ಸರಳತೆ


  • ನಾನು ಭೂಮಿಯಿಂದ ಮೇಲಕ್ಕೆ ಎತ್ತಲ್ಪಟ್ಟರೆ ಎಲ್ಲ ರನ್ನೂ ನನ್ನ ಬಳಿಗೆ ಎಳಕೊಳ್ಳುವೆನು ಅಂದನು. ಯೋಹಾನನು 12:32
  • ಬಾಪ್ತಿಸ್ಮ ಮಾಡಿಸುವದಕ್ಕಲ್ಲ, ಸುವಾರ್ತೆಯನ್ನು ಸಾರುವದಕ್ಕೆ ಕ್ರಿಸ್ತನು ನನ್ನನ್ನು ಕಳುಹಿಸಿದನು. ವಾಕ್ಚಾತುರ್ಯದಿಂದ ಸಾರಬೇಕೆಂದು ಕಳುಹಿಸಲಿಲ್ಲ; ಹಾಗೆ ಸಾರಿದರೆ ಕ್ರಿಸ್ತನ ಶಿಲುಬೆಯು ನಿರರ್ಥಕವಾಗುವದು. 1 ಕೊರಿಂಥದವರಿಗೆ 1:17
  • ಆದರೆ ದೇವರು ಜ್ಞಾನಿಗಳನ್ನು ನಾಚಿಕೆಪಡಿಸುವದಕ್ಕಾಗಿ ಈ ಲೋಕದ ಬುದ್ಧಿಹೀನರನ್ನು ಆರಿಸಿಕೊಂಡಿದ್ದಾನೆ; ದೇವರು ಬಲಿಷ್ಟರನ್ನು ನಾಚಿಕೆಪಡಿಸುವದಕ್ಕಾಗಿ ಈ ಲೋಕದ ಬಲಹೀನರನ್ನು ಆರಿಸಿಕೊಂಡಿದ್ದಾನೆ; 28 ಇದಲ್ಲದೆ ದೇವರು ಇರುವವುಗಳನ್ನು ಇಲ್ಲದಂತಾಗಿ ಮಾಡುವ ಹಾಗೆ ಈ ಲೋಕದ ಹೀನವಾದವರನ್ನೂ ಅಸಡ್ಡೆಯಾದವರನ್ನೂ ಆರಿಸಿಕೊಂಡದ್ದಲ್ಲದೆ ಗಣನೆಗೆ ಬಾರದವರನ್ನೂ ಆರಿಸಿಕೊಂಡಿದ್ದಾನೆ. 29 ಹೀಗಿರಲು ಆತನ ಮುಂದೆ ಹೊಗಳಿಕೊಳ್ಳುವದಕ್ಕೆ ಯಾರಿಗೂ ಆಸ್ಪದವಿಲ್ಲ. 1 ಕೊರಿಂಥದವರಿಗೆ 1:27-29
  • ನನ್ನ ಬೋಧನೆಯಲ್ಲಿಯೂ ಪ್ರಸಂಗದಲ್ಲಿಯೂ ಮನವೊಲಿಸುವ ಮನುಷ್ಯಜ್ಞಾನ ವಾಕ್ಯಗಳನ್ನು ನಾನು ಪ್ರಯೋಗಿಸದೆ ಆತ್ಮನ ಬಲವನ್ನು ತೋರ್ಪಡಿಸುವ ವಾಕ್ಯಗಳನ್ನೇ ಪ್ರಯೋಗಿಸಿದೆನು. 1 ಕೊರಿಂಥದವರಿಗೆ 2:4