳಿದನು.
  ಮಾರ್ಕನು 8:33
 • ತರುವಾಯ ಆತನು ತನ್ನ ಹನ್ನೆರಡು ಮಂದಿ ಶಿಷ್ಯರನ್ನು ಒಟ್ಟಿಗೆ ಕರೆದು ಅವರಿಗೆ ಎಲ್ಲಾ ದೆವ್ವಗಳನ್ನು ಬಿಡಿಸುವದಕ್ಕೂ ರೋಗಗಳನ್ನು ಸ್ವಸ್ಥ ಮಾಡುವದಕ್ಕೂ ಶಕ್ತಿಯನ್ನು ಮತ್ತು ಅಧಿಕಾರವನ್ನು ಕೊಟ್ಟನು.
  ಲೂಕನು 9:1
 • ತರುವಾಯ ಆ ಎಪ್ಪತ್ತು ಮಂದಿ ಸಂತೋಷದಿಂದ ಹಿಂತಿರುಗಿ--ಕರ್ತನೇ, ನಿನ್ನ ಹೆಸರಿನಲ್ಲಿ ದೆವ್ವಗಳು ಸಹ ನಮಗೆ ಅಧೀನವಾದವು ಅಂದರು.
  ಲೂಕನು 10:17
 • ಇಗೋ, ಸರ್ಪಗಳನ್ನೂ ಚೇಳುಗಳನ್ನೂ ತುಳಿಯುವದಕ್ಕೆ ಮತ್ತು ವಿರೋಧಿಯ ಎಲ್ಲಾ ಶಕ್ತಿಯ ಮೇಲೆ ನಾನು ನಿಮಗೆ ಅಧಿಕಾರ ಕೊಡುತ್ತೇನೆ; ಯಾವದೂ ಯಾವ ರೀತಿಯಲ್ಲಿಯೂ ನಿಮಗೆ ಕೇಡು ಮಾಡ ಲಾರದು.
  ಲೂಕನು 10:19
 • (ನಾವು ಉಪಯೋಗಿಸುವ ಯುದ್ಧಾಯುಧಗಳು ಶರೀರ ಸಂಬಂಧವಾದ ಆಯುಧ ಗಳಲ್ಲ; ಅವು ದೇವರ ಮೂಲಕ ಬಲವಾಗಿದ್ದು ಬಲ ವಾದ ಕೋಟೆಗಳನ್ನು ಕೆಡವಿಹಾಕುವಂಥವುಗಳಾಗಿವೆ). ನಾವು ಊಹೆಗಳನ್ನು ದೇವಜ್ಞಾನವನ್ನೂ ವಿರೋಧಿ ಸುವದಕ್ಕೆ ಏರಿಸಲ್ಪಟ್ಟಿರುವ ಉನ್ನತವಾದವುಗಳೆಲ್ಲವನ್ನೂ ಕೆಡವಿಹಾಕಿ ಎಲ್ಲಾ ಯೋಚನೆಗಳನ್ನು ಕ್ರಿಸ್ತನಿಗೆ ವಿಧೇಯವಾಗುವಂತೆ ಸೆರೆಹಿಡಿದು
  2 ಕೊರಿಂಥದವರಿಗೆ 10:4, 5
 • ಸೈತಾನನಿಗೆ ಅವಕಾಶ ಕೊಡಲೇಬೇಡಿರಿ.
  ಎಫೆಸದವರಿಗೆ 4:27
 • ಕಡೇದಾಗಿ ನನ್ನ ಸಹೋದರರೇ, ಕರ್ತನಲ್ಲಿಯೂ ಆತನ ಅತ್ಯಧಿಕವಾದ ಶಕ್ತಿಯಲ್ಲಿಯೂ ಬಲಗೊಳ್ಳಿರಿ. ನೀವು ಸೈತಾನನ ತಂತ್ರೋಪಾಯಗಳನ್ನು ಎದುರಿಸಿ ನಿಲ್ಲುವದಕ್ಕೆ ಶಕ್ತರಾಗುವಂತೆ ದೇವರ ಸರ್ವಾಯುಧ ಗಳನ್ನು ಧರಿಸಿಕೊಳ್ಳಿರಿ.
  ಎಫೆಸದವರಿಗೆ 6:10, 11
 • ಚಿಕ್ಕಮಕ್ಕಳೇ, ನೀವು ದೇವರಿಗೆ ಸಂಬಂಧಪಟ್ಟವರಾ ಗಿದ್ದೀರಿ. ಅವರನ್ನು ಜಯಿಸಿದ್ದೀರಿ. ನಿಮ್ಮಲ್ಲಿರುವಾತನು ಲೋಕದಲ್ಲಿ ಇರುವವನಿಗಿಂತ ದೊಡ್ಡವನಾಗಿದ್ದಾನೆ.
  1 ಯೋಹಾನನು 4:4
 • ಸ್ವಸ್ಥಚಿತ್ತರಾಗಿರ್ರಿ. ಎಚ್ಚರವಾಗಿರ್ರಿ; ನಿಮ್ಮ ವಿರೋಧಿ ಯಾಗಿರುವ ಸೈತಾನನು ಗರ್ಜಿಸುವ ಸಿಂಹದಂತೆ ಯಾರನ್ನು ನುಂಗಲಿ ಎಂದು ಹುಡುಕುತ್ತಾ ತಿರುಗುತ್ತಾನೆ. ನೀವು ನಂಬಿಕೆಯಲ್ಲಿ ದೃಢವಾಗಿದ್ದು ಅವನನ್ನು ಎದುರಿಸಿರಿ; ಲೋಕದಲ್ಲಿರುವ ನಿಮ್ಮ ಸಹೋದರರಿಗೂ ಅಂಥ ಬಾಧೆಗಳೇ ಸಂಭವಿಸುತ್ತವೆಯೆಂದು ನಿಮಗೆ ತಿಳಿದದೆಯಲ್ಲಾ.
  1 ಪೇತ್ರನು 5:8, 9
 • ಪಾಪಮಾಡುವವನು ಸೈತಾನ ನಿಗೆ ಸಂಬಂಧಪಟ್ಟವನಾಗಿದ್ದಾನೆ; ಯಾಕಂದರೆ ಆದಿ ಯಿಂದಲೂ ಸೈತಾನನು ಪಾಪಮಾಡುವವನಾಗಿದ್ದಾನೆ. ಆದದರಿಂದ ದೇವಕುಮಾರನು ಸೈತಾನನ ಕೆಲಸಗಳನ್ನು ಲಯಮಾಡುವದಕ್ಕೋಸ್ಕರವೇ ಪ್ರತ್ಯಕ್ಷನಾದನು.
  1 ಯೋಹಾನನು 3:8