ಭೂಮಿ ಹಕ್ಕು


 • ಎದ್ದು ಭೂಮಿಯ ಉದ್ದಗಲದ ಪ್ರಕಾರ ಅದರಲ್ಲಿ ತಿರುಗಾಡು. ನಾನು ನಿನಗೆ ಅದನ್ನು ಕೊಡುವೆನು ಅಂದನು.
  ಆದಿಕಾಂಡ Genesis 13:17
 • ಇದಲ್ಲದೆ ಭೂಮಿಯನ್ನು ಎಂದಿಗೂ ಮಾರಬಾರದು, ಯಾಕಂದರೆ ಭೂಮಿಯು ನನ್ನದು; ನನ್ನೊಂದಿಗೆ ನೀವು ಪರಕೀಯರೂ ಪ್ರವಾಸಿಗಳೂ ಆಗಿದ್ದೀರಿ.
  ಯಾಜಕಕಾಂಡ 25:23
 • ನೀವು ಹೆಜ್ಜೆಯಿಡುವ ಸ್ಥಳ ವೆಲ್ಲಾ ನಿಮ್ಮದಾಗುವದು; ಅರಣ್ಯದಿಂದ ಲೆಬನೋನಿನ ವರೆಗೂ ಯೂಫ್ರೇಟೀಸ್‌ ನದಿಯಿಂದ ಪಶ್ಚಿಮ ಸಮುದ್ರದ ಅಂತ್ಯದ ವರೆಗೂ ನಿಮ್ಮ ಮೇರೆಯಾಗಿ ರುವದು.
  ಧರ್ಮೋಪದೇಶಕಾಂಡ 11:24
 • ನನ್ನನ್ನು ವಿಶಾಲ ಸ್ಥಳಕ್ಕೆ ಹೊರಗೆ ತಂದನು; ಆತನು ನನ್ನಲ್ಲಿ ಸಂತೋಷಪಟ್ಟದ್ದರಿಂದ ನನ್ನನ್ನು ತಪ್ಪಿಸಿಬಿಟ್ಟನು.
  2 ಸಮುವೇಲನು 2 Samuel 22:20
 • ನನ್ನನ್ನು ಕೇಳು; ಆಗ ಅನ್ಯಜನರನ್ನು ನಿನ್ನ ಬಾಧ್ಯತೆಯಾಗಿಯೂ ಭೂಮಿಯ ಕಟ್ಟಕಡೆಯ ವರೆಗೆ ನಿನ್ನ ಸ್ವಾಸ್ಥ್ಯವಾಗಿಯೂ ಕೊಡುವೆನು.
  ಕೀರ್ತನೆಗಳು 2:8
 • ಆಗ ಅವರು ಇಕ್ಕಟ್ಟಿನಲ್ಲಿ ಕರ್ತನಿಗೆ ಕೂಗಿದರು; ಆತನು ಅವರ ಸಂಕಟಗಳೊಳಗಿಂದ ಅವರನ್ನು ಬಿಡಿಸಿ, ವಾಸಿಸುವ ಪಟ್ಟಣಕ್ಕೆ ಹೋಗುವ ಹಾಗೆ ಅವರನ್ನು ಸರಿಯಾದ ಹಾದಿಯಲ್ಲಿ ನಡಿಸಿದನು.
  ಕೀರ್ತನೆಗಳು 107:6, 7
 • ನೀವು ಬಲಕ್ಕಾಗಲಿ ಎಡಕ್ಕಾಗಲಿ ತಿರುಗಿ ಕೊಳ್ಳುವಾಗ ಇದೇ ಮಾರ್ಗ, ಇದರಲ್ಲೇ ನಡೆಯಿರಿ ಎಂದು ನಿಮ್ಮ ಹಿಂದೆ ಆಡುವ ಮಾತು ನಿಮ್ಮ ಕಿವಿಗೆ ಬೀಳುವದು.
  ಯೆಶಾಯ 30:21
 • ಬೇಡಿಕೊಳ್ಳಿರಿ, ಅದು ನಿಮಗೆ ಕೊಡಲ್ಪಡುವದು; ಹುಡುಕಿರಿ, ನಿಮಗೆ ಸಿಕ್ಕುವದು; ತಟ್ಟಿರಿ, ಅದು ನಿಮಗೆ ತೆರೆಯಲ್ಪಡುವದು.
  ಮತ್ತಾಯನು 7:7
 • ನಂಬಿಕೆಯಿಂದಲೇ ಅಬ್ರಹಾಮನು ಕರೆಯ ಲ್ಪಟ್ಟಾಗ ವಿಧೇಯನಾಗಿ ತಾನು ಬಾಧ್ಯವಾಗಿ ಹೊಂದ ಬೇಕಾಗಿದ್ದ ಸ್ಥಳಕ್ಕೆ ಹೊರಟುಹೋದನು; ತಾನು ಹೋಗಬೇಕಾದ ಸ್ಥಳವು ಯಾವದೆಂದು ತಿಳಿಯದೆ ಹೊರಟನು.
  ಇಬ್ರಿಯರಿಗೆ 11:8
 • ಇಗೋ, ನಾನು ನಿನ್ನ ಸಂಗಡ ಇದ್ದು ನೀನು ಹೋಗುವಲ್ಲೆಲ್ಲಾ ನಿನ್ನನ್ನು ಕಾಪಾಡಿ ಈ ದೇಶಕ್ಕೆ ನಿನ್ನನ್ನು ತಿರಿಗಿ ಬರಮಾಡುವೆನು. ಯಾಕಂದರೆ ನಾನು ನಿನಗೆ ಹೇಳಿದ್ದನ್ನು ಮಾಡುವ ವರೆಗೆ ನಿನ್ನನ್ನು ಬಿಡುವದಿಲ್ಲ ಅಂದನು.
  ಆದಿಕಾಂಡ Genesis 28:15
 • ಇಗೋ, ಮಾರ್ಗದಲ್ಲಿ ನಿಮ್ಮನ್ನು ಕಾಪಾಡುವದ ಕ್ಕೋಸ್ಕರವೂ ನಾನು ಸಿದ್ಧಮಾಡಿದ ಸ್ಥಳಕ್ಕೆ ನಿಮ್ಮನ್ನು ತರುವದಕ್ಕೋಸ್ಕರವೂ ಒಬ್ಬ ದೂತನನ್ನು ನಿಮ್ಮ ಮುಂದೆ ಕಳುಹಿಸುತ್ತೇನೆ.
  ವಿಮೋಚನಕಾಂಡ 23:20
 • ಆದರೆ ಈಗ ನೀನು ಹೋರಟು ನಾನು ನಿನಗೆ ಹೇಳಿದ ಸ್ಥಳಕ್ಕೆ ಜನರನ್ನು ಕರೆದುಕೊಂಡು ಹೋಗು; ಇಗೋ, ನನ್ನ ದೂತನು ನಿನ್ನ ಮುಂದೆ ಹೋಗುವನು. ಆದಾಗ್ಯೂ ನಾನು ಶಿಕ್ಷಿಸುವ ದಿನದಲ್ಲಿ ಅವರ ಪಾಪಕ್ಕೆ ತಕ್ಕಂತೆ ಶಿಕ್ಷಿಸುವೆನು.
  ವಿಮೋಚನಕಾಂಡ 32:34
 • ಆಗ ಆತನು--ನನ್ನ ಸನ್ನಿಧಾನವು ನಿನ್ನ ಸಂಗಡ ಹೋಗುವದು; ನಾನು ನಿನಗೆ ವಿಶ್ರಾಂತಿಯನ್ನು ಕೊಡುವೆನು ಅಂದನು.
  ವಿಮೋಚನಕಾಂಡ 33:14
 • ಬರುವಾಗ ನಿನಗೆ ಆಶೀರ್ವಾದ; ಹೊರಡುವಾಗ ನಿನಗೆ ಆಶೀರ್ವಾದ.
  ಧರ್ಮೋಪದೇಶಕಾಂಡ 28:6
 • ಅವರು ಜನಾಂಗದಿಂದ ಜನಾಂಗಕ್ಕೂ ಒಂದು ರಾಜ್ಯದಿಂದ ಬೇರೊಂದು ರಾಜ್ಯಕ್ಕೂ ಹೋದರು. ಮನುಷ್ಯರು ಅವರಿಗೆ ಕೇಡು ಮಾಡದಂತೆ ಆತನು ತಡೆದನು; ಹೌದು, ಅವರಿಗೋ ಸ್ಕರ ಆತನು ಅರಸುಗಳನ್ನು ಗದರಿಸಿದನು. ನನ್ನ ಅಭಿಷಿಕ್ತರನ್ನು ಮುಟ್ಟಬೇಡಿರಿ, ನನ್ನ ಪ್ರವಾದಿಗಳಿಗೆ ಕೇಡು ಮಾಡಬೇಡಿರಿ ಎಂದು ಹೇಳಿದನು.
  ಕೀರ್ತನೆಗಳು 105:13-15
 • ಆಗ ಅವರು ಇಕ್ಕಟ್ಟಿನಲ್ಲಿ ಕರ್ತನಿಗೆ ಕೂಗಿದರು; ಆತನು ಅವರ ಸಂಕಟಗಳೊಳಗಿಂದ ಅವರನ್ನು ಹೊರಗೆ ಬರಮಾಡಿ ಬಿರುಗಾಳಿಯನ್ನು ಶಾಂತಮಾಡುತ್ತಾನೆ; ಹೀಗೆ ಅದರ ತೆರೆಗಳು ನಿಂತು ಹೋಗುವವು. ಅವು ಶಾಂತವಾದಾಗ ಅವರು ಸಂತೋಷಪಡುತ್ತಾರೆ; ಹೀಗೆ ಅವರು ಅಪೇಕ್ಷಿಸಿದ ರೇವಿಗೆ ಅವರನ್ನು ನಡೆಸುತ್ತಾನೆ.
  ಕೀರ್ತನೆಗಳು 107:28-30
 • ಕರ್ತನು ನಿನ್ನ ಹೋಗೋಣವನ್ನೂ ಬರೋಣವನ್ನೂ ಇಂದಿನಿಂದ ಸದಾಕಾಲವೂ ಕಾಪಾಡುವನು.
  ಕೀರ್ತನೆಗಳು 121:8
 • ಉದಯದ ರೆಕ್ಕೆಗಳನ್ನು ಕಟ್ಟಿಕೊಂಡು ಸಮುದ್ರದ ಕಟ್ಟಕಡೆಯಲ್ಲಿ ವಾಸಮಾಡಿದರೆ ಅಲ್ಲಿಯೂ ನಿನ್ನ ಕೈ ನನ್ನನ್ನು ನಡಿಸಿ ನಿನ್ನ ಬಲಗೈ ನನ್ನನ್ನು ಹಿಡಿಯುವದು.
  ಕೀರ್ತನೆಗಳು 139:9, 10
 • ನಾನು ನಿನ್ನ ಮುಂದೆ ಹೋಗಿ ಡೊಂಕಾದ ಸ್ಥಳಗಳನ್ನು ಸಮಮಾಡಿ, ಹಿತ್ತಾ ಳೆಯ ಕದಗಳನ್ನು ಒಡೆದು ಕಬ್ಬಿಣದ ಅಗುಳಿಗಳನ್ನು ಮುರಿದು ಬಿಡುವೆನು. ನಿನ್ನನ್ನು ಹೆಸರು ಹಿಡಿದು ಕರೆಯುವ ಕರ್ತನು ನಾನೇ, ಇಸ್ರಾಯೇಲಿನ ದೇವರು ಎಂದು ನೀನು ತಿಳಿದುಕೊಳ್ಳುವ ಹಾಗೆ ಕತ್ತಲಲ್ಲಿ ಬಚ್ಚಿಟ್ಟಿರುವ ಬಂಡಾರವನ್ನೂ ಗುಪ್ತ ಸ್ಥಳಗಳಲ್ಲಿ ಮರೆ ಮಾಡಿದ ನಿಧಿ ನಿಕ್ಷೇಪಗಳನ್ನೂ ನಿನಗೆ ಕೊಡುವೆನು.
  ಯೆಶಾಯ 45:2, 3
 • ಆದದರಿಂದ ನೀವು ಹೇಳತಕ್ಕದ್ದೇನಂದರೆ, ದೇವರಾದ ಕರ್ತನು ಹೀಗೆ ಹೇಳುತ್ತಾನೆ--ನಾನು ಅವರನ್ನು ಅನ್ಯ ಜನಾಂಗ ಗಳಿಂದ ದೂರ ಹಾಕಿದ್ದಾಗ್ಯೂ ದೇಶಗಳನ್ನು ಚದರಿಸಿ ದ್ದಾಗ್ಯೂ ಅವರು ಹೋಗುವ ದೇಶಗಳಲ್ಲಿ ನಾನು ಸ್ವಲ್ಪ ಕಾಲದ ವರೆಗೆ ಪವಿತ್ರಾಲಯವಾಗಿರುವೆನು.
  ಯೆಹೆಜ್ಕೇಲನು 11:16